No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸತ್ಕಾರ್ಯ, ದಾನಧರ್ಮ ಎಂದಿಗೂ ಅಳಿಯುವುದಿಲ್ಲ: ಶತವಾಧಾನಿ ಡಾ. ಆರ್. ಗಣೇಶ್

kalpa News by kalpa News
July 30, 2026
in ಶಿವಮೊಗ್ಗ
0
Shivamogga Good Deeds Outlive Fame, Says Dr R Ganesh
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಲಕ್ರಮೇಣ ವೀರರು, ಶೂರರು ಹಾಗೂ ಜ್ಞಾನಿಗಳನ್ನು ಜನರು ಮರೆತುಬಿಡಬಹುದು. ಆದರೆ ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿ ಉತ್ತಮ ಕೊಡುಗೆ ನೀಡಿದ ವ್ಯಕ್ತಿಗಳು ಮಾತ್ರ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿಯುತ್ತಾರೆ ಎಂದು ಪದ್ಮಭೂಷಣ ಪುರಸ್ಕೃತ, ಬಹುಶ್ರುತ ವಿದ್ವಾಂಸ ಹಾಗೂ ಶತವಾಧಾನಿ ಡಾ. ಆರ್. ಗಣೇಶ್ ಶಿವಮೊಗ್ಗದಲ್ಲಿ (Shivamogga) ಅಭಿಪ್ರಾಯಪಟ್ಟರು.

ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಹಾಗೂ ಹಸೂಡಿ ವೆಂಕಟಶಾಸ್ತ್ರಿ ಕುಟುಂಬದ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಸೂಡಿ ವೆಂಕಟಶಾಸ್ತ್ರಿ ದತ್ತಿನಿಧಿ ಪುರಸ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

Also Read>> ಶಂಕರರು ಸೈನ್ಯ, ಸಂಪತ್ತುಗಳಿಲ್ಲದೇ ಧರ್ಮ ಸಂರಕ್ಷಿಸಿದರು | ರಾಮಚಂದ್ರಾಪುರ ಶ್ರೀ

ಹಸೂಡಿ ವೆಂಕಟಶಾಸ್ತ್ರಿಗಳು ನಿಧನ ಹೊಂದಿ ಹಲವು ದಶಕಗಳು ಕಳೆದರೂ, ಇಂದಿಗೂ ಅವರ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವುದು ಅವರು ಸಮಾಜಕ್ಕಾಗಿ ಮಾಡಿದ ಸೇವೆ ಹಾಗೂ ಸತ್ಕಾರ್ಯಗಳಿಗೆ ದೊರೆತ ಗೌರವದ ಪ್ರತೀಕವಾಗಿದೆ ಎಂದು ಹೇಳಿದರು.

ಸತ್ಕಾರ್ಯ ಎಂದಿಗೂ ಅಳಿಯುವುದಿಲ್ಲ

ಜ್ಞಾನಿಗಳು ಕಾಲಕ್ರಮೇಣ ತಾವು ಕಲಿತ ವಿದ್ಯೆಯನ್ನು ಮರೆಯಬಹುದು. ಆಳವಾಗಿ ಬೇರುಬಿಟ್ಟ ಮರ ಕೂಡ ಒಂದು ದಿನ ನೆಲಕ್ಕುರುಳಬಹುದು. ಸದಾ ತುಂಬಿ ಹರಿಯುವ ನದಿಯೂ ಒಂದು ಸಂದರ್ಭದಲ್ಲಿ ಬತ್ತಿಹೋಗಬಹುದು. ಆದರೆ ಸತ್ಕಾರ್ಯ, ದಾನಧರ್ಮ, ಭಗವಂತನ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳು ಎಂದಿಗೂ ಜನಮನದಿಂದ ಅಳಿದು ಹೋಗುವುದಿಲ್ಲ ಎಂದು ಡಾ. ಗಣೇಶ್ ಹೇಳಿದರು. Kumadvathi College Shikariura ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ‘ಪುಣ್ಯ’ ಎಂಬ ಪರಿಕಲ್ಪನೆಗೆ ಅಪಾರ ಮಹತ್ವವಿದೆ. ಧಾರ್ಮಿಕ ದೃಷ್ಟಿಯಿಂದಲೂ ಪುಣ್ಯಕ್ಕೆ ವಿಶೇಷ ಸ್ಥಾನಮಾನವಿದ್ದು, ದಾನ, ಧರ್ಮ ಹಾಗೂ ಸಮಾಜಮುಖಿ ಕಾರ್ಯಗಳಿಂದ ಪುಣ್ಯಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಅನಾದಿಕಾಲದಿಂದಲೂ ಮುಂದುವರಿದಿದೆ. ಈ ನಂಬಿಕೆಗೆ ಪುರಾಣಗಳಲ್ಲಿ ಉಲ್ಲೇಖವಾಗಿರುವ ಅನೇಕ ಘಟನೆಗಳು ಸಾಕ್ಷಿಯಾಗಿವೆ ಎಂದು ಅವರು ತಿಳಿಸಿದರು.

ಗುರುಪೂರ್ಣಿಮೆಯ ಮಹತ್ವ ವಿವರಿಸಿದ ಗಣೇಶ್

ನಮ್ಮ ಸಂಸ್ಕೃತಿಯ ಪ್ರತಿಯೊಂದು ಆಚರಣೆಯೂ ವಿಶೇಷ ಅರ್ಥವನ್ನು ಹೊಂದಿದೆ. ಅದರಲ್ಲೂ ಗುರುಪೂರ್ಣಿಮೆಗೆ ಅತ್ಯಂತ ಮಹತ್ವವಿದೆ ಎಂದು ಅವರು ಹೇಳಿದರು.

ವೇದವ್ಯಾಸರು ರಚಿಸಿದ ಗ್ರಂಥಗಳು ಭಾರತೀಯ ಸಂಸ್ಕೃತಿಯ ಅಡಿಪಾಯವಾಗಿದ್ದು, ಅವರು ಕಲಿತಿದ್ದ ನಾಲ್ಕು ವೇದಗಳನ್ನು ನಾಲ್ವರು ಶಿಷ್ಯರಿಗೆ ಬೋಧಿಸುವ ಮೂಲಕ ವೇದ ಪರಂಪರೆಯ ಉಳಿವು ಮತ್ತು ಬೆಳವಣಿಗೆಗೆ ಕಾರಣಕರ್ತರಾದರು. ಅದಕ್ಕಾಗಿ ಅವರ ಜನ್ಮದಿನವನ್ನು ಗುರುಪೂರ್ಣಿಮೆಯಾಗಿ ಆಚರಿಸಲಾಗುತ್ತಿದೆ ಎಂದು ವಿವರಿಸಿದರು.

ವೇದಾಂತದ ನಿರ್ಮಾಪಕರಾದ ವೇದವ್ಯಾಸರು ಐತಿಹಾಸಿಕ ಮಹಾಗ್ರಂಥ ಮಹಾಭಾರತವನ್ನು ರಚಿಸಿದ್ದು, 18 ಪುರಾಣಗಳಿಗೂ ಅವರೇ ಮೂಲಕರ್ತರು ಎಂಬುದು ಪೂರ್ವಿಕರ ನಂಬಿಕೆಯಾಗಿದೆ ಎಂದು ಹೇಳಿದರು.

Shivamogga : ಈ ಗೌರವ ಪೂರ್ವಜನ್ಮದ ಸುಕೃತ

ವೇದವ್ಯಾಸರ ಜಯಂತಿಯ ದಿನವೇ ಹಸೂಡಿ ವೆಂಕಟಶಾಸ್ತ್ರಿಗಳ ಹೆಸರಿನ ದತ್ತಿನಿಧಿ ಪುರಸ್ಕಾರ ನನಗೆ ಲಭಿಸಿರುವುದು ನನ್ನ ಪೂರ್ವಜನ್ಮದ ಸುಕೃತ ಎಂದು ಡಾ. ಆರ್. ಗಣೇಶ್ ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಸಿ. ನಟರಾಜ ಭಾಗವತ್ ವಹಿಸಿದ್ದರು.

ಕರ್ನಾಟಕ ಸಂಘದ ಅಧ್ಯಕ್ಷ ಹಾಗೂ ಹಸೂಡಿ ವೆಂಕಟಶಾಸ್ತ್ರಿಗಳ ಕುಟುಂಬದ ಸದಸ್ಯರಾದ ಪೊ. ಎಚ್.ಆರ್. ಶಂಕರನಾರಾಯಣ ಶಾಸ್ತ್ರಿ ಮತ್ತು ಎಚ್.ಆರ್. ಸುಬ್ರಹ್ಮಣ್ಯ ಶಾಸ್ತ್ರಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶೃಂಗೇರಿ ಶಾರದಾಪೀಠದ ಆಸ್ಥಾನ ಪಂಚಾಂಗಕರ್ತ ವೇ.ಬ್ರ. ಶ್ರೀ ತಟ್ಟುವಟ್ಟು ವಾಸುದೇವ ಜೋಯಿಸರು ಹಸೂಡಿ ವೆಂಕಟಶಾಸ್ತ್ರಿ ದತ್ತಿನಿಧಿಯನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಬ್ರಾಹ್ಮಣ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿ ಹಸೂಡಿ ವೆಂಕಟಶಾಸ್ತ್ರಿಗಳ ಸೇವೆಯನ್ನು ಸ್ಮರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   
Kalahamsa Infotech private limitedKalpa News Advertising Disclaimer

Tags: Hadudi KrishnashastriKannada News WebsiteLatest News KannadaShatavadhani GaneshShimogaShivamoggaShivamogga Newsಬ್ರಾಹ್ಮಣ ಮಹಾಸಭಾಶತವಾಧಾನಿ ಡಾ. ಆರ್. ಗಣೇಶ್ಶಿವಮೊಗ್ಗಹಸೂಡಿ ವೆಂಕಟಶಾಸ್ತ್ರಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

JSW Sports | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಕುಟುಂಬ ಸೇರಿದ ರಯಾನ್ ವಿಲಿಯಮ್ಸ್

Next Post

ಭಗವಂತನ ಸ್ವರೂಪವಾದ ವೇದವ್ಯಾಸರು ನಮಗೆಲ್ಲರಿಗೂ ಆದರ್ಶ: ಸುರೇಶ್ ಋಗ್ವೇದಿ

kalpa News

kalpa News

Next Post
ಭಗವಂತನ ಸ್ವರೂಪವಾದ ವೇದವ್ಯಾಸರು ನಮಗೆಲ್ಲರಿಗೂ ಆದರ್ಶ: ಸುರೇಶ್ ಋಗ್ವೇದಿ

ಭಗವಂತನ ಸ್ವರೂಪವಾದ ವೇದವ್ಯಾಸರು ನಮಗೆಲ್ಲರಿಗೂ ಆದರ್ಶ: ಸುರೇಶ್ ಋಗ್ವೇದಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL