No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸುಂದರ ಜೀವನ ಅನುಭವಿಸಲು ಉತ್ತಮ ಆರೋಗ್ಯ, ಅಭ್ಯಾಸಗಳು ಅವಶ್ಯ: ಕವಿರಾಜ್

ಅಂತರಾಷ್ಟ್ರೀಯ ಮಾದ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 27, 2022
in ಶಿವಮೊಗ್ಗ
0
ಸುಂದರ ಜೀವನ ಅನುಭವಿಸಲು ಉತ್ತಮ ಆರೋಗ್ಯ, ಅಭ್ಯಾಸಗಳು ಅವಶ್ಯ: ಕವಿರಾಜ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜೀವನ ತುಂಬಾ ಸುಂದರವಾಗಿದೆ. ಅದನ್ನು ಅನುಭವಿಸಲು ಉತ್ತಮ ಆರೋಗ್ಯ ಮತ್ತು ಅಭ್ಯಾಸಗಳು ಬೇಕು. ಈ ನಿಟ್ಟಿನಲ್ಲಿ ನಡೆದು ಸುಂದರ ಬದುಕನ್ನು ನಮ್ಮದಾಗಿಸಿಕೊಳ್ಳೋಣ ಎಂದು ಕನ್ನಡ ಚಲನಚಿತ್ರ ಸಾಹಿತಿ ಕವಿರಾಜ್ ಯಡೂರು Kaviraj ಯುವ ಸಮುದಾಯಕ್ಕೆ ಕರೆ ನೀಡಿದರು.

ಶಿವಮೊಗ್ಗ ಜಿಲ್ಲಾ ಪೊಲೀಸ್, ಕೌಶಲ್ಯಾಭಿವೃದ್ದಿ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ವಿಶ್ವವಿದ್ಯಾಲಯ, ನೆಹರು ಯುವ ಕೇಂದ್ರ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಾದ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಡೀ ಸಮಾಜ ಒಗ್ಗೂಡಿ ಎದುರಿಸಬಹುದಾದಂತಹ ಆಪತ್ತು ಮಾದಕ ವ್ಯಸನ. ಪ್ರಸ್ತುತ ಶೇ.30 ರಷ್ಟು ಯುವಜನತೆ ಮಾದಕ ವ್ಯಸನಕ್ಕೆ ತುತ್ತಾಗಿರುವ ಅಂಕಿಅಂಶ ಆಘಾತಕಾರಿಯಾಗಿದ್ದು, ಇದನ್ನು ತಡೆಯುವುದು ಅತ್ಯವಶ್ಯ. ಚಿಕಿತ್ಸೆಗಿಂತ ರೋಗ ಬಾರದಂತೆ ತಡೆಯುವುದು ಮುಖ್ಯ ಎಂಬಂತೆ ಯುವಜನತೆ ವಿವಿಧ ಮಾದಕ ದ್ರವ್ಯಗಳಿಗೆ ವ್ಯಸನಿಗಳಾಗದಂತೆ ಸಮುದಾಯದಲ್ಲಿ ಜಾಗೃತಿ ಹೆಚ್ಚಬೇಕು.
ಮಕ್ಕಳು ಅಥವಾ ಯುವ ಜನತೆ ಮಾಡುವ ಕೆಲಸಗಳು ಅವರ ತಂದೆ ತಾಯಿ, ಕುಟುಂಬಕ್ಕೆ ಒಳ್ಳೆಯ ಅಥವಾ ಕೆಟ್ಟ ಹೆಸರನ್ನು ತಂದು ಕೊಡುತ್ತದೆ. ಮೊದಲಿಗೆ ಮಾದಕ ಚಟಗಳು ಸ್ವರ್ಗದಂತೆ ಕಂಡರೂ ಹಂತ ಹಂತವಾಗಿ ವ್ಯಸನಿಯನ್ನು ಇದು ನರಕಕ್ಕೆ ತಳ್ಳುತ್ತದೆ. ಆದ್ದರಿಂದ ಯುವಜನತೆ ಯಾವುದೇ ದುಶ್ಚಟಗಳಿಗೆ ದಾಸರಾಗದೇ, ಜವಾಬ್ದಾರಿಯುತವಾಗಿ ನಡೆದುಕೊಂಡು ಪೋಷಕರಿಗೆ ಒಳ್ಳೆಯ ಹೆಸರನ್ನು ತರಬೇಕು. ಸಂಗೀತ, ಓದು, ಜ್ಞಾನ, ಗೆಳತನದಂತಹ ಉತ್ತಮ ಚಟಗಳನ್ನು ಬೆಳೆಸಿಕೊಳ್ಳಬೇಕು ಎಂದರು.

Also read: ಪತ್ರಕರ್ತರು ಜನಪತ್ರಿನಿಧಿಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ : ಸಂಸದ ರಾಘವೇಂದ್ರ

ಗೆಳೆಯರಲ್ಲಿ ಯಾರಾದರೂ ಒಬ್ಬರು ಸಿಗರೇಟ್, ಕುಡಿತ ಅಥವಾ ಗಾಂಜಾ ಇತರೆ ಡ್ರಗ್ಸ್‍ಗೆ ಒಳಗಾಗುತ್ತಿದ್ದಾರೆಂಬ ಸುಳಿವು ಸಿಕ್ಕಲ್ಲಿ ಅವರ ತಂದೆ, ತಾಯಿ ಅಥವಾ ಅವರ ಪ್ರಾಥಮಿಕ ಸಂಪರ್ಕಿತರಿಗೆ ತಿಳಿಸುವ ಮೂಲಕ ಗೆಳಯನ ಜೀವನ ಉಳಿಸಲು ಸಹಾಯ ಮಾಡಬೇಕು. ಜೀವನದಲ್ಲಿ ದೊಡ್ಡದಾಗಿ ಸಾಧಿಸಿದರೆ ಮಾತ್ರ ಸಾಧನೆಯಲ್ಲ. ಉತ್ತಮ ಜೀವನ ನಿರ್ವಹಣೆ ಕೂಡ ಒಂದು ದೊಡ್ಡ ಸಾಧನೆಯಾಗಿದ್ದು ಮಕ್ಕಳು ಯಾವುದೇ ದುಶ್ಚಟಕ್ಕೆ ಬಲಿಯಾಗದೇ ಬದುಕನ್ನು ಸುಂದರವಾಗಿಸಿಕೊಳ್ಳಬೇಕೆಂದರು.
ಮನೋವೈದ್ಯರಾದ ಡಾ. ಎಸ್.ಟಿ. ಅರವಿಂದ್ ಮಾತನಾಡಿ, ಮಾದಕ ವ್ಯಸನ ಎಂದರೇನು, ಯಾವೆಲ್ಲ ರೀತಿಯ ಮಾದಕ ವಸ್ತುಗಳನ್ನು ವ್ಯಸನಕ್ಕೆ ಬಳಸಲಾಗುತ್ತಿದೆ, ಮಾದಕ ವಸ್ತುಗಳ ಬಳಕೆ ನಿಧಾನವಾಗಿ ಆರಂಭವಾಗಿ ನಂತರ ವ್ಯಸನವಾಗಿ ಹೇಗೆ ಪರಿವರ್ತನೆಯಾಗುತ್ತದೆ ಎಂದು ವಿವರಿಸಿದ ಅವರು ಮಾದಕ ವ್ಯಸನವನ್ನು ಒಂದೇ ಬಾರಿಗೆ ಬಿಡಿಸಲು ಬರುವುದಿಲ್ಲ. ಅದು ರೋಗಿಗೆ ಮಾರಕ ಕೂಡ. ಆದ್ದರಿಂದ ಸರಿಯಾದ ಮನೋವೈದ್ಯಕೀಯ ಚಿಕಿತ್ಸೆ ಮತ್ತು ಆಪ್ತಸಮಾಲೋಚನೆಯಿಂದ ವ್ಯಸನಮುಕ್ತಗೊಳಿಸಬಹುದು. ವ್ಯಸನ ಬಿಟ್ಟ ನಂತರ ಕೂಡ ಅನುಸರಣೆ ತುಂಬಾ ಮುಖ್ಯವಾಗುತ್ತದೆ. ವ್ಯಸನಿಗಳಿಗೆ ಮಾನಸಿಕ ಚಿಕಿತ್ಸೆಯ ಅಗತ್ಯ ತುಂಬಾ ಇದ್ದು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಡಿ-ಅಡಿಕ್ಷನ್ ಚಿಕಿತ್ಸೆ ಲಭ್ಯವಿರುವ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್  ಮಾತನಾಡಿ, ಯುವಪೀಳಿಗೆಯನ್ನು ಅತಿ ವೇಗವಾಗಿ ಸೆಳೆಯುತ್ತಿರುವ ಸಮಸ್ಯೆಗಳಲ್ಲಿ ಮಾದಕ ವ್ಯಸನ ಪ್ರಮುಖವಾಗಿದ್ದು, ಇದರ ದುಷ್ಪರಿಣಾಮವನ್ನು ಎಲ್ಲರೂ ಅರಿಯಬೇಕೆಂದು ಒಂದು ಕಥೆ ಮೂಲಕ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಮಾದಕ ವ್ಯಸನದ ದುಷ್ಪರಿಣಾಮದಿಂದ ವಸ್ಯನಿ ಮಾತ್ರವಲ್ಲದೆ ಅವರ ತಂದೆ ತಾಯಿ, ಕುಟುಂಬ ಸೇರಿದಂತೆ ಇಡೀ ಸಮುದಾಯವೇ ನೋವು ಅನುಭವಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು, ಯುವಜನತೆ ಇದರಿಂದ ದೂರವಿರಬೇಕು. ಗೆಳೆಯರು ಮಾದಕ ವಸ್ತುಗಳ ಬಳಕೆ ಮಾಡುವಂತೆ ಹೇಳಿದರೆ, ಒತ್ತಾಯಿಸಿದರೆ ದೃಢವಾಗಿ ಅಲ್ಲಗಳೆಯಬೇಕು. ಗೆಳೆಯರು ಕೂಡ ತಮ್ಮಲ್ಲಿ ಯಾರಾದರೊಬ್ಬರು ಮಾದಕ ವ್ಯಸನಕ್ಕೆ ತುತ್ತಾಗುವುದು ಕಂಡು ಬಂದಲ್ಲಿ ದೊಡ್ಡವರಿಗೆ ತಿಳಿಸಬೇಕು. ಯುವಜನತೆಯೇ ಸಂದೇಶಕಾರರಾಗಿ ಉತ್ತಮ ಸಂದೇಶವನ್ನು ನೀಡಬೇಕು. ಸಮುದಾಯದಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂದರು.
ಜಿಲ್ಲೆಯಲ್ಲಿ ಮಾದಕ ವ್ಯಸನ ತಡೆಯುವ ನಿಟ್ಟಿನಲ್ಲಿ ಮಾದಕ ವ್ಯಸಕ ಕುರಿತು ಜಾಗೃತಿ ಮೂಡಿಸಲು 100 ಜನ ಯುವ ಸ್ವಯಂಸೇವಕರ ತಂಡ ಸಿದ್ದವಾಗಿದೆ. ಈ ತಂಡಕ್ಕೆ ಇಂದು ಚಾಲನೆ ನೀಡಲಾಗುವುದು. ಹಾಗೂ ಅವರಿಗೆ ತರಬೇತಿ ಸಹ ನೀಡಲಾಗುವುದು. ಆಸಕ್ತಿ ಇರುವ ಸ್ವಯಂ ಸೇವಕರು ಈ ತಂಡಕ್ಕೆ ಸೇರಬಹುದು ಎಂದು ಹೇಳಿದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ರೇಖಾ ಗಿರೀಶ್ ಮಾತನಾಡಿ, ಹೆಣ್ಣುಮಕ್ಕಳು ಸುರಕ್ಷಿತವಾಗಿ ಇರುವ ಬಗ್ಗೆ, ಸುರಕ್ಷಿತ ಮೊಬೈಲ್ ಬಳಕೆ ಹಾಗೂ ಮಕ್ಕಳ ಸಹಾಯವಾಣಿ ಸಂಖ್ಯೆ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಾದಕ ವ್ಯಸನ ತಡೆ ಕುರಿತಾದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಹಾಗೂ ತಾಲ್ಲೂಕು ಮಟ್ಟದಲ್ಲಿ ಮಾದಕ ವ್ಯಸನ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕುವೆಂಪು ವಿವಿ ಎನ್‍ಎಸ್‍ಎಸ್ ಕಾರ್ಯಕ್ರಮ ಸಂಯೋಜಕ ಡಾ.ನಾಗರಾಜ್ ಪರಿಸರ, ಕೌಶಲ್ಯಾಭಿವೃದ್ದಿ ಅಧಿಕಾರಿ ಹೆಚ್.ಎಂ.ಸುರೇಶ್, ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆಟಿಕೆ, ಅಮೃತ್ ನೋನಿ ಆಯುರ್ವೇದಿಕ್ ಔಷಧಿ ವಿತರಕ ಡಾ.ಶ್ರೀನಿವಾಸ್, ವಿದ್ಯಾರ್ಥಿಗಳು ಹಾಜರಿದ್ದರು. ಸಾಗರ ಉಪವಿಭಾಗದ ಡಿವೈಎಸ್‍ಪಿ ರೋಹನ್ ಜಗದೀಶ್ ಸ್ವಾಗತಿಸಿದರು, ಸಮನ್ವಯ ಕಾಶಿ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKavirajLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಕವಿರಾಜ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಪತ್ರಕರ್ತರು ಜನಪತ್ರಿನಿಧಿಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ : ಸಂಸದ ರಾಘವೇಂದ್ರ

Next Post

ವಿದ್ಯುತ್ ಕಂಪೆನಿಗಳ ಅಭಿವೃದ್ದಿಗಾಗಿ ಏಕಸದಸ್ಯ ಸಮಿತಿ ಅವಧಿ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ವಿದ್ಯುತ್ ಕಂಪೆನಿಗಳ ಅಭಿವೃದ್ದಿಗಾಗಿ ಏಕಸದಸ್ಯ ಸಮಿತಿ ಅವಧಿ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

March 28, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
ಸೊರಬ | ಮಾ.30ರಂದು ರಂಗನಾಥಸ್ವಾಮಿ ದೇವರ ನೂತನ ರಥ ಲೋಕಾರ್ಪಣೆ

ಸೊರಬ | ಮಾ.30ರಂದು ರಂಗನಾಥಸ್ವಾಮಿ ದೇವರ ನೂತನ ರಥ ಲೋಕಾರ್ಪಣೆ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL