ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಮಾಡಿರುವ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರವೇ ಪೊಲೀಸರು ಅವರನ್ನು ಬಂಧಿಸಲಿದ್ದು, ದುಷ್ಕರ್ಮಿಗಳ ಹೆಡೆಮುರಿ ಕಟ್ಟುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ #Home Minister Araga Gnanendra ಹೇಳಿದ್ದಾರೆ.
Also Read: ಮುಸ್ಲಿಂ ಗೂಂಡಾಗಳಿಂದ ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ: ಸಚಿವ ಈಶ್ವರಪ್ಪ ಆರೋಪ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐವರು ಈ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿಯಿದೆ. ಆರೋಪಿಗಳ ಸುಳಿವು ದೊರೆಕಿದ್ದು, ಶೀಘ್ರವೇ ನಮ್ಮ ಪೊಲೀಸರು ಅವರನ್ನು ಬಂಧಿಸಲಿದ್ದಾರೆ ಎಂದರು.
ಹರ್ಷನ ಕುಟುಂಬಕ್ಕೆ ಪರಿಹಾರ ನೀಡುವ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದರು.
Also Read: ಭದ್ರಾವತಿಯಲ್ಲೂ ಎರಡು ದಿನ ನಿಷೇಧಾಜ್ಞೆ: ಇಂದು ಶಾಲಾಗಳಿಗೆ ರಜೆ ಘೋಷಣೆ
ಭಾವನಾತ್ಮಕವಾಗಿ ಪ್ರತಿಕ್ರಿಯಿಸದೇ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಘಟನೆ ಹಿನ್ನೆಲೆಯಲ್ಲಿ ನಿನ್ನೆ ನಗರದ ಕೆಲವು ಪ್ರದೇಶಗಳಲ್ಲಿ ಅಹಿತಕರ ಘಟನೆ ನಡೆದಿದೆ. ಆದರೆ, ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post