ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸರ್ಕಾರಿ/ಅರೆ ಸರ್ಕಾರಿ ನೌಕರರಿಗಾಗಿ ಏ.29ರಿಂದ ಭದ್ರಾವತಿ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ, ಹೊಸನಗರ ತಾಲೂಕಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಿಂದ ಬೆಳಿಗ್ಗೆ 8:30ಕ್ಕೆ ಸರಿಯಾಗಿ ಬಸ್ ಹೊರಡಲಿದ್ದು, ಮೇಲ್ಕಂಡ ತಾಲ್ಲೂಕುಗಳಲ್ಲಿ ಕರ್ತವ್ಯ ನಿರ್ವಹಿಸುವ ವಿವಿಧ ಇಲಾಖೆಯ ನೌಕರರು ಇದರ ಸದುಪಯೋಗವನ್ನು ಪಡೆದುಕೊಳ್ಳಲು ತಿಳಿಸಲಾಗಿದೆ.
ಷರತ್ತುಗಳು:
ಬಸ್‌ನಲ್ಲಿ ಪ್ರಯಾಣಿಸುವ ನೌಕರರುಗಳು ಕಡ್ಡಾಯವಾಗಿ ತಮ್ಮ ಕಛೇರಿಯಿಂದ ನೀಡಿರುವ ಐಡಿ ಕಾರ್ಡ್ ಧರಿಸಿಕೊಂಡು ಪ್ರಯಾಣಿಸುವುದು.
ಸರ್ಕಾರಿ/ಅರೆ ಸರ್ಕಾರಿ ನೌಕರರು ಮಾತ್ರ ಪ್ರಯಾಣಿಸಬಹುದಾಗಿರುತ್ತದೆ.
ಪ್ರಯಾಣಿಸುವ ಎಲ್ಲಾ ನೌಕರರೂ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳತಕ್ಕದ್ದು. ಹಾಗೂ ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸುವ ಕೋವಿಡ್-19 ನಿಯಮಾವಳಿಗಳನ್ನು ಪಾಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಐ.ಪಿ. ಶಾಂತರಾಜ್ (ಮೊ: 7760022285) ಹಾಗೂ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ (ಮೊ:7760990464) ಅವರನ್ನು ಸಂಪರ್ಕಿಸುವುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post