ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ನಿನ್ನೆ ರಾತ್ರಿಯಿಂದಲೇ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸ್ಥಗಿತವಾಗಿರುವುದರಿಂದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ಉಂಟಾಗಿದೆ.
ನಗರ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳು ಸಂಚಾರ ಆರಂಭಿಸಿದ್ದು, ಈಗಾಗಲೇ ಖಾಸಗಿ ಬಸ್‌ಗಳ ಸಹಾಯ ಪಡೆದುಕೊಂಡ ಜಿಲ್ಲಾಡಳಿತ ಬಸ್ ನಿಲ್ದಾಣದ ಒಳಗೂ ಸಂಚರಿಸುವಂತೆ ಅನುಮತಿ ನೀಡಲಾಗಿದೆ ಎನ್ನಲಾಗಿದೆ.
ವಿಭಾಗೀಯ ಸಾರಿಗೆ ಸಂಚಾರ ಅಧಿಕಾರಿ ಸತೀಶ್ ಮಾತನಾಡಿ, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗದ ಕಾರಣ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಘಟಕದ ಎಲ್ಲಾ ಸಾರಿಗೆ ಸಿಬ್ಬಂದಿಗಳಿಗೆ ಕರ್ತವ್ಯಕ್ಜೆ ಹಾಜರಾಗಲು ಮನವಿ ಮಾಡಿಕೊಳ್ಳಲಾಗಿದೆ. ಆದರೆ ಇದುವರೆಗೂ ಯಾರು ಬಂದಿಲ್ಲ ಎಂದು ಹೇಳಿದರು.
ಶಿವಮೊಗ್ಗ ಕೆಎಸ್‌ಆರ್‌ಟಿಸಿ ವಿಭಾಗದಿಂದ 321 ಬಸ್ ಗಳು ಸಂಚರಿಸುತ್ತಿದ್ದವು. 1100 ಚಾಲಕ ಮತ್ತು ನಿರ್ವಾಹಕರಿದ್ದಾರೆ. ಬೆಳಿಗ್ಗೆ 6 ಗಂಟೆಗೆ 10 ಬಸ್‌ಗಳು ನಗರದಲ್ಲಿ ಸಂಚರಿಸಬೇಕಿತ್ತು. ಆದರೆ ಯಾವ ಬಸ್‌ಗಳು ರಸ್ತೆಗಿಳಿದಿಲ್ಲ. ಆದರೆ ನೌಕರರು ಕರ್ತವ್ಯಕ್ಕೆ ಹಾಜರಾಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post