No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Monday, June 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಡಿಕೆ ಬೆಳೆಗಾರರ ಹಿತಕಾಯಲು ಸರ್ಕಾರ ಕ್ರಮ ಕೈಗೊಳ್ಳಲಿ: ಆರಗ ಜ್ಞಾನೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 3, 2025
in ಶಿವಮೊಗ್ಗ
0
ಅಡಿಕೆ ಬೆಳೆಗಾರರ ಹಿತಕಾಯಲು ಸರ್ಕಾರ ಕ್ರಮ ಕೈಗೊಳ್ಳಲಿ: ಆರಗ ಜ್ಞಾನೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಳೆದ ಸಾಲಿನಲ್ಲಿ ಅತಿವೃಷ್ಟಿಯಿಂದ ಕೊಳೆರೋಗ ಹಾಗೂ ಎಲೆಚುಕ್ಕೆ ರೋಗಗಳಿಂದ ಅಡಿಕೆ ಬೆಳೆಗಾರರು ತತ್ತರಿಸಿ ಹೋಗಿದ್ದು, ತಕ್ಷಣ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಡಿಕೆ ಬೆಳೆಗಾರರ ಹಿತಕಾಯಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಡಿಕೆ ಸಹಕಾರ ಸಂಘಗಳ ಸಹಕಾರ ಮಹಾಮಂಡಳದ ಅಧ್ಯಕ್ಷ ಹಾಗೂ ಶಾಸಕ ಆರಗ ಜ್ಞಾನೇಂದ್ರ #Araga Gnanendra ಒತ್ತಾಯಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಡಿಕೆ ಬೆಲೆ ಏರಿಕೆ ಬೆಳೆಗಾರರು ಅಡಿಕೆಯತ್ತ ಆಕರ್ಷಿಸಲು ಕಾರಣವಾಗಿದೆ.  ಆದರೆ ಅಡಿಕೆ ಬೆಳೆಗೆ ಬಾಧಿಸುತ್ತಿರುವ ರೋಗಗಳಿಂದ ಹಿಡುವಳಿ ಕಡಿಮೆಯಾಗಿ ಏರಿದ ದರಗಳು ಬೆಳೆಗಾರರ ಕೈಗೆ ಸಿಗುತ್ತಿಲ್ಲ. ವಿದೇಶಿ ಕಳಪೆ ಅಡಿಕೆಗಳ ಆಮದು ಕೂಡ ಬೆಳೆಗಾರರಿಗೆ ಸಂಕಷ್ಟ ನೀಡುತ್ತಿದೆ. ಆಹಾರ ಭದ್ರತಾ ಆಯೋಗವು ಅಡಿಕೆ ತೇವಾಂಶದ ಬಗ್ಗೆ %7ರಷ್ಟು ತೇವಾಂಶ ಇರಬೇಕು ಎಂದು ತಪ್ಪು ಮಾಹಿತಿ ನೀಡಿದೆ. ಆದರೆ ಈ ಪ್ರಮಾಣವನ್ನು ಶೇ.11.25ಕ್ಕೆ ಏರಿಸಬೇಕು ಎಂಬುದು ತಮ್ಮ ಆಗ್ರಹವಾಗಿದೆ ಎಂದರು.
ಈ ಹಿಂದಿನ ಯುಪಿಎ ಸರ್ಕಾರ ಅಡಿಕೆ ಕ್ಯಾನ್ಸರ್‍ಕಾರಕವಾಗಿದೆ ಎಂದು ಸರ್ವೋಚ್ಛ ನ್ಯಾಯಾಲಯಕ್ಕೆ ತಿಳಿಸಿತ್ತು. ಈಗ ಅಡಿಕೆ  ಮನುಷ್ಯನಿಗೆ ಹಾನಿಕಾರಕವಲ್ಲ ಎಂದು ಕೇಂದ್ರ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಅಫಿಡೆವಿಟ್ ಸಲ್ಲಿಸಿದೆ. ಅಡಿಕೆ ಹಾನಿಕಾರಕವಲ್ಲ ಎಂದು ರುಜುವಾತು ಮಾಡಲು ಅಡಿಕೆ ಸಂಶೋಧನಾ ಕೇಂದ್ರಗಳು ಕೆಲಸ ನಿರ್ವಹಿಸುತ್ತಿವೆ. ಕೇಂದ್ರ ಸರ್ಕಾರ ಈಗಾಗಲೇ ಅಡಿಕೆ ಸಂಶೋಧನಾ ಕೇಂದ್ರಕ್ಕೆ 15 ಲಕ್ಷ ರೂ. ಅನುದಾನ ನೀಡಿದೆ. ಅಡಿಕೆಯನ್ನು ಅರಣ್ಯ ಉತ್ಪನ್ನಗಳ ಪಟ್ಟಿಗೆ ಸೇರಿಸಿದ್ದು, ಅದನ್ನು ಆ ಪಟ್ಟಿಯಿಂದ ಕೈಬಿಡಬೇಕು ಎಂದು ಕೇಂದ್ರ ಕೃಷಿ ಸಚಿವರನ್ನು ಕೋರಲಾಗಿದೆ ಎಂದರು.

ಕೇಂದ್ರದ ಮಹತ್ವಾಕಾಂಕ್ಷಿ ಬೆಳೆವಿಮೆ ಯೋಜನೆಗೆ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ಅವರು,  ಮಳೆಮಾಪನ ಯಂತ್ರಗಳನ್ನು ಸರಿಯಾಗಿ ನಿರ್ವಹಣೆ ಮಾಡದೇ ಮನಸ್ಸಿಗೆ ಬಂದಂತೆ ಮಳೆಯ ವರದಿಯನ್ನು ಕೊಡುತ್ತಿರುವುದೂ ಬೆಳೆಗಾರರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಸರ್ಕಾರದ ಬೇಜವಾಬ್ದಾರಿಯಿಂದ ರೈತರು ಸಂಕಷ್ಟಕ್ಕಿಡಾಗಿದ್ದಾರೆ. ಎಲೆಚುಕ್ಕೆ ರೋಗದ ಸಂಶೋಧನೆಗೆ ಕೇಂದ್ರ ಸರ್ಕಾರ ತಾಂತ್ರಿಕ ಸಮಿತಿ ರಚಿಸಿದೆ. ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಸದಸ್ಯರು ಲೋಕಸಭೆಯಲ್ಲಿ ಈ ಕುರಿತು ಈ ಬಾರಿಯ ಅಧಿವೇಶನದಲ್ಲಿ ಹೆಚ್ಚಿನ ರೀತಿಯಲ್ಲಿ ಚರ್ಚಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಅಲ್ಲದೆ ಕೇಂದ್ರ ಸರ್ಕಾರ ಅಡಿಕೆ ಸಂಶೋಧನೆಗೆ ಮಂಗಳೂರಿನ ಕೆಎಂಸಿ ಆಸ್ಪತ್ರೆ ಮೂಲಕ ಸಂಶೋಧನೆಗೆ ಒತ್ತು ನೀಡಿರುವುದು ರೈತರಲ್ಲಿ ಆಶಾಭಾವನೆ ಉಂಟುಮಾಡಿದೆ ಎಂದರು.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಶೃಂಗೇರಿಗಳಲ್ಲಿ ಅಡಿಕೆ ಸಂಶೋಧನಾ ಕೇಂದ್ರಗಳು ರಾಜ್ಯ ಸರ್ಕಾರದ ಅನುದಾನವಿಲ್ಲದೆ ಕೆಲಸ ಸ್ಥಗಿತಗೊಳಿಸಿದ್ದು ವಿಷಾಧನೀಯ ಎಂದ ಅವರು, ತೀರ್ಥಹಳ್ಳಿ, ಹೊಸನಗರ, ಸಾಗರದ ಕೆಲವು ಭಾಗಗಳು, ಉತ್ತರ ಕನ್ನಡದ ಸಿದ್ಧಾಪುರ ತಾಲ್ಲೂಕುಗಳಲ್ಲಿ ಅಡಿಕೆಗೆ ಎಲೆಚುಕ್ಕೆ ರೋಗಗಳಿಂದ ರೈತರು ತತ್ತರಿಸಿ ಹೋಗಿದ್ದಾರೆ. ಸಿಎಂ ಸಿದ್ಧರಾಮಯ್ಯ ಅಡಿಕೆ ಬೆಳೆಗಾರರಿಗೆ ಪರಿಹಾರಕ್ಕಾಗಿ ಬಜೆಟ್‍ನಲ್ಲಿ 62 ಕೋಟಿ ರೂ. ಪ್ರಕಟಿಸಿದ್ದರೂ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ಸಚಿವ ಮಧುಬಂಗಾರಪ್ಪ ತಂದೆಯ ಆದರ್ಶ ಪಾಲಿಸಲಿ

ಸಚಿವ ಮಧುಬಂಗಾರಪ್ಪ ಅವರಿಗೆ ಅವರ ತಂದೆಯ ಯೋಗ್ಯತೆ ಬಂದಿಲ್ಲ. ಮೊದಲು ಅವರು ತಂದೆಯ ಆದರ್ಶಗಳನ್ನು ಪಾಲಿಸುವುದನ್ನು ಕಲಿಯಲಿ ಎಂದು ಶಾಸಕ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.
ಮಧುಬಂಗಾರಪ್ಪನವರು ತಮ್ಮ ವಿರುದ್ಧ ಮಾತನಾಡಿದ ಟೀಕೆಗೆ ಉತ್ತರಿಸಿದ ಅವರು, ತಂದೆಯ ಹೆಸರಿನ ಬಲದಿಂದ ರಾಜಕಾರಣಕ್ಕೆ ಬಂದವರು. ಆದರೆ ತಂದೆಯ ನಡವಳಿಕೆ ಅವರಲ್ಲಿ ಬರಲಿಲ್ಲ. ಅವರ ಅಂತಸ್ತಿನಲ್ಲೇ ಮಾತನಾಡಬೇಕಿತ್ತು. ನಾನೇನು ಅವರ ಟೀಕೆಗೆ ಪ್ರತಿಕ್ರಯಿಸಲ್ಲ. ಮಧು ಬಂಗಾರಪ್ಪನವರ ರಕ್ತದಲ್ಲೇ ರಾಜಕಾರಣ ಬಂದಿದೆ. ನಾವೆಲ್ಲಾ ಸೊನ್ನೆಯಿಂದ ರಾಜಕಾರಣಕ್ಕೆ ಬಂದವರು. ಅತ್ಯಂತ ಕೀಳುಮಟ್ಟದ ಟೀಕೆಗೆ ರಾಜಕಾರಣಿಗಳು ಇಳಿಯಬಾರದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕರುಗಳಾದ ಸೂರ್ಯನಾರಾಯಣ ಕೆ.ಎಂ., ಛದ್ಮಹಾಲಪ್ಪ, ಬಿ.ಕೆ. ಶಿವಕುಮಾರ್, ಸುಬ್ರಹ್ಮಣ್ಯ ಯಡಗೆರೆ, ಗೋಪಾಲಕೃಷ್ಣ ವೈದ್ಯ, ಮಹೇಶ್ ಹೆಚ್.ಎಲ್., ಶಂಭುಲಿಂಗ ಹೆಗಡೆ, ಶಿವಶಂಕರ್ ಹೆಚ್.ಎಸ್., ಷಡಾಕ್ಷರಿ, ಗುರಪ್ಪ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Araga GnanendraKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಆರಗ ಜ್ಞಾನೇಂದ್ರಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿ.6ರಂದು ವಿವಿಧ ಕಾಮಗಾರಿಗಳಿಗೆ ಚಾಲನೆ | ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ

Next Post

ಗಮನಿಸಿ! ಈ ದಿನಗಳಂದು ಬೆಂಗಳೂರು, ಅಶೋಕಪುರಂ, ಚೆನ್ನೈನ ಈ ರೈಲುಗಳ ಸಂಚಾರ ರದ್ದು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
SWR to Run Special Train Services Between Bengaluru, Belagavi and Mysuru

ಗಮನಿಸಿ! ಈ ದಿನಗಳಂದು ಬೆಂಗಳೂರು, ಅಶೋಕಪುರಂ, ಚೆನ್ನೈನ ಈ ರೈಲುಗಳ ಸಂಚಾರ ರದ್ದು

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL