No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಕುವೆಂಪು ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಸಂಭ್ರಮ

kalpa News by kalpa News
May 6, 2026
in ಶಿವಮೊಗ್ಗ
0
ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿಕ್ಷಣವು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿದಾಗ ಮಾತ್ರ ಅದು ಸಾರ್ಥಕವಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ Governor Thaawarchand Gehlot ತಿಳಿಸಿದರು.

ಕುವೆಂಪು ವಿಶ್ವವಿದ್ಯಾಲಯದಲ್ಲಿ‌ Kuvempu University ಬುಧವಾರ ಏರ್ಪಡಿಸಲಾಗಿದ್ದ 35ನೇ ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳೇಸೋಲುಗಳು ಜೀವನದ ಭಾಗ, ಆದರೆ ಅವುಗಳಿಂದ ಕಲಿತು ಮುಂದೆ ಸಾಗುವುದೇ ನಿಜವಾದ ಯಶಸ್ಸು ಎಂಬುದನ್ನು ನೆನಪಿಡಿ ಎಂದರು.
ಇಂದಿನ ಈ ಸಂದರ್ಭವು ನಿಮ್ಮ ವರ್ಷಗಳ ಪರಿಶ್ರಮದ ಫಲವಾಗಿದೆ. ಇಂದು ನೀವು ಪಡೆಯುತ್ತಿರುವ ಪದವಿಯು ಕೇವಲ ಜ್ಞಾನದ ಸಂಕೇತವಲ್ಲ, ಸಮಾಜಕ್ಕೆ ಉತ್ತಮ ದಿಕ್ಕು ನೀಡಬಲ್ಲ ನಿಮ್ಮಲ್ಲಿರುವ ಸಾಮರ್ಥ್ಯದ ಪ್ರತೀಕವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಪೋಷಕರು ಮತ್ತು ಶಿಕ್ಷಕರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮ ಮಾರ್ಗದರ್ಶನ ಮತ್ತು ಬೆಂಬಲವಿಲ್ಲದೆ ಈ ಸಾಧನೆ ಸಾಧ್ಯವಿರಲಿಲ್ಲ. ನೀವು ನೀಡಿದ ಸಂಸ್ಕಾರ ಮತ್ತು ಮೌಲ್ಯಗಳೇ ಜೀವನದಲ್ಲಿ ಯಶಸ್ಸು ತಂದುಕೊಡಲಿವೆ. ಇಂದು ನೀವು ಜ್ಞಾನದ ದೇಗುಲದಿಂದ ಹೊರಬಂದು ಕರ್ಮಕ್ಷೇತ್ರಕ್ಕೆ ಪ್ರವೇಶಿಸುತ್ತಿದ್ದೀರಿ. ಇಲ್ಲಿ ಪಡೆದ ಶಿಕ್ಷಣವು ನಿಮ್ಮ ವೃತ್ತಿಜೀವನವನ್ನು ಯಶಸ್ವಿಗೊಳಿಸುವುದಲ್ಲದೆ, ಜೀವನವನ್ನು ಸಾರ್ಥಕಗೊಳಿಸಲು ಸಹಕಾರಿಯಾಗಲಿದೆ ಎಂಬ ನಂಬಿಕೆ ನನಗಿದೆ ಎಂದರು.

ಕುವೆಂಪು ಅವರ “ವಿಶ್ವಮಾನವ” ಆದರ್ಶ ಮತ್ತು “ಮಾನವತಾವಾದವೇ ಶ್ರೇಷ್ಠತೆಯ ಮಾನದಂಡ” ಎಂಬ ಸಂದೇಶವು ನಮ್ಮ ಆಲೋಚನೆಗಳ ಗಡಿಗಳಿಗೆ ಸೀಮಿತವಾಗದೆ ವಿಶಾಲವಾಗಿರಬೇಕು ಎಂದು ಕಲಿಸುತ್ತದೆ. ನೀವು ಜೀವನದ ಮುಂದಿನ ಹಂತಕ್ಕೆ ಕಾಲಿಡುತ್ತಿರುವಾಗ ಈ ವಿಚಾರಗಳು ನಿಮಗೆ ದಾರಿದೀಪವಾಗಲಿ ಎಂದರು.
ಜೀವನದಲ್ಲಿ ಯಶಸ್ಸಿಗಾಗಿ ನಿರಂತರ ಪರಿಶ್ರಮ, ಶಿಸ್ತು ಮತ್ತು ಸಕಾರಾತ್ಮಕ ದೃಷ್ಟಿಕೋನ ಅತ್ಯಗತ್ಯ. ಸೋಲುಗಳು ಜೀವನದ ಭಾಗ, ಆದರೆ ಅವುಗಳಿಂದ ಕಲಿತು ಮುಂದೆ ಸಾಗುವುದೇ ನಿಜವಾದ ಯಶಸ್ಸು. ನಿಮ್ಮ ಶಿಕ್ಷಣವು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿದಾಗ ಮಾತ್ರ ಅದು ಸಾರ್ಥಕವಾಗುತ್ತದೆ ಎಂಬುದನ್ನು ನೆನಪಿಡಿ ಎಂದರು.

ಇಂದು ಜಗತ್ತು ಕ್ಷಿಪ್ರ ಬದಲಾವಣೆಯ ಹಂತದಲ್ಲಿದೆ. ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ (Innovation) ಜೀವನದ ಪ್ರತಿಯೊಂದು ಕ್ಷೇತ್ರವನ್ನು ಪ್ರಭಾವಿಸಿದೆ. ಕೃತಕ ಬುದ್ಧಿಮತ್ತೆ (AI), ಡೇಟಾ ಸೈನ್ಸ್ ಮತ್ತು ಡಿಜಿಟಲ್ ಕ್ರಾಂತಿಯು ಹೊಸ ಅವಕಾಶಗಳ ಜೊತೆಗೆ ಹೊಸ ಸವಾಲುಗಳನ್ನೂ ತಂದೊಡ್ಡಿದೆ. ಈ ಸ್ಪರ್ಧಾತ್ಮಕ ಯುಗದಲ್ಲಿ ನಿರಂತರವಾಗಿ ಕಲಿಯುವ ಪ್ರವೃತ್ತಿ ಮತ್ತು ಸಾಮಾಜಿಕ ಜವಾಬ್ದಾರಿ ಬಹಳ ಮುಖ್ಯ. ಆದ್ದರಿಂದ ನಿಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಕಾಲಕ್ಕೆ ತಕ್ಕಂತೆ ನವೀಕರಿಸಿಕೊಳ್ಳುತ್ತಿರಿ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ಇಂದು “ವಿಕಸಿತ ಭಾರತ 2047” ರ ಸಂಕಲ್ಪದೊಂದಿಗೆ ಹೊಸ ಯುಗದತ್ತ ಸಾಗುತ್ತಿದೆ. ಈ ಸಂಕಲ್ಪವನ್ನು ಸಾಕಾರಗೊಳಿಸುವಲ್ಲಿ ನಿಮ್ಮಂತಹ ಯುವಕರ ಪಾತ್ರ ಬಹುದೊಡ್ಡದು ಎಂದರು.

‘ಒಂದು ಭಾರತ ಶ್ರೇಷ್ಠ ಭಾರತ’ ಮತ್ತು ‘ವಿಕಸಿತ ಭಾರತ’ಕ್ಕಾಗಿ “ಮೇಡ್ ಇನ್ ಇಂಡಿಯಾ” ಮತ್ತು “ವೋಕಲ್ ಫಾರ್ ಲೋಕಲ್” ಗುರಿಗಳನ್ನು ತಲುಪಲು ನಿಮ್ಮ ಕೊಡುಗೆ ನೀಡಿ. ಹೊಸ ಶಿಕ್ಷಣ ನೀತಿ (NEP 2020) ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಹೆಚ್ಚು ಕೌಶಲ್ಯ ಆಧಾರಿತ ಮತ್ತು ಸಮಗ್ರವಾಗಿಸಿದೆ. ಶಿಕ್ಷಣವು ಕೇವಲ ಪದವಿ ಪಡೆಯುವ ಸಾಧನವಲ್ಲ, ಅದು ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯ ಅಡಿಪಾಯವಾಗಿದೆ ಎಂದರು.
ಜಾಗತಿಕ ತಾಪಮಾನ ಏರಿಕೆ ಮತ್ತು ಪರಿಸರ ಮಾಲಿನ್ಯದಂತಹ ಸವಾಲುಗಳ ಬಗ್ಗೆಯೂ ನೀವು ಗಮನಹರಿಸಬೇಕು ಮತ್ತು ಈ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ನಾನು ಆಶಿಸುತ್ತೇನೆ ಎಂದರು.

ನೀವು ಕೇವಲ ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ (Job Creators). ಸ್ಟಾರ್ಟಪ್ ಸಂಸ್ಕೃತಿ ಮತ್ತು ಉದ್ಯಮಶೀಲತೆಯ ಮೂಲಕ ಸಮಾಜಕ್ಕೆ ಹೊಸ ಸಾಧ್ಯತೆಗಳನ್ನು ಸೃಷ್ಟಿಸಿ ಎಂದರು.

ಕುಲಪತಿಗಳು ಮತ್ತು ಅವರ ತಂಡಕ್ಕೆ ನನ್ನ ಅಭಿನಂದನೆಗಳು. ನಿಮ್ಮ ಮಾರ್ಗದರ್ಶನದಲ್ಲಿ ಈ ವಿಶ್ವವಿದ್ಯಾಲಯವು ಪ್ರಗತಿಯ ಹಾದಿಯಲ್ಲಿ ಮುನ್ನಡೆಯಲಿ ಎಂದರು.

ಮಹಾನ್ ಸಾಹಿತಿ ಮತ್ತು ಚಿಂತಕ ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ ‘ಕುವೆಂಪು’ ಅವರ ಹೆಸರಿನಲ್ಲಿ ಸ್ಥಾಪಿತವಾದ ಈ ವಿಶ್ವವಿದ್ಯಾಲಯವು, ‘ವಿಶ್ವಮಾನವ’ ಸಂದೇಶ ನೀಡಿದ ಅವರ ಆದರ್ಶಗಳಿಂದ ಪ್ರೇರಿತವಾಗಿದೆ. ಅವರ ಸಾಹಿತ್ಯವು ಸಮಾಜದಲ್ಲಿ ಸಮಾನತೆ, ಮಾನವೀಯತೆ ಮತ್ತು ಪ್ರಗತಿಪರ ಚಿಂತನೆಗಳನ್ನು ಉತ್ತೇಜಿಸಿದೆ. ಕುವೆಂಪು ಅವರ ಆದರ್ಶ ಮತ್ತು ವಿಚಾರಗಳಿಂದ ಪ್ರೇರಿತವಾದ ಈ ವಿಶ್ವವಿದ್ಯಾಲಯವು ಕೇವಲ ಶಿಕ್ಷಣದ ಕೇಂದ್ರವಲ್ಲದೆ, ಮೌಲ್ಯಗಳು, ಸಂಸ್ಕಾರ ಮತ್ತು ಸಾಮಾಜಿಕ ಜವಾಬ್ದಾರಿಯನ್ನು‌ ತಲುಪಿಸುವ ಕೆಲಸ ಮಾಡುತ್ತಿದೆ. ಇಂದು ಈ ಘಟಿಕೋತ್ಸವದ ಮೂಲಕ ವಿಶ್ವವಿದ್ಯಾಲಯವು ಜ್ಞಾನ, ಪರಂಪರೆ ಮತ್ತು ಆಧುನಿಕತೆಯ ಸಮನ್ವಯಕ್ಕೆ ಮತ್ತೊಮ್ಮೆ ಸಾಕ್ಷಿಯಾಗುತ್ತಿದೆ. ಇಂದು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಗೌರವಾನ್ವಿತರಿಗೆ ಅಭಿನಂಧಿಸುತ್ತೇನೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Governor Thaawarchand GehlotKannada NewsKannada News LiveKannada News Online ShivamoggaKannada WebsiteKannadaNewsWebsiteKuvempu UniversityLatestNewsKannadaLocalNewsMalnadNewsNews in KannadaNews KannadaShimogaShivamoggaNewsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

Next Post

ಗಮನಿಸಿ! ಮೇ 7-8ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

kalpa News

kalpa News

Next Post
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 7-8ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL