ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವಪ್ರಸಿದ್ಧ ಜೋಗ ಜಲಪಾತ ಮತ್ತು ಸುತ್ತಮುತ್ತಲಿನ ಪ್ರಕೃತಿ ಸೌಂದರ್ಯವನ್ನು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.
ನ.24ರಂದು ರಾತ್ರಿ ಜೋಗದಲ್ಲಿ ವಾಸ್ತವ್ಯ ಹೂಡಿದ್ದ ಅವರು, ಇಂದು ಮುಂಜಾನೆಯೇ ಜೋಗದ ರಾಜಾ, ರಾಣಿ, ರೋರರ್, ರಾಕೆಟ್‌ಗಳ ಸೊಬಗನ್ನು ನೋಡಿ ಮಾಹಿತಿಯನ್ನು ಪಡೆದರು.
ನಂತರ ದಟ್ಟವಾದ ಕಾಡು ಮತ್ತು ಗುಡ್ಡಗಳ ನಡುವಲ್ಲಿ ಶರಾವತಿ ನದಿಯು ಹರಿದು ಅತಿ ಎತ್ತರದಿಂದ ಭೋರ್ಗರೆಯುತ್ತಾ ನಾಲ್ಕು ಸೀಳಾಗಿ ಧುಮುಕುತ್ತಿರುವ ವೈಭವದ ದೃಶ್ಯವನ್ನು ಕಣ್ತುಂಬಿಕೊಂಡರು.
ಈ ಸಂದರ್ಭದಲ್ಲಿ ಉತ್ತರ ಕನ್ನಡ ಡಿಸಿ ಮುಲ್ಲೈ ಮುಹಿಲನ್, ಎಸ್‌ಪಿ ಡಾ. ಸುಮನ್, ಡಿ. ಪೆನ್ನೇಕರ್, ಕುಮಟಾ ಎ.ಸಿ ರಾಹುಲ್ ಪಾಂಡೆ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post