ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪ್ರತಿಷ್ಠಿತ ಪಿಇಎಸ್ ಸಂಸ್ಥೆಗೆ ನ.24ರ ಬುಧವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಲಿದ್ದಾರೆ.
ಅಂದು ಸಂಸ್ಥೆಯ ಪ್ರೇರಣಾ ಕನ್ವೆಷ್ಷನ್ ಹಾಲ್‌ನಲ್ಲಿ ಮಧ್ಯಾಹ್ನ 3:30ಕ್ಕೆ ಆಯೋಜಿಸಲಾಗಿರುವ ಸಮಾರಂಭದಲ್ಲಿ LANDSCAPE OF NATIONAL EDUCATION POLICY, 2020 – WHAT, WHY AND HOW? ಎಂಬ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ.
ಸಮಾರಂಭದಲ್ಲಿ ಸಂಸದ ಹಾಗೂ ಪಿಇಎಸ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಬಿ. ವೈ ರಾಘವೇಂದ್ರ, ಜನಶಿಕ್ಷಣ ಸಂಸ್ಥೆಯ ನಿರ್ದೇಶಕಿ ಎಸ್.ವೈ. ಅರುಣಾದೇವಿ, ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ವಿ. ಚೈತನ್ಯಕುಮಾರ್ ಅವರು ವೇದಿಕೆಯಲ್ಲಿ ಉಪಸ್ಥಿತರಿಲಿದ್ದಾರೆ.
ಪಿಇಎಸ್ ಸಂಸ್ಥೆಯ ಮುಖ್ಯ ಆಡಳಿತ ಸಂಯೋಜಕರಾದ ಡಾ. ಆರ್. ನಾಗರಾಜ ಸ್ವಾಗತಿಸಲಿದ್ದು, ಪಿಇಎಸ್ ಟ್ರಸ್ಟ್‌ನ ಆಡಳಿತ ಮಂಡಳಿ ಸದಸ್ಯ ಬಿ. ಆರ್. ಸುಭಾಷ್ ಅವರು ವಂದನೆಗಳನ್ನು ಸಲ್ಲಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post