No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸದ್ದಿಲ್ಲದೆ ರೈತರ ಜಮೀನು ಕಬಳಿಕೆ | ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟ | ಬಿಜೆಪಿ ಎಚ್ಚರಿಕೆ

kalpa News by kalpa News
November 4, 2024
in ಶಿವಮೊಗ್ಗ
0
ಸದ್ದಿಲ್ಲದೆ ರೈತರ ಜಮೀನು ಕಬಳಿಕೆ | ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟ | ಬಿಜೆಪಿ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕವನ್ನು ಮುಸ್ಲಿಂ ಆಸ್ತಿ ಮಾಡಲು ಹೊರಟ ವಕ್ಫ್ ಕಾಯ್ದೆ #Waqf bill ವಿರುದ್ಧ ರೈತರ ಜಮೀನು ಉಳಿಸುವುದಕ್ಕೋಸ್ಕರ್ ಬಿಜೆಪಿ ಹೋರಾಟ ಪ್ರಾರಂಭಿಸಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದ್ದಾರೆ.

ಅವರು ಇಂದು ಜಿಲ್ಲಾ ಬಿಜೆಪಿ ವತಿಯಿಂದ ವಕ್ಫ್ ಮಂಡಳಿ ವಿರುದ್ಧ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಶಾಂತವಾದ ಕರ್ನಾಟಕದಲ್ಲಿ ಸದ್ದಿಲ್ಲದೆ ನೂರಾರು ವರ್ಷಗಳಿಂದ ಜಮೀನು ಸಾಗುವಳಿ ಮಾಡಿಕೊಂಡು ಬಂದಿರುವ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿಯೆಂದು ನಮೂದಿಸಿ ರೈತರಿಗೆ ನೋಟೀಸ್ ನೀಡುತ್ತಿರುವ ಸರ್ಕಾರ ರಾಜ್ಯದ ಮುಜುರಾಯಿ ದೇವಾಲಯಗಳು, ಪುರಾತತ್ವ ಇಲಾಖೆಯ ಆಸ್ತಿಗಳು, ಮಠ ಮಂದಿರಗಳು ಮತ್ತು ಶಾಲಾ ಜಮೀನುಗಳನ್ನು ವಕ್ಫ್ ಆಸ್ತಿ ಮಾಡಲು ಸರ್ಕಾರ ಹೊರಟಿದೆ. ಇದಕ್ಕೆ ಮುಖ್ಯ ಕಾರಣ ವಸತಿ ಸಚಿವ ಜಮೀರ್ ಅಹಮ್ಮದ್ ಆಗಿದ್ದು, ಅವರನ್ನು ಕೂಡಲೇ ಬಂಧಿಸಬೇಕು, ಸಂಪುಟದಿಂದ ವಜಾಗೊಳಿಸಬೇಕು ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ದೊಡ್ಡ ಮಟ್ಟದ ಹೋರಾಟ ಬಿಜೆಪಿ ನಡೆಸಲಿದೆ ಎಂದರು.

Also read: ರಾಜ್ಯದ 31 ಜಿಲ್ಲೆಗಳಲ್ಲೂ ವಕ್ಫ್ ವಿವಾದ | ಎಚ್ಚೆತ್ತುಕೊಳ್ಳದಿದ್ದರೆ ಸಿಎಂ ಸ್ಥಾನ ತಲೆದಂಡ ಖಚಿತ

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ #CM Siddaramaiah ಎಲುಬಿಲ್ಲದ ನಾಲಿಗೆ ನಿಮ್ಮದು ನೋಟೀಸ್ ಹಿಂಪಡೆದ ತಕ್ಷಣ ಪಹಣಿಯಲ್ಲಿ ಬದಲಾವಣೆಯಾಗುವುದಿಲ್ಲ. ತಾಕತ್ತಿದ್ದರೆ ವಕ್ಫ್ ಕಾನೂನನ್ನೇ ಬದಲಾವಣೆ ಮಾಡಿ, ಇಲ್ಲವಾದರೆ ಈಗ ನಮ್ಮ ಪ್ರಧಾನಿ ಮಾಡಲು ಹೊರಟಿದ್ದಾರೆ. ಅವರಿಗೆ ಬೇಷರತ್ತು ಬೆಂಬಲ ನೀಡಿ, ನಮ್ಮ ಕಾನೂನುಬದ್ಧ ಹೋರಾಟವನ್ನು ತಡೆಯುವ ದುಸ್ಸಾಹಕ್ಕೆ ಕೈಹಾಕಬೇಡಿ ಎಂದರು.

ಮಾಜಿ ಶಾಸಕ ಅಶೋಕ್‍ನಾಯ್ಕ್ ಮಾತನಾಡಿ, ಕಾಂಗ್ರೆಸ್ ಬಂದಾಗಿನಿಂದ ರೈತರಲ್ಲಿ ಆತಂಕ ಮೂಡಿಸಿದೆ. ಪ್ರತಿ ಜಿಲ್ಲೆಯಲ್ಲೂ ವಕ್ಫ್ ಸಮಿತಿ ಇದ್ದು, ಪ್ರಧಾನ ಮಸೀದಿಯ ಮೌಲಿಯೇ ಅದಕ್ಕೆ ಅಧ್ಯಕ್ಷರಾಗಿರುತ್ತಾರೆ. ವಕ್ಫ್ ಸಮಿತಿ ಏನಾದರೂ ಯಾವುದಾದರೂ ಆಸ್ತಿಯನ್ನು ತಮ್ಮದೆಂದು ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರೆ ಸಾಕು, 20ದಿನಗಳ ಒಳಗೆ ಜಿಲ್ಲಾಧಿಕಾರಿಗಳು ಆ ಆಸ್ತಿಯ ಅನುಭವದಾರರಿಗೆ ನೋಟೀಸ್ ನೀಡಿ, ಆ ಆಸ್ತಿಯನ್ನು ವಕ್ಫ್ ಸಮಿತಿಗೆ ವರ್ಗಾಹಿಸುತ್ತಾರೆ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ, ಸುಪ್ರೀಂ ಕೋರ್ಟ್‍ನಲ್ಲೂ ಪ್ರಶ್ನಿಸುವ ಆಗಿಲ್ಲ, ವಕ್ಪ್ ಟ್ರಬ್ಯುನಲ್‍ನಲ್ಲಿ ಪ್ರಶ್ನಿಸಬೇಕು. ಅದರಲ್ಲಿ ಅವರದೇ ಸಮಾಜದ ಮುಖಂಡರಿರುತ್ತಾರೆ. ಅಲ್ಲಿ ನ್ಯಾಯ ಸಿಗುವ ಭರವಸೆ ಇಲ್ಲ, ಇದೇ ರೀತಿ ಅನೇಕ ರೈತರ ಮತ್ತು ದೇವಾಲಯಗಳ ಆಸ್ತಿಗಳು ವಕ್ಫ್ ಪಾಲಾಗಿದೆ. ಕಾಂಗ್ರೆಸ್ಸ್‍ನ ಕರಾಳ ಮುಖ ಬಯಲಾಗಿದೆ ಎಂದರು.

ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ಉಡುಪಿಯ ಶಿವಪುರ ಈಗ ಸುಲ್ತಾನ್‍ಪುರ ಆಗಿದೆ. ದಯಮಾಡಿ ಜಿಲ್ಲೆಯ ರೈತರು ಬೆಳಿಗ್ಗೆ ಎದ್ದಕೂಡಲೇ ತಮ್ಮ ಜಮೀನಿನ ಪಹಣಿ ಯಾರ ಹೆಸರಿನಲ್ಲಿದೆ ಎಂದು ಪರಿಶೀಲಿಸಿ ರಾತ್ರೋರಾತ್ರಿ ಖಾತೆ ಬದಲಾವಣೆಯಾಗುತ್ತದೆ. “ಹೇ ಸಿದ್ದರಾಮಯ್ಯ ನಿನ್ನ ನಾಟಕ ನಿಲ್ಲಿಸು ಸುಳ್ಳು ಹೇಳಿಕೆಯನ್ನು ಬಿಡು”. ಜಮೀರ್ ಅಹಮ್ಮದ್ ಖಾನ್‍ರವರು ಖುದ್ದಾಗಿ ಹೇಳಿದ್ದಾರೆ.

ಸಿದ್ದರಾಮಯ್ಯನವರೇ ವಕ್ಫ್ ಆಸ್ತಿಯೆಂದು ಬದಲಿಸಲು ಸೂಚನೆ ನೀಡಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಹಾಗಾಗಿ ದ್ವಿಮುಖ ನೀತಿಯನ್ನು ಕೈಬಿಡಿ ರೈತರ ಶಾಪ ತಟ್ಟುತ್ತದೆ ಎಂದರು.

ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಾಜಿ ಶಾಸಕ ಅಶೋಕ್‍ನಾಯ್ಕ್, ಎಸ್.ಎಸ್.ಜ್ಯೋತಿ ಪ್ರಕಾಶ್ ಸೇರಿದಂತೆ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದರು. ಬಳಿಕ ಸ್ಥಳದಲ್ಲಿ ಹೈಡ್ರಾಮಾ ನಡೆಯಿತು. ಪ್ರಮುಖರನ್ನು ಬಂಧಿಸುತ್ತಿದ್ದಂತ್ತೆ ಬಿಜೆಪಿ ಮಹಿಳಾ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ಸಂದರ್ಭದಲ್ಲಿ ಮಹಿಳಾ ಕಾರ್ಯಕರ್ತೆಯೊಬ್ಬರಿಗೆ ಸಣ್ಣ ಗಾಯವಾಗಿದ್ದು, ಅದನ್ನೇ ಮುಂದಿಟ್ಟುಕೊಂಡು ಪೊಲೀಸ್ ದೌರ್ಜನ್ಯ ವಿರುದ್ಧ ಮತ್ತೆ ಪ್ರತಿಭಟನೆಗೆ ಇಳಿದರು. ಅರ್ಧಗಂಟೆ ಕಾಲ ಬಿಗುವಿನ ವಾತಾವರಣ ಉಂಟಾಯಿತು. ಬಳಿಕ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳು ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳುವ ಭರವಸೆ ನೀಡಿದ ಬಳಿಕ ಧರಣಿ ವಾಪಸ್ಸು ಪಡೆದರು.

ಈ ಸಂದರ್ಭದಲ್ಲಿ ಮಹಿಳಾ ಪ್ರಮುಖರಾದ ಸುರೇಖಾ ಮುರಳೀಧರ್, ರಶ್ಮಿ ಶ್ರೀನಿವಾಸ್, ಚೈತ್ರಪೈ, ಯಶೋಧನಾಗರಾಜ್, ದೀಪ, ಗೌರಿ ಶ್ರೀನಾಥ್, ನಿರ್ಮಲಾ, ಯಮುನಾ ಮೊದಲಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: CM SiddaramaiahKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsWaqf billಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯವಕ್ಫ್ ಕಾಯ್ದೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದ 31 ಜಿಲ್ಲೆಗಳಲ್ಲೂ ವಕ್ಫ್ ವಿವಾದ | ಎಚ್ಚೆತ್ತುಕೊಳ್ಳದಿದ್ದರೆ ಸಿಎಂ ಸ್ಥಾನ ತಲೆದಂಡ ಖಚಿತ

Next Post

ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಐಎಂಎ ಶಿವಮೊಗ್ಗ ಶಾಖೆ ಬೆಂಬಲ: ಡಾ. ಶ್ರೀಧರ್

kalpa News

kalpa News

Next Post
ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಐಎಂಎ ಶಿವಮೊಗ್ಗ ಶಾಖೆ ಬೆಂಬಲ: ಡಾ. ಶ್ರೀಧರ್

ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಐಎಂಎ ಶಿವಮೊಗ್ಗ ಶಾಖೆ ಬೆಂಬಲ: ಡಾ. ಶ್ರೀಧರ್

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL