No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅದ್ದೂರಿ ಗಣರಾಜ್ಯೋತ್ಸವ ಆಚರಣೆ | ಸಕಲ ಸಿದ್ದತೆಗೆ ಡಿಸಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ

kalpa News by kalpa News
January 9, 2026
in ಶಿವಮೊಗ್ಗ
0
ಅದ್ದೂರಿ ಗಣರಾಜ್ಯೋತ್ಸವ ಆಚರಣೆ | ಸಕಲ ಸಿದ್ದತೆಗೆ ಡಿಸಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜ.26ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಗಣರಾಜ್ಯೋತ್ಸವ ದಿನಾಚರಣೆಗೆ #Republic Day Celebration ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ #DC Prabhulinga Kavalikatti ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಷ್ಟಾಚಾರದಂತೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲಾಗುವುದು. ಜನವರಿ 26 ರಂದು ಬೆಳಿಗ್ಗೆ 09 ಗಂಟೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ #Minister Madhu Bangarappa ಅವರು ಧ್ವಜಾರೋಹಣ ನೆರವೇರಿಸಿ, ಜಿಲ್ಲೆಯ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಿ, ಧ್ವಜವಂದನೆ ಸ್ವೀಕರಿಸುವರು. ನಂತರ ಪೊಲೀಸ್, ಹೋಂ ಗಾರ್ಡ್, ಬಾಲಮಂದಿರದ ಮಕ್ಕಳು, ಪಾಲಿಕೆ ಸಿಬ್ಬಂದಿ, ಸ್ಕೌಟ್ಸ್ & ಗೈಡ್ಸ್, ಸೇವಾದಳ, ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಲಿದೆ. ನಂತರ ಶಾಲಾ ಮಕ್ಕಳ ಸಾಮೂಹಿಕ ನೃತ್ಯ ಕಾರ್ಯಕ್ರಮಗಳು ನಡೆಯಲಿದ್ದು, ಅಂದು ಸಂಜೆ 6 ರಿಂದ 9ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಗಣರಾಜ್ಯೋತ್ಸವದ ಅಂಗವಾಗಿ ನಗರದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ, ನಗರದ ಪ್ರಮುಖ ರಸ್ತೆ, ವರ್ತುಲಗಳಲ್ಲಿ ತಳಿರು-ತೋರಣ ಮತ್ತು ವಿದ್ಯುದ್ದೀಪಗಳಿಂದ ಅಲಂಕರಿಸುವಂತೆ ಆಯಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಹಲವು ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಗಾಗಿ ನಿಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ನೋಡಿಕೊಳ್ಳಲು ಕ್ರೀಡಾಂಗಣದ ವೇದಿಕೆ ಆವರಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಸೂಕ್ತ ಪೊಲೀಸ್ ಭದ್ರತೆ ಮತ್ತು ಟ್ರಾಫಿಕ್ ವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ವಿತರಿಸಲು ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರು, ಜಿ.ಪಂ ಉಪಕಾರ್ಯದರ್ಶಿಗಳು ಹಾಗೂ ತಹಶೀಲ್ದಾರರಿಗೆ ತಿಳಿಸಿದರು. ಪೆರೇಡ್ ಹಾಗೂ ಸುತ್ತಮುತ್ತಲಿನ ಜಾಗವನ್ನು ಮುಂಚಿತವಾಗಿ ಸ್ವಚ್ಚಗೊಳಿಸಿ ಸಿದ್ದಗೊಳಿಸುವುದು, ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ, ವೇದಿಕೆ ಸಿದ್ದತೆ, ಸೌಂಡ್ ಸಿಸ್ಟಂ, ವೇದಿಕೆ ಅಲಂಕಾರ ಮಾಡುವಂತೆ ಪಾಲಿಕೆ, ಸಶಸ್ತ್ರ ಮೀಸಲು ಪಡೆ, ಲೋಕೋಪಯೋಗಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಕ್ರೀಡಾ ಯುವಜನ ಸಬಲೀಕರಣ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು. ಸರ್ಕಾರದ ಸುತ್ತೋಲೆಯಂತೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮತ್ತು ಕಚೇರಿಗಳಲ್ಲಿ ಪ್ರತಿ ವರ್ಷದಂತೆ ಧ್ವಜಾರೋಹಣಕ್ಕೆ ಸಿದ್ದತೆ ಮಾಡಿಕೊಳ್ಳಬೇಕು ಎಂದರು.

ಸ್ವಾಗತ ಕಮಾನು ಸಿದ್ದತೆ, ಸೂಕ್ತ ಪೊಲೀಸ್ ಭದ್ರತೆ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುದೀಪ ಅಲಂಕಾರ ವ್ಯವಸ್ಥೆ, ಆಂಬುಲೆನ್ಸ್, ಅಗ್ನಿಶಾಮಕ ವಾಹನದ ವ್ಯವಸ್ಥೆ, ಮಕ್ಕಳಿಗೆ ಸಿಹಿ ಹಂಚಿಕೆ ಹಾಗೂ ಆಸ್ಪತ್ರೆ ಮತ್ತು ಇತರೆ ಸಂಸ್ಥೆಗಳಲ್ಲಿ ಹಣ್ಣು, ಸಿಹಿ ಹಂಚಿಕೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿದರು. ಗಣರಾಜ್ಯೋತ್ಸವದ ಪ್ರಮುಖ ಆಕರ್ಷಣೆಯಾದ ಪೆರೇಡ್ ಪ್ರದರ್ಶನದ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದರು. ಧ್ವಜಾರೋಹಣದ ನಂತರ ವಿದ್ಯಾರ್ಥಿಗಳಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಿ, ನಿಗದಿತ ವೇಳೆಯಲ್ಲಿ ಮುಗಿಯುವಂತೆ ಕ್ರಮ ಕೈಗೊಳ್ಳಲು ಡಿಡಿಪಿಐ ಮತ್ತು ಬಿಇಓ ಅವರಿಗೆ ಸೂಚನೆ ನೀಡಿದರು. ಸಂಭ್ರಮಾಚರಣೆಯ ಅಂಗವಾಗಿ ಪಾಲಿಕೆ ಮತ್ತು ಶಿಮುಲ್ ವತಿಯಿಂದ ಗಣ್ಯರು ಮತ್ತು ಸಾರ್ವಜನಿಕರಿಗೆ ಸಿಹಿ ಹಂಚಿಕೆ, ಶಾಲಾ ಮಕ್ಕಳಿಗೆ ಉಪಹಾರ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಸಂಬಂಧಿಸಿದ ಎಲ್ಲ ಅಧಿಕಾರಿಗಳು ಸೂಕ್ತ ಸಿದ್ದತೆಗಳನ್ನು ಮಾಡಿಕೊಂಡು ಆಚರಣೆಯನ್ನು ಯಶಸ್ವಿಗೊಳಿಸಬೇಕು ಹಾಗೂ ಅಂದು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಭಾಗವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ, ಕೆಎಸ್‌ಆರ್‌ಪಿ ಕಮಾಂಡೆಂಟ್ ಯುವಕುಮಾರ್, ಎಸಿ ಸತ್ಯನಾರಾಯಣ, ಸೂಡಾ ಆಯುಕ್ತರಾದ ವಿಶ್ವನಾಥ ಮುದಜ್ಜಿ, ತಹಶೀಲ್ದಾರ್ ರಾಜೀವ್, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: DC Prabhulinga KavalikattiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaNews in KannadaNews KannadaRepublic Day CelebrationShimogaShivamoggaNewsಗಣರಾಜ್ಯೋತ್ಸವ ದಿನಾಚರಣೆಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಎಸ್. ಮಧು ಬಂಗಾರಪ್ಪ
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಮ ಮಂದಿರ ನಿರ್ಮಾಣದಿಂದ ಭಾರತೀಯ ಪರಂಪರೆ ಪುನರುಜ್ಜೀವನ | ಪೇಜಾವರ ಶ್ರೀ ಸಂತಸ

Next Post

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

kalpa News

kalpa News

Next Post
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL