ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗ್ಯಾರಂಟಿ ಯೋಜನೆಗಳಿಂದ ಜನರು ದಾರಿ ತಪ್ಪುತ್ತಿದ್ದಾರೆ ಎಂದು ಕೆಲವರು ತಪ್ಪು ಸಂದೇಶ ಹರಡುತ್ತಿದ್ದಾರೆ. ಈ ರೀತಿಯ ವದಂತಿಗಳಿಗೆ ಜನರು ಕಿವಿಕೊಡಕೂಡದು. ಗ್ಯಾರಂಟಿ ಯೋಜನೆಗಳಿಂದ ಬಡವರ ಬಾಳು ಹಸನಾಗಿದೆ ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivrajkumar ಹೇಳಿದರು.
ಸಾಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಇಲ್ಲಿನ ಪಡವಗೋಡು ಗ್ರಾಮ ಪಂಚಾಯಿತಿ ಲಿಂಗದಹಳ್ಳಿ ಹಾಗೂ ಭೀಮನೇರಿಯ ಸೂರನಗದ್ದೆ ದೇವಸ್ಥಾನ ವೃತ್ತದಲ್ಲಿ ಇಂದು ಆಯೋಜಿದ್ದ ಗ್ರಾಮ ಪಂಚಾಯಿತಿ ಮಟ್ಟದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಕೃಪಾಂಕ ಕಲ್ಪಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಅಶಕ್ತ ಕುಟುಂಬಗಳಿಗೆ ಆಶಾಕಿರಣ ಆಗಿದ್ದರು. ಅವರ ಮಗಳಾದ ನಾನು ಕೂಡ ಬಂಗಾರಪ್ಪ ಅವರ ಹಾದಿಯಲ್ಲಿ ಸಾಗುತ್ತೇನೆ. ನೊಂದವರ ಕಣ್ಣೀರು ಒರೆಸುತ್ತೇನೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #D K Shivakumar ಅವರ ನೇತೃತ್ವದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದರು.
Also read: ಜಪಾನ್: ತೈವಾನ್‌ನಲ್ಲಿ ಪ್ರಬಲ ಭೂಕಂಪ | ನಾಲ್ವರು ಸಾವು
ಶಾಸಕ ಬೇಳೂರು ಗೋಪಾಲಕೃಷ್ಣ #Beluru Gopalakrishna ಮಾತನಾಡಿ, ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾವು ಹೆಚ್ಚಾಗಿದೆ. ಆದ್ದರಿಂದ, ಇಲ್ಲಿ ಗೀತಾ ಶಿವರಾಜಕುಮಾರ್ ಅವರನ್ನು ಹೆಚ್ಚಿನ ಮತದಿಂದ ಗೆಲ್ಲಿಸಬೇಕು. ಗೀತಾ ಶಿವರಾಜಕುಮಾರ್ ಅವರು ರಾಜಕೀಯಕ್ಕೆ ಬರಲು ಹಕ್ಕಿದೆ. ಅವರ ರಕ್ತದಲ್ಲಿಯೇ ಸಾಮಾಜಿಕ ಸೇವೆಯ ಗುಣವಿದೆ. ಆದರೆ, ಈ ಬಗ್ಗೆ ಕೆಲವರು ಟೀಕಿಸುತ್ತಿದ್ದಾರೆ. ಇದಕ್ಕೆ ಉತ್ತರವಾಗಿ ಮತ ನೀಡಿ ನೀಡಬೇಕು ಎಂದರು.
ಸಂಸದ ಬಿ.ವೈ. ರಾಘವೇಂದ್ರ #B Y Raghavendra ಅವರು ಗ್ರಾಮೀಣ ಮಟ್ಟಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಸೋಗಾನೆ ವಿಮಾನ ನಿಲ್ದಾಣ, ಸೇತುವೆ, ರಸ್ತೆ ಮಾಡಿದರೆ ಮಾತ್ರ ಅಭಿವೃದ್ಧಿ ಅಲ್ಲ. ಬಡ ಜನರ ಅಳಲು ಆಲಿಸಬೇಕು. ಈ ಕಾರ್ಯವನ್ನು ಗೀತಾ ಅವರು ಪ್ರಮಾಣಿಕವಾಗಿ ಮಾಡಲಿದ್ದಾರೆ ಎಂದರು.
ನಟ ಶಿವರಾಜಕುಮಾರ್ ಮಾತನಾಡಿ, ಆರೋಗ್ಯ ಸಮಸ್ಯೆ ನಡುವೆಯೂ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ. ಇದಕ್ಕೆ ಕಾರಣ ಶಿವಮೊಗ್ಗ ಜನರು ಗೀತಾ ಅವರ ( ಪತ್ನಿ) ಮೇಲಿಟ್ಟಿರುವ ನಂಬಿಕೆ. ಆದ್ದರಿಂದ, ನಾನು ಗೀತಾ ಅವರನ್ನು ನಂಬಿದ್ದೇನೆ. ಮತ ನೀಡಿ ಎಂದು ಮನೆ ಬಾಗಿಲಿಗೆ ಬಂದಿದ್ದೇವೆ. ಮತ ನೀಡಿ ಆಶೀರ್ವದಿಸಿ ಎಂದು ಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post