ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗುಡ್ಡೇಕಲ್‍ನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ದೇವಸ್ಥಾನದಲ್ಲಿ ಆ.15ರಂದು `ಭರಣಿ’ ಹಾಗೂ ಆ.16ರಂದು `ಆಡಿ ಕೃತಿಕೆ’ ಜಾತ್ರೆಯನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಪಿ. ರಘುಕುಮಾರ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
`ಆಡಿಕೃತಿಕೆ’ ಜಾತ್ರೆಯು ಸುಮಾರು ದಶಕಗಳಿಂದಲೂ ನಡೆಸುತ್ತಾ ಬಂದಿದ್ದು, ಈ ಜಾತ್ರೆಗೆ ಹಲವು ರಾಜ್ಯ, ಜಿಲ್ಲೆ, ತಾಲ್ಲೂಕುಗಳಿಂದ ಭಕ್ತಾಧಿಗಳು ಹರಕೆ ಸಲ್ಲಿಸಲು ಕಾವಡಿಯನ್ನು ತೆಗೆದುಕೊಂಡು ಬರುವುದು ವಾಡಿಕೆಯಲ್ಲಿದೆ ಎಂದರು.
ಜಾತ್ರೆಗಾಗಿ ವಿವಿಧ ಇಲಾಖೆಗಳ ಸಹಾಯವನ್ನು ಪಡೆಯಲಾಗುತ್ತಿದ್ದು, ಪೊಲೀಸ್ ಇಲಾಖೆಯಿಂದ ಹೆಚ್ಚಿನ ಭದ್ರತೆ ಒದಗಿಸಲು ಮನವಿ ಮಾಡಿಕೊಳ್ಳಲಾಗಿದೆ. ಕುಡಿಯುವ ನೀರು ಹಾಗೂ ಸ್ವಚ್ಛತೆಗಾಗಿ ಮಹಾನಗರ ಪಾಲಿಕೆಯ ಸಹಾಯವನ್ನು ಪಡೆಯಲಾಗುತ್ತಿದೆ. ಸಂಚಾರ ದಟ್ಟಣೆಯನ್ನು ತಡೆಯಲು ವಿವಿಧ ಮಾರ್ಗಗಳನ್ನು ಬದಲಾಯಿಸಲಾಗಿದೆ. ಜಾತ್ರೆಯ ಅಂಗವಾಗಿ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದರು.
ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಯ ಪ್ರತಿಮೆ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಕೇಂದ್ರ ಸರ್ಕಾರದಿಂದ ಆರು ಕೋಟಿ ರೂ. ಬಿಡುಗಡೆ ಮಾಡಿಸುವಲ್ಲಿ ಶ್ರಮಿಸಿದ್ದಾರೆ. ಹಾಗೆಯೇ ತಮ್ಮ ವೈಯಕ್ತಿಕವಾಗಿ 5 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿ ಈಗಾಗಲೇ ಒಂದು ಲಕ್ಷ ರೂ. ನೀಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ದೇವಸ್ಥಾನ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡಿ ಸಹಾಯ ಮಾಡಿದ್ದಾರೆ.
-ಪಿ. ರಘುಕುಮಾರ್, ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ
ಟ್ರಸ್ಟಿ ಡಿ. ರಾಜಶೇಖರಪ್ಪ ಮಾತನಾಡಿ, ಟ್ರಸ್ಟ್ ವತಿಯಿಂದ ದೇವಸ್ಥಾನದ ಆವರಣದಲ್ಲಿ ಪ್ರಪಂಚದಲ್ಲಿ ಅತೀ ಎತ್ತರವಾದ 151 ಅಡಿ ಎತ್ತರದ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಯ ಪ್ರತಿಮೆ ನಿರ್ಮಿಸಲು ಉದ್ದೇಶಿಸಿದ್ದು, ಎಲ್ಲಾ ಇಲಾಖೆಗಳಿಂದ ಎನ್‍ಓಸಿ ಸಿಕ್ಕಿದೆ ಎಂದರು.ಇದಕ್ಕೆ ಕೇಂದ್ರದ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆರು ಕೋಟಿ ರೂ. ಮಂಜೂರಾಗಿದ್ದು, ಈ ಹಣ ಬಿಡುಗಡೆಯ ನಂತರ ಪ್ರತಿಮೆಯ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು ರಾಜ್ಯ ಸರ್ಕಾರದಿಂದ ಆರು ಕೋಟಿ ರೂ. ಅನುದಾನ ಕೇಳಿದ್ದು, ಉಳಿದ ಹಣವನ್ನು ಭಕ್ತರಿಂದ ಸಂಗ್ರಹಿಸಲಾಗುವುದು. ಈ ಪ್ರತಿಮೆ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಕೇಂದ್ರ ಸರ್ಕಾರದಿಂದ ಆರು ಕೋಟಿ ರೂ. ಬಿಡುಗಡೆ ಮಾಡಿಸುವಲ್ಲಿ ಶ್ರಮಿಸಿದ್ದಾರೆ. ಹಾಗೆಯೇ ತಮ್ಮ ವೈಯಕ್ತಿಕವಾಗಿ 5 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿ ಈಗಾಗಲೇ ಒಂದು ಲಕ್ಷ ರೂ. ನೀಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ದೇವಸ್ಥಾನ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡಿ ಸಹಾಯ ಮಾಡಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಿ. ಸುಬ್ರಮಣಿ, ಎಂ. ಲೋಕೇಶ್, ಎಂ.ಪಿ. ಸಂಪತ್, ಪಿ. ರವಿಕುಮಾರ್, ಕೆ. ವಿಶ್ವನಾಥ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post