ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಾಜನೂರು ನವೋದಯ ವಿದ್ಯಾಲಯದ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ 14 ನೇ ಬ್ಯಾಚ್ ( 1999 -2006)ನ ವಿದ್ಯಾರ್ಥಿಗಳ ರಜತ ಮಹೋತ್ಸವದ ಅಂಗವಾಗಿ ಡಿ.22ರ ಭಾನುವಾರದಂದು ಬೆಳಗ್ಗೆ 10 ಗಂಟೆಗೆ ಗಾಜನೂರು ನವೋದಯ ವಿದ್ಯಾಲಯದಲ್ಲಿ ಗುರು ವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ ಎಂದು ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ತಾರಾನಾಥ್ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿಂದು ಮಾತನಾಡಿದ ಅವರು,, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ವಿಶೇಷ ಅತಿಥಿಗಳಾಗಿ ಗಾಜನೂರು ನವೋದಯ ವಿದ್ಯಾಲಯದ ಸಂಸ್ಥಾಪಕ ಪ್ರಾಂಶುಪಾಲರು ಹಾಗೂ ದೆಹಲಿಯ ನವೋದಯ ವಿದ್ಯಾಲಯದ ಸಮಿತಿಯ ನಿವೃತ್ತ ಕಮಿಷನರ್ ಎಚ್.ಎನ್. ಎಸ್.ರಾವ್ ಹಾಗೂ ಹಾಲಿ ಕಮಿಷನರ್ ಗಳಾದ ಎ. ಎನ್.ರಾಮಚಂದ್ರ, ಎಸ್.ವಿ.ಶೇಷಾದ್ರಿ, ಸಾಯಿ ರಂಗರಾವ್, ಎ.ವೈ.ರೆಡ್ಡಿ ಭಾಗವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನವೋದಯ ಶಾಲೆಯ ಪ್ರಾಂಶುಪಾಲರಾದ ಜಾನ್ಸನ್ ಪಿ. ಜೇಮ್ಸ್ ವಹಿಸುವರು ಎಂದರು.
ಕಾರ್ಯಕ್ರಮದಲ್ಲಿ ಹಳೇ ವಿದ್ಯಾರ್ಥಿಗಳು, ಪೋಷಕರು, ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ 1000 ಕ್ಕೂ ಜನ ಭಾಗವಹಿಸಲಿದ್ದಾರೆ. ಗಾಜನೂರು ನವೋದಯ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಕ್ಷಕರು ದೇಶದ ವಿವಿಧ ರಾಜ್ಯಗಳಿಂದ ಆಗಮಿಸಲಿದ್ದಾರೆ ಹಾಗೂ ಇವರೊಂಧಿಗೆ ಗಾಜನೂರು ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳನ್ನು ಸನ್ಮಾನಿಸಲಾಗುವುದು ಎಂದರು.
Also read: ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಾಸಿಗಳ ಗಡಿಪಾರು ಯಾವಾಗ?: ವಿಧಾನಪರಿಷತ್ ಸದಸ್ಯ ಡಿ. ಎಸ್. ಅರುಣ್ ಪ್ರಶ್ನೆ
ನವೋದಯ ಶಾಲೆಯ ಹಳೇ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ, ಅಲ್ಲದೇ ವಿಜ್ಞಾನಿಗಳಾಗಿ, ಸೇನಾಧಿಕಾರಿಗಳಾಗಿ, ಎಂಜಿನಿಯರ್ ಗಳಾಗಿ, ವೈದ್ಯರುಗಳಾಗಿ, ವಾಣಿಜ್ಯೋದ್ಯಮಿಗಳಾಗಿ, ಸಮಾಜ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಧಕರು ಹಾಗೂ ಸಮಾಜ ಸೇವಕರನ್ನು ಗುರುತಿಸಿ “ ನವೋದಯ ಭೂಷಣ” ಹಾಗೂ “ನವೋದಯ ರತ್ನ” ಪುರಸ್ಕಾರವನ್ನು ನೀಡಿ ಗೌರವಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ನವೋದಯ ಶಾಲೆಯಲ್ಲಿ ಎಲ್ಲ ಹಳೇಯ ವಿದ್ಯಾರ್ಥಿಗಳು ತಮ್ಮ ಸವಿ ನೆನಪುಗಳೊಂದಿಗೆ ಮನದಾಳವನ್ನು ಹಂಚಿಕೊಳ್ಳಲಿದ್ದಾರೆ ಎಂದರು.
14 ನೇ ಬ್ಯಾಚ್ನ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಡೊಳ್ಳು ಕುಣಿತ, ಹಾಡುಗಾರಿಕೆ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದರು.
14 ನೇ ಬ್ಯಾಚ್ ನ ವಿದ್ಯಾರ್ಥಿಗಳ ರಜತ ಮಹೋತ್ಸವದ ಅಂಗವಾಗಿ ವರ್ಷವಿಡೀ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ, ಹಳೇ ವಿದ್ಯಾರ್ಥಿಗಳಿಗಾಗಿ ಕ್ರಿಕೆಟ್, ಬ್ಯಾಡ್ಮಿಂಟನ್ ಪಂದ್ಯಾವಳಿಗಳನ್ನು ಈಗಾಗಲೇ ನಡೆಸಲಾಗಿದೆ. ಶಾಲೆಯಲ್ಲಿ ಸಾಗರದ ಕಿನ್ನರ ಮೇಳದ ತಂಡದ ವತಿಯಿಂದ “ಇರುವೆ ಪುರಾಣ “ ನಾಟಕ ಪ್ರದರ್ಶನ ಮಾಡಲಾಗಿದೆ, 14 ನೇ ಬ್ಯಾಚ್ ನ ವಿದ್ಯಾರ್ಥಿಗಳೆಲ್ಲರ ಆರ್ಥಿಕ ಸಹಕಾರದಲ್ಲಿ ಶಾಲೆಗೆ ಕುಡಿಯುವ ನೀರಿನ ಅಗತ್ಯತೆಯನ್ನು ಕಂಡು 1 ಲಕ್ಷ ರೂ.ವೆಚ್ಚದಲ್ಲಿ ಕೊಳವೆ ಬಾವಿಯ ದುರಸ್ತಿಗೊಳಿಸಿ, ಪೈಪ್ ಲೈನ್ ಅಳವಡಿಸಿ ನೀರಿನ ಸೌಲಭ್ಯ ಒದಗಿಸಲಾಗಿದೆ ಎಂದರು.
ಗೋಷ್ಟಿಯಲ್ಲಿ ಡಾ.ವಾದಿರಾಜ್ ಕುಲಕರ್ಣಿ, 14 ನೇ ಬ್ಯಾಚ್ ನ ವಿದ್ಯಾರ್ಥಿಗಳಾದ ಉಮಾಕಾಂತ್, ಕಾರ್ತೀಕ್, ಪವನ್ ಹಾಗೂ ಡಾ.ಚೇತನ್ ನವಿಲೇಹಾಳ್, ಯುವರಾಜ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post