ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಸಹ್ಯಾದ್ರಿ ಪ್ರೌಢಶಾಲಾ ಆವರಣದಲ್ಲಿರುವ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ನ ಕೋವಿಡ್ ಹೆಲ್ಪ್ ಡೆಸ್ಕ್ ಗೆ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ (IMA) ಕೋವಿಡ್ ಕೇರ್ ಸೆಂಟರ್ಗಳಲ್ಲಿರುವ ಕೋವಿಡ್ ರೋಗಿಗಳಿಗೆ ವಿತರಿಸಲು ದಿನನಿತ್ಯದ ಅಗತ್ಯ ವಸ್ತುಗಳನ್ನು ಹಸ್ತಾಂತರಿಸಲಾಯಿತು.
ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ. ಪರಮೇಶ್ವರ್ ಶಿಗ್ಗಾಂವ್ ಮತ್ತು ಸೆಕ್ರೆಟರಿ ಡಾ. ಶಂಭುಲಿಂಗ ಈ ವಸ್ತುಗಳನ್ನು ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ನ ಸಂಚಾಲಕರಾದ K.C. ಬಸವರಾಜ್ ಮತ್ತು ಕುಮಾರ ಶಾಸ್ತ್ರಿಗಳಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸ್ವಯಂಸೇವಕರಾದ ಅರ್ಚನ ಮತ್ತು ಗುರುಪ್ರಸಾದ ಉಪಸ್ತಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post