ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನ.6ರಂದು ಬೆಂಗಳೂರಿಗೆ ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದು, ಕೆಪಿಸಿಸಿ ವತಿಯಿಂದ ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50 ವರ್ಷಗಳ ನಂತರ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿರುವುದು ಇಡೀ ರಾಜ್ಯಕ್ಕೆ ಸಂತೋಷ ತಂದಿದೆ. ಈ ಬಗ್ಗೆ ನಾಳೆ ಪೂರ್ವಭಾವಿ ಸಿದ್ಧತಾ ಸಭೆ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಖರ್ಗೆಯವರ ಅಧ್ಯಕ್ಷತೆ ರಾಜ್ಯಕ್ಕೆ ದೊಡ್ಡ ಶಕ್ತಿ ತಂದಿದೆ ಎಂದರು.

ಖರ್ಗೆಯವರ ನಿಷ್ಠೆ, ಪ್ರಾಮಾಣಿಕತೆ ಗುರುತಿಸಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಿದ್ದು, ಇದು ಕಾಂಗ್ರೆಸ್ ಪ್ರಜಾಪ್ರಭುತ್ವಕ್ಕೆ ಮಾದರಿಯಾಗಿದೆ. ಕಾಂಗ್ರೆಸ್‌ನಲ್ಲಿ ಮಾತ್ರ ಇದು ಸಾಧ್ಯ. ಬಿಜೆಪಿಯ ಆಪರೇಷನ್ ಕಮಲದ ಬಗ್ಗೆ ಸುಪ್ರೀಂ ಕೋರ್ಟ್‌ಗೆ ನಾನು ಮನವಿ ಮಾಡಿಕೊಂಡಿದ್ದು, ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದು ಸತ್ಯಾಸತ್ಯತೆಯ ತನಿಖೆ ನಡೆಸಬೇಕು. ತೆಲಂಗಾಣದಲ್ಲಿ ಆಪರೇಷನ್ ಕಮಲದ ಪ್ರಯತ್ನ ನಡೆದಿದೆ. ಕರ್ನಾಟಕ ಸೇರಿದಂತೆ ದೇಶದ ಇತರೆಡೆಗಳಲ್ಲೂ ಆಪರೇಷನ್ ಕಮಲ ನಡೆದಿದ್ದು, ಈ ಆಪರೇಷನ್ ಕಮಲಕ್ಕೆ ಮನಿ ಲ್ಯಾಂಡಿಂಗ್ ಕಾಯಿದೆಯಡಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸುಮೋಟೊ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಅವರು ಮನವಿ ಮಾಡಿದ್ದಾರೆ.
Also read: ರಿಪ್ಪನ್‌ಪೇಟೆ: ರೈಲಿಗೆ ಸಿಲುಕಿ ವ್ಯಕ್ತಿ ಸಾವು

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ ಹೆಚ್.ಎಸ್. ಸುಂದರೇಶ್, ಆರ್.ಎಂ. ಮಂಜುನಾಥ ಗೌಡ, ಎನ್. ರಮೇಶ್ ಮೊದಲಾದವರಿದ್ದರು.











Discussion about this post