ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶ್ರೀವಿಜಯ ಕಲಾನಿಕೇತನ ವತಿಯಿಂದ ಮಾರ್ಚ್ 27 ರ ಶನಿವಾರದಂದು ಸಂಜೆ 6 ಗಂಟೆಗೆ ಪವಿತ್ರಾಂಗಣದಲ್ಲಿ ಮಹಿಳಾ ಹರಿದಾಸರ ಕೃತಿಗಳನ್ನು ಆಧರಿಸಿದ ಹರಿವನಿತೆ ಎಂಬ ನೃತ್ಯ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಡಾ. ಕೆ.ಎಸ್.ಪವಿತ್ರ ಅವರು ಪ್ರಸ್ತುತ ಪಡಿಸಲಿರುವ ಈ ಕಾರ್ಯಕ್ರಮದಲ್ಲಿ ಖ್ಯಾತ ಗಮಕ ವಿದ್ವಾಂಸರೂ ಹಾಗೂ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಮನ್ವಯಾಧಿಕಾರಿ ಕಲಾಶ್ರೀ ಡಾ. ಎಂ. ಆರ್. ಸತ್ಯನಾರಾಯಣ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಶ್ರೀವಿಜಯ ದ ಅಧ್ಯಕ್ಷ ಡಾ. ಕೆ.ಆರ್. ಶ್ರೀಧರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮವು ಕೇಂದ್ರ ಸಂಗೀತ ನಾಟಕ ಅಕಾಡೆಮಿ, ನವದೆಹಲಿ ಇವರ ಸಹಯೋಗದೊಂದಿಗೆ ಮೂಡಿಬರಲಿದೆ. ಸಹೃದಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post