ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಹರೋಹರ ಜಾತ್ರೋತ್ಸವದ (Harohara Jatra) ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಭಕ್ತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ತಿಳಿಸಿದ್ದಾರೆ.
ಈ ತಿಂಗಳಲ್ಲಿ ವಿಜೃಂಭಣೆಯಿಂದ ನಡೆಯಲಿರುವ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಇಂದು ಶಾಸಕ ಚೆನ್ನಿ ಅವರು ಜಾತ್ರೆ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳ ಪ್ರಗತಿಯನ್ನು ಪರಿಶೀಲಿಸಿದರು.

Harohara Jatra : ಸುಗಮ ಸಂಚಾರಕ್ಕೆ ಕ್ರಮ
ಜಾತ್ರೋತ್ಸವದ ಸಂದರ್ಭದಲ್ಲಿ ಸಾವಿರಾರು ಭಕ್ತರು ಬರಿಗಾಲಿನಲ್ಲಿ ನಡೆದು ಹರಕೆ ಸಲ್ಲಿಸುವ ಹಿನ್ನೆಲೆಯಲ್ಲಿ ಜಾತ್ರೆ ಪ್ರದೇಶ ಹಾಗೂ ಸುತ್ತಮುತ್ತಲಿನ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛವಾಗಿಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಯಾವುದೇ ಅಡಚಣೆ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡಿದರು.
Also read>> ಜಿಲ್ಲೆಗೆ ಮತ್ತೆ ಮಧು ಬಂಗಾರಪ್ಪ : ಅಳೆದು ತೂಗಿ ಸಂಪುಟ ವಿಸ್ತರಣೆ
ಇನ್ನೂ, ಜಾತ್ರೆಯ ದಿನಗಳಲ್ಲಿ ಭಕ್ತರಿಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ನಿರಂತರ ಶುದ್ಧ ನೀರಿನ ವ್ಯವಸ್ಥೆ ಹಾಗೂ ಸಮರ್ಪಕ ಬೀದಿ ದೀಪಗಳ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಮೋಹನ್ ರೆಡ್ಡಿ, ಮಹಾನಗರ ಪಾಲಿಕೆಯ ಅಧಿಕಾರಿಗಳು, ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










