ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ #Bajarangdal activist Harsha murder ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆವರೆಗೂ ಐವರನ್ನು ಪೊಲೀಸರು ಬಂಧಿಸಿದ್ದು, ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ನಿನ್ನೆ ಮೂವರನ್ನು ಬಂಧಿಸಲಾಗಿತ್ತು. ಇಂದು ಇನ್ನಿಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
Also read: ಗದ್ದಲದ ನಡುವೆ ಚರ್ಚೆಯಿಲ್ಲದೇ ವಿಧಾನಸಭೆಯಲ್ಲಿ ಅಂಗೀಕಾರವಾದ ನಾಲ್ಕು ಮಸೂದೆಗಳಾವುವು?
ಪ್ರಕರಣದಲ್ಲಿ ಎ1 ಆಗಿರುವ ಖಾಸಿಫ್ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಶಿವಮೊಗ್ಗ ಪೊಲೀಸರು #Shivamogga Police ನದೀಮ್, ರಿಹಾನ್, ಆಸಿಫ್ ಹಗೂ ಅಪ್ನಾನ್ ಎನ್ನುವವರನ್ನು ಹೆಡೆಮುರಿ ಕಟ್ಟಿ ಬಂಧಿಸಲಾಗಿದೆ. ಉಳಿದಂತೆ ಪ್ರಕರಣ ಸಂಬಂಧ 10ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post