ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾವತಿ VISL ಕಾರ್ಖಾನೆಯನ್ನು #Bhadravathi VISL Factory ಮರು ನಿರ್ಮಾಣ ಮಾಡಲು ಕುಮಾರಣ್ಣ ಶಪಥ ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯ ಬೇಡ. ಅತೀ ಶೀಘ್ರದಲ್ಲಿ VISL ಕಾರ್ಖಾನೆ ಮರುಸ್ಥಾಪನೆ ಆಗುತ್ತೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ #Nikhil Kumaraswamy ಅವರು ತಿಳಿಸಿದರು.
ಪಟ್ಟಣದ ಗುಡ್ಡದ ಮಲ್ಲೇಶ್ವರ ಸಮುದಾಯ ಭವನದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಕುಮಾರಣ್ಣ ಕೇಂದ್ರದ ಸಚಿವರಾಗುತ್ತಿದ್ದಂತೆ ವಿಶೇಷ ಕಾಳಜಿ ವಹಿಸಿದ್ದಾರೆ. ನೂರಕ್ಕೆ ನೂರರಷ್ಟು ಇದಕ್ಕೆ ಮರು ಜೀವ ಕೊಡ್ತಾರೆ. ಜಿಲ್ಲೆಯ ಜನತೆಗೆ ಶಾಶ್ವತವಾಗಿ ಬದುಕು ಕಟ್ಟಿಕೊಳ್ಳುವುದಕ್ಕೆ ಈ ನಿರ್ಧಾರ ಮಾಡಿದ್ದಾರೆ ಎಂದು ಹೇಳಿದರು.
ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿ ಸಂಪೂರ್ಣವಾಗಿ ಮುಚ್ಚೋಗಿತ್ತು. ಅದನ್ನ ಕುಮಾರಣ್ಣ ಅವರ ದೃಢ ನಿರ್ಧಾರದಿಂದ ₹11,440 ಕೋಟಿ ವೆಚ್ಚದಲ್ಲಿ ಮರು ಜೀವ ನೀಡಿರುವುದು ನಮ್ಮ ಕಣ್ಮುಂದೆ ಇದೆ ಎಂದು ಹೇಳಿದರು.
ಈಗಾಗಲೇ ಇದಕ್ಕೆ ವಿಸ್ತೃತ ಯೋಜನಾ ವರದಿvಸಿದ್ಧವಾಗುತ್ತಿದೆ. ಇಡೀ ಕಾರ್ಖಾನೆಯನ್ನು ಹೊಸದಾಗಿ ಅತ್ಯಾಧುನಿಕವಾಗಿಮರು ನಿರ್ಮಾಣ ಮಾಡಬೇಕೆಂದು ಕುಮಾರಣ್ಣ ಅವರು ಶಪಥ ಮಾಡಿದ್ದಾರೆ. ನಿಮ್ಮೆಲ್ಲರ ಸಹಕಾರದಿಂದ ಅತಿ ಶೀಘ್ರದಲ್ಲೇ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಒತ್ತಿ ಹೇಳಿದರು.
ಜೆಡಿಎಸ್ ಸದಸ್ಯತ್ವ ಅಭಿಯಾನದ ಕಾರ್ಯಕ್ರಮಕ್ಕೆ ಜನರು ಅಭೂತಪೂರ್ವ ಬೆಂಬಲ ನೀಡುತ್ತಿರುವುದು ಗಮನಿಸಿದರೆ, ಇದು ಮುಂದಿನ ಚುನಾವಣೆಯ ದಿಕ್ಸೂಚಿ ತೊರಿಸುತ್ತದೆ.ಬದಲಾವಣೆಯ ಗಾಳಿ ತೊರುತ್ತದೆ ಎಂದರು.
ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಸಂಪರ್ಕ ನಿರಂತರವಾಗಿ ಇಟ್ಟುಕೊಳ್ಳುವ ನಿಮ್ಮ ಬಳಿಗೆ ನಾನು ಬಂದಿದ್ದೇನೆ. ಜನರ ಧ್ವನಿಯಾಗಿರುವ, ಪಕ್ಷ ಕಟ್ಟಲು ಶ್ರಮಿಸುವ ನಿಷ್ಟಾವಂತರನ್ನು ಗುರುತಿಸಿ ಕಾರ್ಯಕರ್ತರ ಸಮಕ್ಷಮ ತಾಪಂ, ಜಿಪಂ ಕ್ಷೇತ್ರಗಳಿಗೆ ಆಯ್ಕೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಶಿಮೊಗ್ಗ ಗ್ರಾಮಾಂತರಕ್ಕೆ ಭೇಟಿ ಕೊಟ್ಟ ನಿಖಿಲ್ ಕುಮಾರಸ್ವಾಮಿ ಅವರನ್ನು ಅದ್ದೂರಿ ಹಾಗೆ ಸ್ವಾಗತ ಕೋರಿರದು, ಅರಹತೊಳಲು ಕೈಮರ ಸರ್ಕಲ್ ನಲ್ಲಿ ಬೃಹತ್ ಗಾತ್ರದ ಹೂವಿನ ಹಾರ ಹಾಕುವುದರ ಮೂಲಕ ಅದ್ದೂರಿಯಾಗಿ ಬರ ಮಾಡಿಕೊಂಡರು.
ನಂತರ ಮಲ್ಲಾಪುರ ಗ್ರಾಮದ ಶ್ರೀ ಗುಡ್ಡದ ಮಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮಲ್ಲೇಶ್ವರಸ್ವಾಮಿಯ ಆಶೀರ್ವಾದ ಪಡೆದು ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ, ದೇವದುರ್ಗದ ಶಾಸಕರಾದ ಶ್ರೀಮತಿ ಕರೆಮ್ಮ ನಾಯಕ್, ವಿಧಾನಪರಿಷತ್ ಸದಸ್ಯರಾದ ಎಸ್.ಎಲ್. ಬೋಜೇಗೌಡ, ಮಾಜಿ ಶಾಸಕರಾದ ಸುರೇಶ್ ಗೌಡ, ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಮತಿ ರಶ್ಮಿ ರಾಮೇಗೌಡ, ಜಿಲ್ಲಾಧ್ಯಕ್ಷರಾದ ಕಡಿದಾಳ ಗೋಪಾಲ್, ಮಹಿಳಾ ಜಿಲ್ಲಾಧ್ಯಕ್ಷರಾದ ಗೀತಾ ಸತೀಶ್, ತಾಲ್ಲೂಕು ಅಧ್ಯಕ್ಷರಾದ ಸತೀಶ್ ಗೌಡ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post