ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟ ಮಹಿಳೆ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ (40) ಎಂದು ಗುರುತಿಸಲಾಗಿದ್ದು, ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು. ಈ ಸಂದರ್ಭ ಅಪಘಾತ ಸಂಭವಿಸಿದೆ. ಮೃತ ರೂಪಾ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರೂಪಾ ಪತಿ ಕಾಂತರಾಜ್ ಹಾಗೂ ರೂಪಾ ಸಹೋದರಿ ರೇಖಾ ಅವರಿಗೆ ತೀವ್ರ ರೀತಿಯ ಗಾಯಗಳಾಗಿದ್ದು ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post