ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿಮ್ಮ ಮನೆಯ ಚಿಕ್ಕ ಮಕ್ಕಳ ಆರೋಗ್ಯದ ಕುರಿತಾಗಿ ಯಾವುದೇ ರೀತಿಯಲ್ಲೂ ಪೋಷಕರು ನಿರ್ಲಕ್ಷ ಮಾಡಬಾರದು ಎಂದು ಶೇಷಾದ್ರಿಪುರಂ ಎನ್’ಇಎಸ್ ಕಾರ್ಯದರ್ಶಿ ಸಿ.ಎನ್. ನಾಗರಾಜ್ ಸಲಹೆ ನೀಡಿದರು.
ಎನ್’ಪಿಎಸ್ ಶಾಲೆಯ ಶಿಕ್ಷಕರಿಗೆ ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ಇಂದಿನ ಹವಾಮಾನ, ಜೀವನ ಶೈಲಿಗಳು ಮೊದಲಿನಂತೆ ಇಲ್ಲ. ಎಲ್ಲವೂ ಬದಲಾವಣೆಯಾಗಿದ್ದು, ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ, ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಎಲ್ಲರೂ ಮಾಡಿಸಿಕೊಳ್ಳುವುದು ಅಗತ್ಯ ಎಂದರು.
ಪ್ರಿವೆನ್ಷನ್ ಈಸ್ ಬೆಟರ್ ಥೆನ್ ಕ್ಯೂರ್ ಎಂಬಂತೆ ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತಲೂ ರೋಗ ಬಾರದಂತೆ ತಡೆಯುವುದು ಬುದ್ದಿವಂತರ ಲಕ್ಷಣ. ಅನಾರೋಗ್ಯಗಳು ನಮ್ಮತ್ತ ಸುಳಿಯದಂತೆ ಜೀವನ ಶೈಲಿ, ಆಹಾರ ಶೈಲಿಗಳನ್ನು ಬದಲಾವಣೆ ಮಾಡಿಕೊಳ್ಳುವ ಜೊತೆಯಲ್ಲಿ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಲತಾ ನಾಗೇಂದ್ರ ಮಾತನಾಡಿ, ಇತ್ತೀಚೀನ ದಿನಗಳಲ್ಲಿ ಮಕ್ಕಳಿಂದ ವೃದ್ಧರವರಿಗೆ ಎಲ್ಲಾ ವಯೋಮಾನದವರು ಒತ್ತಡದಲ್ಲಿ ಬದುಕುತ್ತಿz್ದೆÃವೆ. ನಮ್ಮ ದೇಹ ಹಾಗೂ ಮಾನಸಿನ ಆರೋಗ್ಯದ ಬಗ್ಗೆ ಗಮನ ಹರಿಸುವವರ ಸಂಖ್ಯೆ ಕಡಿಮೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಖಾಯಿಲೆಗಳಿಗೆ ಚಿಕಿತ್ಸೆ ಪಡೆಯುವುದಕ್ಕಿಂತ ಖಾಯಿಲೆ ಬಾರದಂತೆ ಮುಂಜಾಗ್ರತೆ ವಹಿಸಬೇಕು. ಆರೋಗ್ಯವನ್ನು ಪ್ರತಿಯೊಬ್ಬರು ಸದೃಢವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.
ಜನರ ಆರೋಗ್ಯಕ್ಕಾಗಿ ನಮ್ಮ ಸಂಸ್ಥೆ ಕಳೆದ ಮೂರು ದಶಕಗಳಿಂದಲೂ ಸೇವೆ ಸಲ್ಲಿಸುತ್ತಿದೆ. ಅದರಲ್ಲೂ ಪ್ರಮುಖವಾಗಿ ಹೆಣ್ಣು ಮಕ್ಕಳ ಆರೋಗ್ಯಕ್ಕಾಗಿ ನಾವು ಕಾಳಜಿ ವಹಿಸುತ್ತೇವೆ. ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
Also read: ಬಳ್ಳಾರಿ ಪೊಲೀಸರ ಭರ್ಜರಿ ಬೇಟೆ | 19 ಲಕ್ಷ ರೂ. ಮೌಲ್ಯದ ಗಾಂಜಾ ವಶ | ವಾಹೀದ್, ಚಾಂದ್ಪಾಷಾ ಬಂಧನ
ಹೆಣ್ಣು ಮಕ್ಕಳು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು. ಸ್ತನ ಕ್ಯಾನ್ಸರ್ ತಡೆಯಲು ನಿಯಮಿತ ತಪಾಸಣೆ, ಪರೀಕ್ಷೆ, ಸೂಕ್ತ ಮುಂಜಾಗ್ರತೆ ವಹಿಸಬೇಕು. ಇದಕ್ಕಾಗಿ ವೈದ್ಯರನ್ನು ನಿಯಮಿತವಾಗಿ ಭೇಟಿಯಾಗಿ ಪರೀಕ್ಷಿಸಗೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ನವೀನ ಪೈಸ್, ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಕಮ್ಯುನಿಟಿ ಮೆಡಿಸನ್ ಎಚ್’ಒಡಿ ಡಾ.ಡಿ.ಆರ್. ಬಾಲು, ಡಾ.ಭಾಗ್ಯಶ್ರೀ, ಡಾ. ಅನುಪಮಾ, ಡಾ.ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post