ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ #Thyavarekoppa Tiger and Lion Safari 15 ವರ್ಷದ ಗಂಡು ಚಿರತೆ ಭದ್ರಾಗೆ ಆರೋಗ್ಯ ಸಮಸ್ಯೆ ಉಂಟಾದ ಪರಿಣಾಮ ಕಳೆದ ರಾತ್ರಿ ನಗರದ ನಂಜಪ್ಪ ಆಸ್ಪತ್ರೆಯಲ್ಲಿ #Nanjappa Hospital ಸ್ಕ್ಯಾನಿಂಗ್ ಮಾಡಲಾಗಿದೆ.
ಕಳೆದ ಎರಡು ದಿನದಿಂದ ನಿತ್ರಾಣಗೊಂಡಿದ್ದ ಚಿರತೆಗೆ #Leopard ತುರ್ತಾಗಿ ಸ್ಕ್ಯಾನಿಂಗ್ ಅಗತ್ಯವಿದೆ ಎಂಬ ಮೃಗಾಲಯದ ವ್ಯದ್ಯರ ಸಲಹೆ ಮೇರೆಗೆ ಚಿರತೆಯನ್ನು ಆಸ್ಪತ್ರೆಗೆ ಕರೆತರಲಾಗಿತ್ತು.
ಮೃಗಾಲಯದಲ್ಲಿ ಎಂಆರ್‌ಐ ಸ್ಕ್ಯಾನಿಂಗ್ #MRI Scanning ವ್ಯವಸ್ಥೆ ಇಲ್ಲ. ಇತ್ತ ಪಶುವೈದ್ಯಕೀಯ ಕಾಲೇಜಿನಲ್ಲಿಯು ಈ ಸೌಲಭ್ಯವಿಲ್ಲ. ಆದ್ದರಿಂದ ನಂಜಪ್ಪ ಆಸ್ಪತ್ರೆಯಲ್ಲಿಯೇ ಸ್ಕ್ಯಾನಿಂಗ್ ಮಾಡಲು ನಿರ್ಧರಿಸಲಾಯಿತು. ಬೆಳಗಿನ ಹೊತ್ತು ಆಸ್ಪತ್ರೆಯಲ್ಲಿ ಜನ ಸಂದಣಿ ಹೆಚ್ಚಿರುವ ಹಿನ್ನೆಲೆ ಚಿರತೆಗೆ ನಡುರಾತ್ರಿ ಸ್ಕ್ಯಾನಿಂಗ್‌ಗೆ ವ್ಯವಸ್ಥೆ ಮಾಡಲಾಗಿತ್ತು.
ಚಿರತೆಗೆ ಮಂಪರು ಇಂಜೆಕ್ಷನ್ ನೀಡಿ, ಮೃಗಾಲಯದ ಸಿಬ್ಬಂದಿ ಚಿರತೆಯನ್ನು ನಂಜಪ್ಪ ಆಸ್ಪತ್ರೆಗೆ ಕರೆತಂದಿದ್ದರು. ಸ್ಕ್ಯಾನಿಂಗ್ ಪ್ರಕ್ರಿಯೆ ಆರಂಭವಾಗುವ ಹೊತ್ತಿಗೆ ಪುನಃ ಮಂಪರು ಇಂಜೆಕ್ಷನ್ ನೀಡಲಾಯಿತು. ಸುಮಾರು ಅರ್ಧ ಗಂಟೆ ಸ್ಕ್ಯಾನಿಂಗ್ ಪ್ರಕ್ರಿಯೆ ನಡೆಯಿತು. ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















