ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಳೆಯಿಂದ ಮನೆಯ ಗೋಡೆ ಕುಸಿದು, ವೃದ್ದೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳ್ಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿ ಸಿದ್ದಮ್ಮ (100) ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಮನೆಯಲ್ಲಿದ್ದ ಇತರೆ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸಿದ್ದಮ್ಮ ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವರ ಮನೆಗೆ ಆಗಮಿಸಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಹೇಮಾವತಿ ಎಂಬುವರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದಂತೆ ಅವರ ಕುಟುಂಬ ಸದಸ್ಯರಾದ ಪಲ್ಲವಿ, ಪರಶುರಾಮ್, ಚೇತನ್ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news























