ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಜನರನ್ನು ಹೈರಾಣಾಗಿಸಿದೆ.
ಮಲೆನಾಡು ಶಿವಮೊಗ್ಗದಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿದ್ದು ಜನರು ಹೈರಾಣಾಗಿದ್ದಾರೆ.
ಭಾರೀ ಮಳೆಯ ಪರಿಣಾಮ ಹಳ್ಳ ಕೊಳ್ಳ ಉಕ್ಕಿ ಹರಿಯುತ್ತಿದ್ದು ರಸ್ತೆ ಮೇಲೆಯೇ ಮಳೆಯ ನೀರು ಹರಿಯುತ್ತಿದೆ.
ಇನ್ನು ಭತ್ತದ ಗದ್ದೆಗಳು ಜಲಾವೃತಗೊಂಡಿದ್ದು, ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕಳೆದ ರಾತ್ರಿಯಿಂದಲ್ಲೂ ಬಿಟ್ಟೂ ಬಿಡದಂತೆ ಮಳೆ ಸುರಿಯುತ್ತಿದ್ದು, ಆದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ.
ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಜೋರು ಮಳೆಯಿಂದಾಗಿ ನದಿಗಳ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ಕಾಡಿನೊಳಗೆ ಹಳ್ಳಗಳು ಭೋರ್ಗರೆಯುತ್ತಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post