ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ಸಂಜೆ ನಗರದಲ್ಲಿ ಸುರಿದ ಭಾರೀ ಮಳೆ ಹಲವು ಕಡೆ ಅವಾಂತರ ಸೃಷ್ಟಿಸಿದೆ. ಸಂಜೆಯ ವೇಳೆಗೆ ನಗರದಲ್ಲಿ ವರುಣ ಅಬ್ಬರಿಸಿದ್ದು, ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ಹೊಸಮನೆ ರಾಜಕಾಲುವೆ ಬಳಿ ಇರುವ ಚೌಡೇಶ್ವರಿ ಕಾಲೋನಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ನಿಂತಿದ್ದು, ಅಕ್ಷರಶಃ ದ್ವೀಪದಂತೆ ಬಾಸವಾಗುತ್ತಿದೆ. ಈ ಪ್ರದೇಶದಲ್ಲಿ ನೂರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ.
ನಗರದ ಪ್ರತಿಷ್ಠಿತ ನ್ಯಾಷನಲ್ ಕಾಲೇಜು, ಮೆಡಿಕಲ್ ಕಾಲೇಜು ಆವರಣದಲ್ಲೂ ಸಹ ಎರಡೂ ಅಡಿಗೂ ಅಧಿಕ ಎತ್ತರ ನೀರು ನಿಂತಿದ್ದು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮನೆಗೆ ತೆರಳಲು ಪರದಾಡುವಂತಾಯಿತು.
Also read: ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಮೈತ್ರಿಯಿಂದ ಸನ್ಮಾನ
ಜೈಲ್ ರಸ್ತೆಯಲ್ಲಿ ಸುಮಾರು ಎರಡು ಅಡಿಗಳಷ್ಟು ನೀರು ಹರಿದಿದ್ದು, ವಾಹನ ಸವಾರರು ಪರದಾಡುವಂತಾಯಿತು. ಇದೇವೇಳೆ ಬಾಪೂಜಿ ನಗರ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ಇಂತಹದ್ದೆ ಪರಿಸ್ಥಿತಿ ಉಂಟಾಗಿದ್ದು, ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಯೇ ಈ ಅವಾಂತರಕ್ಕೆ ಕಾರಣ ಎಂದು ಜನರು ಹಿಡಿ ಶಾಪ ಹಾಕುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post