ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡು ಭಾಗದಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿರುವ ಪರಿಣಾಮ ತುಂಗಾ ಜಲಾಶಯ ತುಂಬಿದ್ದು, ನಾಲ್ಕು ಕ್ರಸ್ಟ್ ಗೇಟ್ ಮೂಲಕ ಒಂದು ಸಾವಿರ ಕ್ಯೂಸೆಕ್ ನೀರನ್ನು ಪವರ್ ಹೌಸ್ ಮೂಲಕ ನದಿಗೆ ಬಿಡಲಾಗಿದೆ.
ನೀರಿನ ಸಂಗ್ರಹ 588.24 ಮೀಟರ್ ಗರಿಷ್ಠ ಮಟ್ಟ ತಲುಪಿದ ಹಿನ್ನೆಲೆಯಲ್ಲಿ, ಮೇ 25 ರ ಬೆಳಿಗ್ಗೆಯಿಂದ ಡ್ಯಾಂನಿಂದ ನೀರು ಹೊರ ಹರಿಸಲಾಗುತ್ತಿದೆ.ಡ್ಯಾಂನಿಂದ 1 ಸಾವಿರ ಕ್ಯೂಸೆಕ್ ನೀರನ್ನು ಪವರ್ ಹೌಸ್ ಮೂಲಕ ನದಿಗೆ ಹೊರ ಬಿಡಲಾಗುತ್ತಿದೆ. ಸದ್ಯ ಡ್ಯಾಂನ ಒಳಹರಿವು 5 ಸಾವಿರ ಕ್ಯೂಸೆಕ್ ಇದೆ. ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ, ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡುಬರುತ್ತಿದೆ ಎಂದು ವರದಿಯಾಗಿದೆ.
ತುಂಗಾ ಜಲಾಶಯವು 3.24 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದೆ. ಅತ್ಯಂತ ಕಡಿಮೆ ವ್ಯಾಪ್ತಿ, ವಿಸ್ತೀರ್ಣ ಹೊಂದಿದೆ. ಪ್ರತಿ ಮಳೆಗಾಲದ ವೇಳೆ, ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲಿಗೆ ಭರ್ತಿಯಾಗುವ ಜಲಾಶಯವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post