ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 17ರವರೆಗೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ #Red Alert ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಇದರಂತೆ ಮಲೆನಾಡು ಜಿಲ್ಲೆಗಳಲ್ಲಿ ಇಂದು ಸೇರಿದಂತೆ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ.
ಜೂನ್ 13ರಂದು ಇಂದಿನಿಂದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಧಾರವಾಡ ಹಾಗೂ ಬೆಳಗಾಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೂನ್ 14ರಂದು ನಾಳೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೂನ್ 15ರಂದು ಶಿವಮೊಗ್ಗ, ಹಾಸನ, ಹಾವೇರಿ, ಗದಗ, ಹಾವೇರಿ, ಧಾರವಾಡ, ಬೆಳಗಾಂ, ವಿಜಯಪುರ, ಗುಲಬರ್ಗಾ ಹಾಗೂ ಬೀದರ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೂನ್ 16ರಂದು ಶಿವಮೊಗ್ಗದಲ್ಲಿ ಯೆಲ್ಲೋ, ಹಾಸನ, ಹಾವೇರಿ, ಗದಗ, ಬೆಳಗಾಂ ಹಾಗೂ ಬೀದರ್ ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೂನ್ 17ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಹಾಗೂ ಮೈಸೂರು, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ, ಬೆಳಗಾಂ ಹಾಗೂ ಬೀದರ್ ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಉಳಿದ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಅಲ್ಲೋಲ ಕಲ್ಲೋಲ
ಇನ್ನು, ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಗಳಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರೀ ಮಳೆ ಸುರಿದಿದ್ದು, ಹಲವು ಅವಾಂತರ ಸೃಷ್ಠಿಯಾಗಿದೆ.
ಅಯೋಧ್ಯಾ ನಗರದ ಒಬ್ಬರು ಮತ್ತು ಹುಬ್ಬಳ್ಳಿಯ ನೇಕಾರ ನಗರದ ಮತ್ತೊಬ್ಬರು ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದರೆ, ಮತ್ತೊಬ್ಬ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಒಬ್ಬ ವ್ಯಕ್ತಿ ಇನ್ನೂ ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಇದೇ ವೇಳೆ, ಕುಂದಗೋಳ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ, ಟ್ರಾಕ್ಟರ್ ಬಿದ್ದು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಸುಮಾರು 45 ಮನೆಗಳು ಹಾನಿಗೊಳಗಾಗಿದ್ದು, ಅವುಗಳಲ್ಲಿ ಕೆಲವು ಸಂಪೂರ್ಣವಾಗಿ ಕುಸಿದಿದ್ದರೆ, ಇನ್ನು ಕೆಲವು ಭಾಗಶಃ ಹಾನಿಗೊಳಗಾಗಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post