ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಹ ಏರಿಕೆಯಾಗುತ್ತಿರುವ ಪರಿಣಾಮ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದು, ನಿನ್ನೆಯಿಂದಲೇ ಜಾರಿಗೆ ಬರುವಂತೆ ಸೆಪ್ಟೆಂಬರ್ 15ರವೆರೆಗೂ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಶಿವಮೊಗ್ಗ ಜಿಲ್ಲೆ ಸೇರಿದಂತೆ ಯಾವುದೇ ಪ್ರದೇಶಗಳ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
Also read: ಅಂಧತ್ವ ಮೀರಿ ಐಎಎಸ್’ಗೆ ಸಿದ್ದವಾಗುತ್ತಿದ್ದ ಪ್ರತಿಭಾನ್ವಿತೆ ಮಾನಸಳನ್ನು ಬಲಿ ಪಡೆದ ಹಾವೇರಿ ಅಪಘಾತ
ಪರ್ಯಾಯ ಮಾರ್ಗ ಹೀಗಿದೆ:
- ತೀರ್ಥಹಳ್ಳಿ- ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳಿಗೆ ಬದಲಿ ಮಾರ್ಗವನ್ನು ಸೂಚಿಸಲಾಗಿದೆ.
- ತೀರ್ಥಹಳ್ಳಿ-ಮಾಸ್ತಿಕಟ್ಟೆ- ಸಿದ್ದಾಪುರ- ಕುಂದಾಪುರ- ಉಡುಪಿ ಮಾರ್ಗವಾಗಿ ಭಾರಿ ವಾಹನಗಳು ಸಂಚರಿಸುವಂತೆ ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post