ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ತೀರ್ಥಹಳ್ಳಿ, ಶೃಂಗೇರಿ ಸೇರಿದಂತೆ ಮಲೆನಾಡಿನಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಶಿವಮೊಗ್ಗದ ಕೋರ್ಪಳಯ್ಯನ ಛತ್ರದ ಬಳಿಯಿರುವ ಮಂಟಪ ಮುಳಗಡೆಯಾಗಿದೆ.
ಕಳೆದ ಕೆಲವು ದಿನಗಳಿಂದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನದಿ, ಕೆರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಅದರಂತೆ ಶಿವಮೊಗ್ಗದ ಜೀವನಾಡಿಯಾಗಿರುವ ತುಂಗಾ ನದಿಯ ಗಾಜನೂರು ಅಣೆಕಟ್ಟೆಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರನ್ನು ನದಿಗೆ ಹರಿಸಲಾಗುತ್ತಿದ್ದು, ಪರಿಣಾಮವಾಗಿ ತುಂಗೆ ಉಕ್ಕಿ ಹರಿಯುತ್ತಿದ್ದಾಳೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post