ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಮಿಳುನಾಡಿನ ಕೂನೂರಿನ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಹುತಾತ್ಮರಾದ CDS ಬಿಪಿನ್ ರಾವತ್ ದಂಪತಿ ಸೇರಿದಂತೆ 13 ಮಂದಿ ಹಿರಿಯ ಸೇನಾಧಿಕಾರಿಗಳಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಮೇಣದಬತ್ತಿ ಹಚ್ಚಿ ಮೌನಾಚರಣೆ ಮಾಡುವ ಮೂಲಕ ಭಾವಪೂರ್ಣ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎನ್. ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ಲೋಕೇಶ್ , ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಎಸ್. ಕುಮರೇಶ್, ಜಿಲ್ಲಾಧ್ಯಕ್ಷ ಅರ್ಜುನ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಪ್ರಧಾನ ಕಾರ್ಯದರ್ಶಿ ಎಂ. ರಾಕೇಶ್, ಪದಾಧಿಕಾರಿಗಳಾದ ಇರ್ಫಾನ್ , ಹಮೀದ್ ಶಂಕರ್, ವಿಶಾಲ್, ರಾಹುಲ್ , ಶ್ರೀನಿವಾಸ್ ಇತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post