No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.25ರಂದು ಶಿವಮೊಗ್ಗದಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ ಇಲ್ಲಿದೆ

ಫ್ರೀಡಂ ಪಾರ್ಕ್‌ನಲ್ಲಿ ಮುಗಿಲೆತ್ತರಕ್ಕೆ ಮಲೆನಾಡು | ಪೂಜಾರ್ ಅಕಾಡೆಮಿ ವತಿಯಿಂದ ಸಂಗೀತ ಕಾರ್ಯಕ್ರಮ | ಅಂಧರ ಚಲನಚಿತ್ರ ಗಾಯನ | ಶ್ರೀ ಬಲಮುರಿ ವಿಜಯ ಗಣಪತಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವ

kalpa News by kalpa News
February 23, 2023
in ಶಿವಮೊಗ್ಗ
0
ಫೆ.25ರಂದು ಶಿವಮೊಗ್ಗದಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ ಇಲ್ಲಿದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಾಗುತ್ತಿರುವುದನ್ನು ನಾವು ಸ್ವಾಗತಿಸುತ್ತೇವೆ ಮತ್ತು ಅದನ್ನು ಸಂಭ್ರಮದಿಂದ ಆಚರಿಸುವ ಉದ್ದೇಶದಿಂದ ಫೆ.25ರಂದು ಸಂಜೆ 4 ಗಂಟೆಯಿಂದ ಫ್ರೀಡಂ ಪಾರ್ಕ್‌ನಲ್ಲಿ ಫ್ಲೈ ಶಿವಮೊಗ್ಗ (ಮುಗಿಲೆತ್ತರಕ್ಕೆ ಮಲೆನಾಡು) ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಫ್ಲೈ ಶಿವಮೊಗ್ಗ ತಂಡದ ಸಂಚಾಲಕ ಹರಿಕೃಷ್ಣ ಹೇಳಿದರು.

ಅವರು ಇಂದು ಹೋಟೆಲ್ ಮಥುರಾ ಪ್ಯಾರಾಡೈಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದಲ್ಲಿ ವಿಮಾನ ನಿಲ್ದಣ ಉದ್ಘಾಟನೆಯಾಗುತ್ತಿರುವುದು ನಮಗೆಲ್ಲಾ ಅತ್ಯಂತ ಸಂಭ್ರಮ ತಂದಿದೆ. ಇದು ನಮ್ಮ ಕನಸಿನ ವಿಮಾನ ನಿಲ್ದಾಣ. ಶಿವಮೊಗ್ಗೆಗೊಂದು ಕಲಶಪ್ರಾಯ. ಹಿರಿಮೆ, ಗರಿಮೆ. ಇಂತಹ ಸಂತೋಷದ ವಿಷಯವನ್ನು ನಾವೆಲ್ಲಾ ಸಂಭ್ರಮಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ತಂಡ ಇದನ್ನು ಒಂದು ಸಾಂಸ್ಕೃತಿಕ ಹಬ್ಬವನ್ನಾಗಿ ಆಚರಿಸುತ್ತಿದೆ ಎಂದರು.
ಫೆ.25ರ ಸಂಜೆ 4 ಗಂಟೆಗೆ ಗಾಳಿಪಟಗಳನ್ನು ಹಾರಿಸುವ ಮೂಲಕ ವಿಮಾನ ಹಾರಾಟಕ್ಕೆ ನಾವು ಸ್ವಾಗತ ಕೋರುತ್ತೇವೆ. ನಮ್ಮ ಸಂಭ್ರಮ ಮುಗಿಲು ಮುಟ್ಟುವ ಸೂಚನೆ ಅದು. ಮುಗಿಲೆತ್ತರಕ್ಕೆ ನಮ್ಮ ಮಲೆನಾಡು ಇದೆ. ಯಾರು ಬೇಕಾದರೂ ಅಲ್ಲಿ ಗಾಳಿಪಟ ಹಾರಿಸಬಹುದಾಗಿದೆ. ಹಾಗೆಯೇ ಸಂಗೀತ ರಸಮಂಜರಿ ಕಾರ್ಯಕ್ರಮ ಕೂಡ ನಡೆಯಲಿದೆ. ಸ್ಥಳೀಯ ಕಲಾವಿದರು ಇದರಲ್ಲಿ ಭಾಗವಹಿಸುತ್ತಾರೆ. ಮತ್ತು ರಾತ್ರಿ 7 ಗಂಟೆಗೆ ಸಿಡಿಮದ್ದುಗಳ ಪ್ರದರ್ಶನವಿದೆ. ಕತ್ತಲನ್ನು ಕಿತ್ತೊಗೆಯುವ ಬೆಳಿನ ಹಬ್ಬದ ಸಂಕೇತವಾಗಿದೆ. ಒಟ್ಟಾರೆ ಇದೊಂದು ಸಂಭ್ರಮದ ಮುಗಿಲೆತ್ತರದ ಮಲೆನಡು ಎಂಬ ವಿನೂತನ ಕಾರ್ಯಕ್ರಮವಾಗಿದೆ ಎಂದರು.

ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ಬರಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ ಮುಂತಾದವರು ಕಾರಣರಾಗಿದ್ದಾರೆ. ಇವರೆಲ್ಲರಿಗೂ ಫ್ಲೈ ತಂಡದಿಂದ ಅಭಿನಂದನೆಗಳು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಪ್ರಕಾಶ್, ಗಣೇಶ್ ಬಿಳಕಿ, ವಿಜಯ್ ಇನ್ನಿತರರು ಇದ್ದರು.
ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ
ಶಿವಮೊಗ್ಗದ ಸಂಗೀತ ಶಿಕ್ಷಣ ಸಂಸ್ಥೆಯಾದ ಪೂಜಾರ್ ಅಕಾಡೆಮಿ ಆಫ್ ಮ್ಯೂಸಿಕ್ ವತಿಯಿಂದ ಫೆ.25ರ ಸಂಜೆ 5.30ಕ್ಕೆ ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪೂಜಾರ್ ಅಕಾಡೆಮಿಯ ಅಧ್ಯಕ್ಷ ರಾಜೀವ್ ಪೂಜಾರ್ ತಿಳಿಸಿದರು.

ಅವರು ಇಂದು ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಮೈಸೂರಿನ ಜನಪ್ರಿಯ ಹಾಗೂ ಅಪ್ರತಿಮ ಕರ್ನಾಟಕ ಸಂಗೀತ ಶಾರದೆ ವಿದುಷಿ ಡಾ.ಸುಕನ್ಯಾ ಪ್ರಭಾಕರ್ ಇವರಿಂದ ಗಾಯನವಿದ್ದು, ಸಹ ಗಾಯಕರಾಗಿ ವೇದ ವಿನೋದ್, ಬೆಂಗಳೂರಿನ ವಿಶ್ವಜಿತ್‌ರಿಂದ ಪಿಟೀಲು, ಚಲುವರಾಜ್ ಅವರಿಂದ ಬೃದಂಗ ಹಾಗೂ ಗುರುಮೂರ್ತಿ ಘಟಂ ನುಡಿಸಲಿದ್ದಾರೆ ಎಂದರು.

ವಿದುಷಿ ಡಾ.ಸುಕನ್ಯಾ ಪ್ರಭಾಕರ್ ಪರಿಚಯ:
ಇವರು ಸಂಗೀತ ಕುಟುಂಬದಲ್ಲಿ ಜನಿಸಿದ್ದು, ತಾಯಿ ಲಕ್ಷ್ಮಮ್ಮ ಸುಬ್ಬರಾವ್‌ರಿಂದ ಮೊದಲ ಸಂಗೀತ ಪಾಠವನ್ನು 1977ರಿಂದ ಇಲ್ಲಿಯವರೆಗೆ ಸಂಗೀತ ಕಚೇರಿ ನೀಡುತ್ತಾ ಬಂದಿದ್ದಾರೆ. ರಾಜ್ಯ, ರಾಷ್ಟ್ರ ಹಾಗೂ ವಿದೇಶಗಳಲ್ಲೂ ಸಹ ಗಾಯನ ಕಾರ್ಯಕ್ರಮ ನೀಡಿದ್ದಾರೆ. ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದಲ್ಲಿ ಏ ಗ್ರೇಡ್ ಕಲಾವಿದರಾಗಿದ್ದಾರೆ. ಅನೇಕ ಭಕ್ತಿಗೀತೆಗಳಿಗೆ ಮತ್ತು ಧ್ವನಿಮುದ್ರಿತ ಆಲ್ಬಂಗಳಿಗೆ ಧ್ವನಿ ನೀಡಿರುವ ಅವರು, ಮೈಸೂರಿನಲ್ಲಿ ಸುರಭಿ ಗಾನ ಕಲಾಮಂಡಳಿ ಎಂಬ ಸಂಗೀತ ಶಾಲೆ ಆರಂಭಿಸಿ ನೂರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಇವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿದೆ.

ಪತ್ರಿಕಾಗೋಷ್ಟಿಯಲ್ಲಿ ಡಾ.ನಾಗರಾಜ್, ರೇಣುಕಾ ಕಾರಂತ್ ಉಪಸ್ಥಿತರಿದ್ದರು.
ಅಂಧರ ಚಲನಚಿತ್ರ ಗಾಯನ ಕಾರ್ಯಕ್ರಮ
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ವತಿಯಿಂದ ಫೆ.25ರ ಸಂಜೆ 6 ಗಂಟೆಗೆ ಸುವರ್ಣ ಸಂಸ್ಕೃತಿ ಭವನದಲ್ಲಿ ಮೈ ಆಟೋಗ್ರಾಫ್ ಖ್ಯಾತಿಯ ಅಂಧರ ಚಲನಚಿತ್ರ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಮಂಜುಳಾ ರಾಜು ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ವಿಕಲಚೇತನರನ್ನು ಮತ್ತು ಕಲೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ. 12 ಜನರ ಅಂಧರ ತಂಡ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದೆ ಎಂದರು.

Also read: ಶಿವಮೊಗ್ಗಕ್ಕೆ ಬಂತು ವಾಯುಪಡೆಯ 2ನೆಯ ವಿಮಾನ: ಪ್ರಧಾನಿ ಕಾರು, ಎಸ್’ಪಿಜಿ ಸಿಬ್ಬಂದಿ ಆಗಮನ

ಶಾಸಕ ಕೆ.ಎಸ್. ಈಶ್ವರಪ್ಪ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಶಿಕ್ಷಣ ತಜ್ಞ ಕಾರ್ತಿಕ್ ಸೆರಗೂರ್, ಐಡಿಯಲ್ ಫೌಂಡೇಶನ್ ಅಧ್ಯಕ್ಷ ಶೈನಿ ಪೌಲ್, ರೋಟರ್ ಅಸಿಸ್ಟೆಂಟ್ ಗೌವರ್ನರ್ ಸುನೀತಾ ಶ್ರೀಧರ್ ಆಗಮಿಸಲಿದ್ದಾರೆ ಎಂದರು.

ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ದಿವ್ಯಾಂಗರಿಗೆ ಉಚಿತ ಸೇವಾ ಸೌಲಭ್ಯ, ಕೃತಕ ಕಾಲು ಜೋಡಣೆ ಹಾಗೂ ನೇತ್ರದಾನ ಶಿಬಿರ, ಸರ್ಕಾರಿ ಶಾಲೆಗಳ ಅವಶ್ಯಕತೆಗಳಿಗನುಗುಣವಾಗಿ ಕುಡಿಯುವ ನೀರಿನ ಸೌಲಭ್ಯ, ಮಹಿಳೆಯರಿಗೆ ಸ್ವಂತ ದುಡಿಮೆ ಕಾರ್ಯಾಗಾರ, ಮಕ್ಕಳ ಪೌಷ್ಟಿಕತೆ ಬಗ್ಗೆ ನಿವೃತ್ತ ವೈದ್ಯರಿಂದ ತಾಯಂದಿರಿಗೆ ಮಾರ್ಗದರ್ಶನ, ಸರ್ಕಾರಿ ಶಾಲೆಗಳ ಮಕ್ಕಳ ಉನ್ನತೀಕರಣ ಇತ್ಯಾದಿ ಕಾರ್ಯಕ್ರಮಗಳನ್ನು ರೋಟರಿ ಕ್ಲಬ್ ಮಲೆನಾಡು ವತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಕಾರ್ಯಕ್ರಮದ ಅಧ್ಯಕ್ಷ ರಾಜು ಸಿ., ಕ್ಲಬ್‌ನ ಕಾರ್ಯದರ್ಶಿ ಕಿಶನ್ ಎನ್. ಪಟಕುಲೆ, ಮಮತಾ, ಅಲೇಖ, ಮುಸ್ತಾಕ್‌ಅಲಿ ಇನ್ನಿತರರಿದ್ದರು.
ಶ್ರೀ ಬಲಮುರಿ ವಿಜಯ ಗಣಪತಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವ
ಕೆಎಚ್‌ಬಿ ಕಾಲೋನಿ- ಚಾಲುಕ್ಯ ನಗರದಲ್ಲಿ ಬ್ರಾಹ್ಮಣ ಸೇವಾ ಸಂಘದ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟಿರುವ ಶ್ರೀ ಬಲಮುರಿ ವಿಜಯ ಗಣಪತಿ ದೇವಸ್ಥಾನ ಮತ್ತು ಸುರಭಿ ಸಮುದಾಯ ಭವನ ಇದರ ಏಳನೇ ವರ್ಷದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಫೆ. 25ರ ಶನಿವಾರದಂದು ಆಯೋಜಿಸಲಾಗಿದೆ.

ವಾರ್ಷಿಕೋತ್ಸವ ಹಾಗೂ ಲೋಕಕಲ್ಯಾಣಾರ್ಥವಾಗಿ 108 ಪರಿಕಲಶ ಸಹಿತ ಬ್ರಹ್ಮಕಳಶಾಭಿಷೇಕ ಮತ್ತು ಆಧಿವಾಸ ಹೋಮ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11ಕ್ಕೆ ಕುಂಭಾಭಿಷೇಕ ಮಧ್ಯಾಹ್ನ 1ಕ್ಕೆ ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ನಂತರ ಅನ್ನಸಂತಪಣೆ ನಡೆಯಲಿದೆ.

ಅಂದು ಸಂಜೆ 6 ಗಂಟೆಯಿಂದ ಶ್ರೀನಿಕೇತನ ಭಜನಾ ಮಂಡಳಿ ಇವರಿಂದ ಭಜನೆ ಹಾಗೂ ಸಂಜೆ 7ಕ್ಕೆ ರಂಗಪೂಜೆ ಕಾರ್ಯಕ್ರಮ ಹಾಗೂ ಪ್ರಸಾದ ವಿನಿಯೋಗ ಇರುತ್ತದೆ.
ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವಂತೆ ಬ್ರಾಹ್ಮಣ ಸೇವಾ ಸಂಘ ಗೋಪಾಳ  ಇದರ ಅಧ್ಯಕ್ಷರು ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗಕ್ಕೆ ಬಂತು ವಾಯುಪಡೆಯ 2ನೆಯ ವಿಮಾನ: ಪ್ರಧಾನಿ ಕಾರು, ಎಸ್’ಪಿಜಿ ಸಿಬ್ಬಂದಿ ಆಗಮನ

Next Post

ಓದುಗರನ್ನು ತ್ವರಿತವಾಗಿ ತಲುಪುವಲ್ಲಿ ಡಿಜಿಟಲ್ ಮಾಧ್ಯಮದ ಪಾತ್ರ ಮಹತ್ವದ್ದು

kalpa News

kalpa News

Next Post
ಓದುಗರನ್ನು ತ್ವರಿತವಾಗಿ ತಲುಪುವಲ್ಲಿ ಡಿಜಿಟಲ್ ಮಾಧ್ಯಮದ ಪಾತ್ರ ಮಹತ್ವದ್ದು

ಓದುಗರನ್ನು ತ್ವರಿತವಾಗಿ ತಲುಪುವಲ್ಲಿ ಡಿಜಿಟಲ್ ಮಾಧ್ಯಮದ ಪಾತ್ರ ಮಹತ್ವದ್ದು

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL