ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಉಚಿತವಾಗಿ ಹಾಗೂ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇದರಿಂದ ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ಅಕ್ಕಪಕ್ಕ ಜಿಲ್ಲೆಯ ಜನರಿಗೂ ಅನುಕೂಲವಾಗುತ್ತಿದೆ ಎಂದು ಸಿಮ್ಸ್ ನಿರ್ದೇಶಕರಾದ ಡಾ. ವಿರೂಪಾಕ್ಷಪ್ಪ ತಿಳಿಸಿದರು.
ಮಂಗಳವಾರ ಮೆಗ್ಗಾನ್ ಆಸ್ಪತ್ರೆಯ ಕನ್ಫಿರೆನ್ಸ್ ಹಾಲ್‍ನಲ್ಲಿ ಮಾಧ್ಯಮಗಾರರನ್ನು ಉದ್ದೇಶಿಸಿ ಅವರು ಮಾತನಾಡಿ, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ 1200 ಹಾಸಿಗೆಯ ಸಾಮಥ್ರ್ಯವನ್ನು ಹೊಂದಿದೆ. ಇದರಿಂದ ಅಕ್ಕ ಪಕ್ಕದ ಜಿಲ್ಲೆಗಳಾದ ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ ಹಾಗೂ ಉತ್ತರ ಕನ್ನಡದಿಂದಲೂ ಸಹ ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದು, ಪ್ರತಿ ದಿನ ಶೇ.90 ರಷ್ಟು ಹೊರರೋಗಿಗಳು ದಾಖಲಾಗುತ್ತಿದ್ದಾರೆ ಎಂದರು.

ಇದರ ಜೊತೆಗೆ ಈಗ ಪ್ಯಾರ ಮೆಡಿಕಲ್, ಪಿಹೆಚ್ ಎಸ್, ನರ್ಸಿಂಗ್ ಕಾಲೇಜುಗಳು ನಡೆಯುತ್ತಿದ್ದು, 2000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾತಿಯಾಗಿದ್ದಾರೆ. ಸೂಪರ್ ಸ್ಪೆಷಲಿಟಿ, ಮಕ್ಕಳ ಆಸ್ಪತ್ರೆ, ವಸತಿ ಗೃಹ, ಯುಜಿ ಹಾಸ್ಟೆಲ್, ಬಾಯ್ಸ್ ಅಂಡ್ ಲೇಡಿಸ್ ಹಾಸ್ಟೆಲ್, ಆಧುನಿಕ ಶವಗಾರ ಹಾಗೂ ವೈದ್ಯಕೀಯ ಅಧಿಕಾರಿಗಾಗಿ 237 ಕ್ವಾಟ್ರಸ್ ಮನೆಗಳನ್ನು ನಿರ್ಮಿಸಲಾಗಿದೆ ಎಂದರು.“ಮೂರು ನಾಲ್ಕು ಆಸ್ಪತ್ರೆಗಳು ಸೇರಿ ಒಂದೇ ಆಸ್ಪತ್ರೆಯಲ್ಲಿ ಸೇವೆ ಮೆಗ್ಗಾನ್ ಅಲ್ಲಿ ಸಿಗುತ್ತಿದೆ. ಜನವರಿ ಯಿಂದ ಆಗಸ್ಟ್ ನಲ್ಲಿ ಪ್ರತಿ ದಿನ ಹೊರರೋಗಿಗಳು ಮತ್ತು ಒಳರೋಗಿಗಳು ಸೇರಿ 4500 ಜನ ಹಾಗೂ ಪ್ರತಿ ತಿಂಗಳು ಎಬಿಆರ್‍ಕೆ ಯಲ್ಲಿ 3000 ರೋಗಿಗಳು ಉಚಿತ ಸೇವೆ ಪಡೆಯುತ್ತಿದ್ದಾರೆ. ಇದರಿಂದ 200 ಕೋಟಿ ಹಣವನ್ನು ಪ್ರತಿರ್ಷ ರೋಗಿಗಳಿಗೆ ಈ ಯೋಜನೆಯಲ್ಲಿ ವೆಚ್ಚ ಮಾಡುತ್ತಿದೆ ಎಂದರು.

ಸಿಮ್ಸ್ ಮುಖ್ಯ ಅಧೀಕ್ಷಕರಾದ ಡಾ.ಸಿದ್ದಪ್ಪ ಮಾತನಾಡಿ, ಉಪ ಲೋಕಾಯುಕ್ತರು ಮೆಗ್ಗಾನ್ ಭೇಟಿ ನೀಡಿ ರೋಗಿಗಳೊಂದಿಗೆ ಸಮಾಲೋಚಿಸಿದ್ದರೂ ಆಸ್ಪತ್ರೆಯ ಬಗ್ಗೆ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಆಸ್ಪತ್ರೆಯ ಒಳಾಂಗಣದಲ್ಲಿ ಹಾಗೂ ಹೊರಾಂಗಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಾಡಲು ಈಗಾಗಲೇ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರಂತೆ ಹೆರಿಗೆನಲ್ಲಿ ವಾರ್ಡ್‍ನಲ್ಲಿ ಪುರುಷ ಸಿಬ್ಬಂದಿಯನ್ನು ನಿರ್ಬಂಧಿಸಲಾಗಿದೆ. ಮಕ್ಕಳ ಕಳ್ಳತನ ತಡೆಯಲು ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ.
ಮುಲಭೂತ ಸೌಕರ್ಯ ಸಂಬಂಧಿಸಿದಂತೆ ರೋಗಿಗಳಿಗೆ ಹಾಗೂ ಚಿಕಿತ್ಸೆಗೆ ಬರುವ ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರು, ಹಾಸಿಗೆ ಹಾಗೂ ಶೌಚಾಲಯಗಳನ್ನು ದಿನಕ್ಕೆ ಕನಿಷ್ಠ ಎರಡು ಬಾರಿ ಸ್ವಚ್ಛವಾಗಿಸಲಾಗುತ್ತಿದೆ ಎಂದರು. “ಸುದ್ದಿಗೋಷ್ಠಿಯಲ್ಲಿ ಸಿಮ್ಸ್ ಅಧೀಕ್ಷಕರಾದ ಡಾ. ತಿಮ್ಮಪ್ಪ, ಸಿಮ್ಸ್ ವಿಶೇಷ ಅಧಿಕಾರಿಯಾದ ಪರಮೇಶ್ವರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಸಿದ್ದನಗೌಡ ಪಾಟೀಲ್ ಹಾಗೂ ವೈದ್ಯಕೀಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post