ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿಂದು ಜಾಗರಣ ವೇದಿಕೆ ಕರ್ನಾಟಕ ದಕ್ಷಿಣದ 3ನೇ ತ್ರೈವಾರ್ಷಿಕ ಪ್ರಾಂತ ಸಮ್ಮೇಳನ ಪ್ರಾಂತೀಯ ಕಾರ್ಯಕರ್ತರ ಸಮಾಗಮ ಅಂಗವಾಗಿ ಇಂದು ನಗರದ ಎನ್.ಇ.ಎಸ್. ಮೈದಾನಕ್ಕೆ ಸಂಸದ ಬಿ. ವೈ. ರಾಘವೇಂದ್ರ MP Raghavendra ಭೇಟಿ ನೀಡಿ ಸಿದ್ಧತೆಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಕ್ಷೇತ್ರೀಯ ಸಂಚಾಲಕ ಜಗದೀಶ್ ಕಾರಂತ್, ಕಾರ್ಯದರ್ಶಿ ದೊ. ಕೇಶವ ಮೂರ್ತಿ, ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್, ಎಸ್. ದತ್ತಾತ್ರಿ, ಯಾದವ ಕೃಷ್ಣ, ಬಳ್ಳೆಕೆರೆ ಸಂತೋಷ್, ರವಿ ಕುಮಾರ್, ಜಾಗರಣ ವೇದಿಕೆಯ ರಾಜ್ಯ ಮತ್ತು ಜಿಲ್ಲಾ ಪ್ರಮುಖರು ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















