ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಕೋಟೆ ಶ್ರೀ ಭೀಮೇಶ್ವರ ದೇವಾಲಯದಲ್ಲಿ ಹಿಂದೂ ಮಹಾಸಭಾ #Hindu Mahasabha Ganapathi Shivamogga ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾಪೂರ್ವ ಮೆರವಣಿಗೆಗೆ ಇಂದು ವೈಭವದ ಚಾಲನೆ ದೊರೆಯಿತು.
ಶಾಸಕ ಎಸ್.ಎನ್. ಚನ್ನಬಸಪ್ಪ, ಆರ್‌ಎಸ್‌ಎಸ್ ಪ್ರಮುಖ್ ಪಟ್ಟಾಭಿ, ಹಿಂದೂ ಮಹಾಸಭಾ ಸಂಘಟನೆಯ ಪ್ರಮುಖರು, ಗಣ್ಯರು ಸೇರಿದಂತೆ ಸಮಿತಿಯ ಮುಖಂಡರು ಮೆರವಣಿಗೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಇದ್ದರು. ಇಂದು ಬೆಳಿಗ್ಗೆ 10:45ಕ್ಕೆ ಗಣಪತಿಗೆ ಮಹಾ ಮಂಗಳಾರತಿ ಪೂಜೆ ನೆರವೇರಿಸುವುದರೊಂದಿಗೆ ರಾಜಬೀದಿ ಉತ್ಸವ ಆರಂಭವಾಯಿತು. ಹೆಜ್ಜೆ ಹೆಜ್ಜೆಗೂ ಪೊಲೀಸರ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಇಡೀ ನಗರವೇ ಕೇಸರಿಮಯವಾಗಿದೆ. ಇಂದಿನ ಅದ್ದೂರಿ ಮೆರವಣಿಗೆಯಲ್ಲಿ ಕಲಾತಂಡಗಳು, ಮಂಗಳ ವಾದ್ಯ, ಚಂಡೆ ಮೇಳ, ಡೊಳ್ಳು ಕುಣಿತ, ಕಹಳೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ರಂಗು ತಂದಿದೆ.
ಮೆರವಣಿಗೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ನಗರದ ಎಲ್ಲೆಡೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಸಿಸಿ ಟಿವಿ, ಡ್ರೋಣ್ ಕ್ಯಾಮೆರಾಗಳಲ್ಲಿ ಪ್ರತಿ ಹಂತದಲ್ಲೂ ಎಚ್ಚರಿಕೆ ವಹಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post