ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ – 13 ರ ನಡುವೆ ಹಾದುಹೋಗುವ ಹೊಳೆಹೊನ್ನೂರು ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸುಸಜ್ಜಿತ ನೂತನ ಸೇತುವೆ ಹಾಗೂ ಬೈಪಾಸ್ ರಸ್ತೆಯನ್ನು ಇಂದು ಸಾರ್ವಜನಿಕ ಬಳಕೆಗೆ ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಾಯಿತು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ಒಟ್ಟು 518.00 ಕೋಟಿ ವೆಚ್ಚದಲ್ಲಿ 106 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿ ಪಡಿಸುವ ಈ ಯೋಜನೆಯಲ್ಲಿ ಸುಮಾರು 80.00 ಕೋಟಿ ವೆಚ್ಚದಲ್ಲಿ ಹೊಳೆಹೊನ್ನೂರು ಸೇತುವೆ ಮತ್ತು ಬೈಪಾಸ್ ಅಭಿವೃದ್ಧಿಪಡಿಸಿ ಈ ಭಾಗದ ಜನರ ಹಲವಾರು ವರ್ಷಗಳ ಬೇಡಿಕೆಗೆ ಸ್ಪಂದಿಸಲಾಗಿದೆ. ಇದನ್ನು ಸಾಕಾರಗೊಳಿಸಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಮತ್ತೊಮ್ಮೆ ಅಭಿನಂದಿಸುತ್ತೇನೆ ಹೇಳಿದ್ದಾರೆ.
ಈ ಸಮಯದಲ್ಲಿ ಶಾಸಕರಾದ ಅರುಣ್ , ಭಾರತಿ ಶೆಟ್ಟಿ, ಗ್ರಾಮಾಂತರ ಮಾಜಿ ಶಾಸಕ ಅಶೋಕ್ ನಾಯಕ್, ಮಂಡಲ ಅಧ್ಯಕ್ಷ ಮಲ್ಲೇಶಪ್ಪ ಅವರು ಸೇರಿದಂತೆ ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post