ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೋಳಿ ಹುಣ್ಣಿಮೆ ಆಚರಣೆ ನಗರದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದ್ದು, ವಯಸ್ಸಿನ ಬೇಧ ಮರೆತು ಖುಷಿಯ ಹಂಚಿಕೆಯಲ್ಲಿ ತೊಡಗಿದ್ದಾರೆ.
ನಗರದಾದ್ಯಂತ ಹೋಳಿ ಸಂಭ್ರಮ ಮನೆ ಮಾಡಿದ್ದು, ವಿವಿಧ ಬಡಾವಣೆಗಳಲ್ಲಿ ವಯಸ್ಸಿನ ಬೇಧವಿಲ್ಲದೇ ಎಲ್ಲರೂ ಹಬ್ಬದ ಸಡಗರದಲ್ಲಿ ಪಾಲ್ಗೊಂಡಿದ್ದಾರೆ. ಕುಟುಂಬದವರು, ಸ್ನೇಹಿತರು ಬಣ್ಣ ಹಚ್ಚಿಕೊಂಡು ಖುಷಿ ಪಡುತ್ತಿದ್ದಾರೆ.

ಪ್ರಮುಖವಾಗಿ ಗೋಪಿ ಸರ್ಕಲ್’ನಲ್ಲಿ ಕೇಸರಿ ಅಲಂಕಾರ ಸಮಿತಿ ವತಿಯಿಂದ ಹೋಳಿ ಹಬ್ಬವನ್ನು ಆಚರಿಸಲಾಗಿದ್ದು, ನೂರಾರು ಯುವಕ ಯುವತಿಯರು ಬಣ್ಣ ಹಚ್ಚಿ, ಹಾಡಿಗೆ ಭರ್ಜರಿ ಸ್ಟೆಪ್ ಹಾಕಿ ಸಂಭ್ರಮಿಸಿದ್ದಾರೆ.
ಇದಲ್ಲದೇ, ಗಾಂಧಿ ಬಜಾರ್, ಕೋಟೆ ಏರಿಯಾ, ಹಳೇ ಶಿವಮೊಗ್ಗ ಭಾಗದಲ್ಲಿ ಹೋಳಿ ಸಂಭ್ರಮ ಭರ್ಜರಿಯಾಗಿ ನಡೆದಿದ್ದು, ಬಣ್ಣದ ಒಕುಳಿಯಲ್ಲಿ ಮಿಂದಿದ್ದ ಯುವಕರು ಶಿವಮೊಗ್ಗ ನಗರದ ವಿವಿಧೆಡೆ ಬೈಕ್ ರೈಡ್ ಮಾಡುತ್ತಿದ್ದಾರೆ. ನಗರದಾದ್ಯಂತ ಬೈಕ್’ನಲ್ಲಿ ಸುತ್ತಾಡಿದ ಯುವಕರು, ಬಣ್ಣ ಹಾಕಿ ಸಂಭ್ರಮಿಸುತ್ತಿದ್ದಾರೆ.
ಇನ್ನು, ಹೋಳಿ ಹಬ್ಬದ ಸಂಭ್ರಮದ ನಡುವೆ ಯಾವುದೇ ರೀತಿಯ ಅಡಚಣೆ ಉಂಟಾಗದAತೆ ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ನಗರದ ಸೂಕ್ಷö್ಮ ಪ್ರದೇಶಗಳಲ್ಲಿ, ಹಬ್ಬದ ಆಚರಣೆಗೆ ಹೆಚ್ಚಿನ ಜನ ಸೇರುವ ಕಡೆಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















