ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ತಾಲೂಕು ಕೂಡಲಿ ಗ್ರಾಪಂ ವ್ಯಾಪ್ತಿಯ ಚಿಕ್ಕ ಕೂಡ್ಲಿ ಗ್ರಾಮದಲ್ಲಿ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದಿರುವ ಘಟನೆ ಇಂದು ನಡೆದಿದೆ.
ಮುಂಜಾನೆ ಸವಿ ನಿದ್ರೆಯಲ್ಲಿದ್ದ ಕುಟುಂಬ ಸದಸ್ಯರು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಕುಸಿದು ಬಿದ್ದಿರುವ ಮನೆ ಪಾರ್ವತಮ್ಮ ಎಂಬುವರಿಗೆ ಸೇರಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯರಾದ ಸುನಿಲ್ ಹಾಗೂ ವಿಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಕ್ಕೆ ಗ್ರಾಮದ ಸಮುದಾಯ ಭವನದಲ್ಲಿ ಆಶ್ರಯ ಕಲ್ಲಿಸಲಾಗಿದ್ದು, ಸೂಕ್ತ ಪರಿಹಾರ ಕಲ್ಪಿಸುವಂತೆ ಗ್ರಾಮದ ಮುಖಂಡ ಪ್ರಭಾಕರ್ ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post