ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸವಳಂಗ ಶಿಕಾರಿಪುರ ಮಧ್ಯ ಚಿನ್ನಿಕಟ್ಟೆ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಸ್ಥಳದಲ್ಲೇ 4 ಜನ ಮೃತಪಟ್ಟಿರುವ ಘಟನೆ ನಡೆದಿದೆ.

ಕೆ ಎಸ್ ಆರ್ ಟಿ ಸಿ ಬಸ್ ಗೆ ಕಾರು ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಓರ್ವರ ಸ್ಥಿತಿ ಗಂಭೀರವಾಗಿದೆ.
ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















