ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಾರ್ಡ್ 20ರ ಹೊಸಮನೆ ಬಡಾವಣೆಯ ಬೂತ್ ನಂಬರ್ 74ರಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್‌ಗಳನ್ನು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ನೇತೃತ್ವದಲ್ಲಿ ಇಂದು ವಿತರಿಸಲಾಯಿತು.
ಗ್ಯಾರಂಟಿ ಕಾರ್ಡ್ ವಿತರಿಸಿ ಮಾತನಾಡಿದ ರೇಖಾ ರಂಗನಾಥ್, ಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಪಕ್ಷದ ಪ್ರಣಾಳಿಕೆಯಂತೆ, ಪ್ರತಿ ಮನೆಯ ಯಜಮಾನಿಗೆ ಎರಡು ಸಾವಿರ ರೂ.ಹಾಗೂ ಇನ್ನೂರು ಯೂನಿಟ್ ವಿದ್ಯುತ್ ಹಾಗೂ 10 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುವುದು. ಇದು ಭರವಸೆಯಲ್ಲ. ಬಡವರ ಬದುಕಿಗೆ ಕಾಂಗ್ರೆಸ್ ಪಕ್ಷ ನೀಡುತ್ತಿರುವ ಗ್ಯಾರಂಟಿ ಎಂದರು.
ಈ ಸಂದರ್ಭದಲ್ಲಿ ಯುವ ಮುಖಂಡ ಕೆ.ರಂಗನಾಥ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಯುವ ಕಾಂಗ್ರೆಸ್‌ನ ಕಾಂಗ್ರೆಸ್‌ನ ಉಪಾಧ್ಯಕ್ಷ ಕೆ.ಎಲ್. ಪವನ್, ಹೊಸಮನೆ ವಾರ್ಡ್ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ, ಧನಲಕ್ಷ್ಮಿ, ರೇಣುಕಮ್ಮ ಹಾಗೂ ಇತರರು ಇದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















