ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಸನಗರ ತಾಲೂಕಿನ ಕೊಡಚಾದ್ರಿಯ ಸರ್ವಜ್ಞ ಪೀಠದಿಂದ – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದವರೆಗೆ ಕೇಬಲ್ ಕಾರ್ ಅಳವಡಿಸುವ ಕಾರ್ಯ ಯೋಜನೆಯ ಹಿನ್ನೆಲೆಯಲ್ಲಿ ಕೇಂದ್ರದ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ, ಸರ್ವೆ ಕಾರ್ಯ ನಡೆಸಿದೆ.
ಕೇಂದ್ರ ಭೂಸಾರಿಗೆ ಮಂತ್ರಾಲಯದ National Highways Logistics Management Limited ಅಧಿಕಾರಿಗಳ ತಂಡವು ಡಿಪಿಆರ್ ಮತ್ತು ಪತನ ನಕ್ಷೆಯನ್ನು ಅಂತಿಮಗೊಳಿಸಲು ಹಾಗೂ ಡಿಪಿಆರ್ ಅನುಮೋದನೆಗೆ ಇರುವ ತೊಡಕುಗಳ ಬಗ್ಗೆ ಅಭ್ಯಾಸ ಮಾಡಿ, ಪರಿಶೀಲಿಸುವ ನಿಟ್ಟಿನಲ್ಲಿ ಎರಡು ದಿನದ ಸರ್ವೇ ಕಾರ್ಯ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಇನ್ನು, ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಭೇಟಿಯಾದ ಅಧಿಕಾರಿಗಳ ತಂಡ ವಿವರವಾಗಿ ಚರ್ಚೆ ನಡೆಸಿದ್ದಾರೆ. ಕೇಂದ್ರದ ಪರ್ವತ ಮಾಲಾ ಅಡಿಯಲ್ಲಿ ಬರುವ ನೂತನ ಕೇಬಲ್ ಕಾರ್ ಯೋಜನೆಯು ಶೀಘ್ರ ಅಳವಡಿಸುವ ಕಾರ್ಯ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೊಡಚಾದ್ರಿಯಿಂದ ಕೊಲ್ಲೂರಿನವರೆಗೆ ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ ತೊಡಕುಗಳನ್ನು ಪರಿಹರಿಸಲು ಪ್ರವಾಸೋಧ್ಯಮ ಇಲಾಖೆ, ಅರಣ್ಯ ಇಲಾಖೆ, ರಾಷ್ಟೀಯ ಹೆದ್ದಾರಿ ಅಧಿಕಾರಿಗಳ ಜೊತೆಗೆ ಸೇರಿ ಪರಿಹರಿಸಿ, ಕನಿಷ್ಠ ಒಂದು ತಿಂಗಳ ಅವಧಿಯಲ್ಲಿ ಡಿಪಿಆರ್ ಮಂಜೂರಾತಿ ಪಡೆಯುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಎನ್’ಎಚ್’ಎಲ್’ಎಂಎಲ್ ಹಿರಿಯ ಮ್ಯಾನೇಜರ್ ಅನುರಾಗ್ ತ್ರಿಪಾಟಿ, ಎನ್’ಎಚ್’ಎಲ್’ಎಂಎಲ್ ಬೆಂಗಳೂರು ಮ್ಯಾನೇಜರ್ ರೀನಾ ಪವಾರ್, ರಾಷ್ಟ್ರೀಯ ಹೆದ್ದಾರಿ ಇಲಾಖೆ ಶಿವಮೊಗ್ಗದ ಪೀರ್ ಪಾಷಾ, ಡಿಪಿಆರ್ ಕನ್ಸಲ್ಟೆಂಟ್ ಶ್ರವಣ ಕುಮಾರ್, ಪ್ರವಾಸೋದ್ಯಮ ಇಲಾಖೆಯ ಗುರುಪ್ರಸಾದ್, ವೆಂಕಟೇಶ್ ಕಿಣಿ, ಶಿವಕುಮಾರ್ ವನ್ಯಜೀವಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post