ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ರಿಪ್ಪನ್’ಪೇಟೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರ ಪೂರ್ಣ ಸಹಕಾರದೊಂದಿಗೆ ತಾಲೂಕಿನ ಸಮಗ್ರ ಅಭಿವೃದ್ಧಿಯ ಪರ್ವ ನಡೆಯುತ್ತಿದೆ ಎಂದು ಎಂಎಸ್’ಐಎಲ್ ಅಧ್ಯಕ್ಷ, ಶಾಸಕ ಎಚ್. ಹಾಲಪ್ಪ ಹೇಳಿದರು.
ರಿಪ್ಪನ್’ಪೇಟೆಯಲ್ಲಿ 50 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನ ಅಂಬೇಡ್ಕರ್ ಭವನ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ತಾಲೂಕಿನ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ದವಾಗಿದೆ. ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿಗಳು ಹಾಗೂ ಸಂಸದರೂ ಎಲ್ಲ ರೀತಿಯಲ್ಲೂ ಸಹಕಾರ ನೀಡುತ್ತಾ, ಅನುದಾನು ನೀಡುತ್ತಿರುವುದು ಸಂತಸದ ವಿಚಾರ ಎಂದರು.
ಅಖಂಡ ಜನಬೆಂಬಲದೊಂದಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಯಶಸ್ವಿಯಾಗಿ, ಯುವನಾಯಕರಾಗಿ ಪ್ರಕಾಶಿಸುತ್ತಿರುವ ಬಿ.ವೈ. ರಾಘವೇಂದ್ರ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದವರು ಅಭಿಪ್ರಾಯಪಟ್ಟರು.
ಇನ್ನು, ಹಾಲಪ್ಪನವರು ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರು, ಬಾಳೂರು ಗ್ರಾಪಂ ವ್ಯಾಪ್ತಿಯ 441.33 ಲಕ್ಷ ರೂ. ವೆಚ್ಚದ, ಗವಟೂರು-ನೇರಲಮನೆ-ಪೂಜಾರದಿಂಬ 5.37 ಕಿಮೀ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿ, ನಂತರ 10 ಲಕ್ಷ ರೂ. ವೆಚ್ಚದಲ್ಲಿ ಮಾವಿನಸರದ ಸಾರ್ವಜನಿಕ ಸಭಾಭವನದ ಕಾಮಗಾರಿಗೆ ಪೂಜೆ ನೆರವೇರಿಸಿದರು.
50 ಲಕ್ಷ ರೂ. ವೆಚ್ಚದ ಹೊಸನಗರ ಪಟ್ಟಣದ ಈಡಿಗ ಸಂಘದ ಸಮುದಾಯ ಭವನ ಕಾಮಗಾರಿ ವೀಕ್ಷಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಹೊಸನಗರ ಪಟ್ಟಣದ ದುರ್ಗಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, 20 ಲಕ್ಷ ರೂ. ವೆಚ್ಚದ ಸಾರ್ವಜನಿಕ ಸಮುದಾಯ ಭವನ ಕಾಮಗಾರಿಗೆ ಪೂಜೆ ನೆರವೇರಿಸಿ. ನಂತರ ಸುತ್ತಾ ಗ್ರಾಪಂ ವ್ಯಾಪ್ತಿಯಲ್ಲಿ 30 ಲಕ್ಷ ರೂ. ವೆಚ್ಚದ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜದ ಸಾರ್ವಜನಿಕ ಸಮುದಾಯ ಭವನ ಕಾಮಗಾರಿ ಪೂಜೆ ನೆರವೇರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬಾಳೆಹಳ್ಳಿ ಸಮೀಪದ ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆ. 77 ರ (ಬ್ರಹ್ಮೇಶ್ವರ) 485.47 ಲಕ್ಷ ರೂ ವೆಚ್ಚದ 5.76 ಕಿ.ಮೀ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post