ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಸರ್ಕಾರ ಮುಸ್ಲಿಮರನ್ನು ಓಲೈಸಿಕೊಂಡು ತುಷ್ಟಿಕರಣದ ರಾಜಕೀಯ ಮಾಡಿ ಮತಬ್ಯಾಂಕ್ ಗಟ್ಟಿಗೊಳಿಸಲು ಈಗ ವಸತಿ ಜಿಹಾದ್ ಮಾಡಲು ಹೊರಟಿದೆ ಎಂದು ರಾಷ್ಟ್ರಭಕ್ತರ ಬಳಗದ ಯುವ ಮುಖಂಡ ಕೆ.ಇ. ಕಾಂತೇಶ್ #K E Kantesh ಕಿಡಿಕಾರಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಇಂದು ಮಾತನಾಡಿದ ಅವರು, ಈ ಹಿಂದೆ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿ ಇನ್ನುಳಿದ ಧರ್ಮೀಯರಿಗೆ ಅನ್ಯಾಯ ಮಾಡಿದ್ದ ಸಿದ್ದರಾಮಯ್ಯನವರ #Siddaramaiah ಸರ್ಕಾರ ಈಗ ವಸತಿ ಯೋಜನೆಯಡಿಯಲ್ಲಿ ನಿರ್ಮಾಣವಾಗುವ ಮನೆಗಳಲ್ಲಿ ಮುಸ್ಲಿಮರಿಗೆ 15% ಮೀಸಲಿಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಬುದ್ಧ, ಬಸವ, ಅಂಬೇಡ್ಕರ್ ಹೆಸರು ಹೇಳುವ ಸಿದ್ದರಾಮಯ್ಯನವರು ಬಾಬಾ ಸಾಹೇಬ್ ಅಂಬೇಡ್ಕರ್ #Ambedkar ಅವರು ವಿರೋಧಿಸಿದ್ದ ಧರ್ಮಾದಾರಿತ ಮೀಸಲಾತಿಯನ್ನು ಅವರ ತತ್ವಕ್ಕೆ ತಿಲಾಂಜಲಿ ಇಡುತ್ತಿದ್ದಾರೆ ಎಂದರು.
ಸರ್ಕಾರದ ಸಂವಿಧಾನ ವಿರೋಧಿಯಾದ ಈ ನಿರ್ಧಾರವನ್ನು ಕೂಡಲೆ ಹಿಂಪಡೆಯಬೇಕು ಎಂಬ ಬೇಡಿಕೆಯನ್ನಿಟ್ಟು ಕೆ.ಎಸ್.ಈಶ್ವರಪ್ಪನವರ ನೇತೃತ್ವದಲ್ಲಿ ಜೂ.25ರ ಬುಧವಾರ ಬೆಳಿಗ್ಗೆ 10 ಗಂಟೆಗೆ ರಾಮಣ್ಣ ಶೆಟ್ಟಿ ಪಾರ್ಕ್‌ನಿಂದ ಶಿವಪ್ಪನಾಯಕ ವೃತ್ತದವರೆಗೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದು. ಇದು ಸರ್ಕಾರಕ್ಕೆ ಮೊದಲ ಎಚ್ಚರಿಕೆಯಾಗಿದ್ದು ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು.
ಈ ಹಿಂದೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಳ ಅಭಿವೃದ್ಧಿಗೆ ಮೀಸಲಿಟ್ಟ ಸಾವಿರಾರು ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡು ಅನ್ಯಾಯ ಮಾಡಿದ ಸಿದ್ದರಾಮಯ್ಯ ಸರ್ಕಾರ ಈಗ ವಸತಿ ಯೋಜನೆಯ ಮನೆಗಳನ್ನು ಈ ಸಮುದಾಯದ ಜನರಿಂದ ಕಸಿದುಕೊಂಡು ಅಲ್ಪಸಂಖ್ಯಾತರಿಗೆ ವಿತರಿಸಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post