No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೈವಿಕ ಎಥೆನಾಲ್, ಡೀಸಲ್, ಬಯೋಗ್ಯಾಸ್ ಹೇಗೆ ತಯಾರಾಗುತ್ತದೆ? ಇದರ ಪ್ರಯೋಜನಗಳೇನು?

kalpa News by kalpa News
January 21, 2025
in ಶಿವಮೊಗ್ಗ
0
ಜೈವಿಕ ಎಥೆನಾಲ್, ಡೀಸಲ್, ಬಯೋಗ್ಯಾಸ್ ಹೇಗೆ ತಯಾರಾಗುತ್ತದೆ? ಇದರ ಪ್ರಯೋಜನಗಳೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಾಗತಿಕ ತಾಪಮಾನ ಏರುತ್ತಿರುವ  ಹಾಗೂ ಪೆಟ್ರೋಲಿಯಂ ಇಂಧನಗಳ ವೆಚ್ಚವು ಹೆಚ್ಚಾಗುತ್ತಿರುವ ಈಗಿನ ಕಾಲದಲ್ಲಿ ಜೈವಿಕ ಇಂಧನಗಳ #Bio-Fuel ಬಳಕೆಯು ಹಾಗೂ ಜೈವಿಕ ಇಂಧನ  ತಯಾರಿಕೆಗೆ ಸೂಕ್ತವಾದ ಮರಗಳಾದ ಹಿಪ್ಪೆ, ಹೊಂಗೆ, ಬೇವು, ಕಾಡು ಔಡಲ, ಸೀಮರೂಬ ಹೀಗೆ ಮುಂತಾದ ಮರಗಳನ್ನು ಬೆಳೆಸುವುದು ಅತ್ಯವಶ್ಯಕವಾಗಿದೆ ಎಂದು ಕೃಷಿ ವಿವಿ ಜೈವಿಕ ಇಂಧನ ಉದ್ಯಾನ ಪ್ರಧಾನ ಸಂಶೋಧಕರಾದ ಡಾ.ಹೊನ್ನಪ್ಪ ತಿಳಿಸಿದರು.

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಹೊಸಗೊದ್ದನಕೊಪ್ಪ ಹಾಗೂ ಹಳೇಮುಗಳಗೆರೆ ಗ್ರಾಮಗಳಲ್ಲಿ ಆಯೋಜಿಸಲಾಗಿದ್ದ ಜೈವಿಕ ಇಂಧನ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜೈವಿಕ ಇಂಧನ ಎಂಬುದು ಸಸ್ಯ ಮತ್ತು ಪ್ರಾಣಿಗಳಿಂದ ನವೀಕರಿಸಬಹುದಾದ ಶಕ್ತಿ ಮೂಲವಾಗಿದೆ. ಇವುಗಳನ್ನು ಪೆಟ್ರೋಲ್ ಮತ್ತು ಡಿಸೇಲ್ ನಂತೆಯೇ ಸಾಂಪ್ರದಾಯಿಕ ಪಳಿಯುಳಿಕೆ ಇಂಧನವಾಗಿ ವಿನ್ಯಾಸ ಮಾಡಲಾಗಿದೆ. ಎಥೆನಾಲ್, ಬಯೋಡಿಸೇಲ್ ಮತ್ತು ಬಯೋಗ್ಯಾಸ್’ನಂತಹ ವಿವಿಧ ಬಗೆಯ ಜೈವಿಕ ಇಂಧನಗಳಿವೆ. ಜೈವಿಕ ಇಂಧನಗಳು ಕಡಿಮೆ ಹಸಿರುಮನೆ ಅನಿಲ ಹೊರಸೂಸುವಿಕೆ, ಅನಿಲ ಆಮದು ಮೇಲಿನ ಅವಲಂಬನೆ ಮತ್ತು ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಉತ್ತೇಜನದಂತಹ ಅನೇಕ ಪ್ರಯೋಜನವನ್ನು ಹೊಂದಿದೆ ಎಂದರು.
ಜೈವಿಕ ಇಂಧನ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ನಡೆಯುತ್ತಿದ್ದು, ಈಗಾಗಲೇ ಹಲವು ಜೈವಿಕ ಇಂಧನ ಬಳಕೆಯಲ್ಲಿದೆ. ಈ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕ ತಿಳುವಳಿಕೆ ಅಗತ್ಯವಿದೆ ಎಂದು ತಿಳಿಸಿದರು.

Also read: ಹಸುವಿನ ಕೆಚ್ಚಲಲ್ಲಿ ಸರಿಯಾಗಿ ಹಾಲು ಕರೆಯುವ ಕ್ರಮ ಹೇಗೆ? ಇಲ್ಲಿದೆ ಮಾಹಿತಿ

ಜೈವಿಕ ಇಂಧನ ಸ್ವರೂಪ, ಜೈವಿಕ ಇಂಧನ ಪಡೆಯಬಹುದಾದ ವೃಕ್ಷಗಳು, ಜೈವಿಕ ಇಂಧನ ಉತ್ಪಾದನೆ ಹಂತಗಳ ಬಗ್ಗೆ ವಿವರಿಸಿದರು. ಜೈವಿಕ ಇಂಧನ ಉಪ ಉತ್ಪನ್ನಗಳ ತಯಾರಿಕೆ ಮತ್ತು ನಿರ್ವಹಣೆ, ಜೈವಿಕ ಇಂಧನ ಉದ್ಯಾನದ ಕಾರ್ಯ ಚಟುವಟಿಕೆಗಳನ್ನು ಮತ್ತು ಜೈವಿಕ ಇಂಧನದಿಂದ ಪರಿಸರಕ್ಕೆ, ರೈತರಿಗೆ ಹಾಗೂ ವಾಹನ ಬಳಕೆ ಮಾಡುವವರಿಗೆ ಆಗುವ ಉಪಯೋಗಗಳ ಕುರಿತು ವಿವರಿಸಿದರು.

ಜೈವಿಕ ಇಂಧನದ ಮೂಲಗಳು

  1. ಜೈವಿಕ ಏಥನಾಲ್: ಇದನ್ನು ಸಿಹಿಗೆಣಸು, ಸಿಹಿಬೀಟ್ರೂಟ್, ಸಿಹಿಜೋಳ ಹಾಗೂ ಕೃಷಿ ತ್ಯಾಜ್ಯಗಳಾದ ಕಬ್ಬಿನ ಸಿಪ್ಪೆ, ಭತ್ತದ ಹುಲ್ಲು, ನಿರುಪಯುಕ್ತ ಹಣ್ಣುಗಳಿಂದ ತಯಾರಿಸಲಾಗುತ್ತದೆ.
  2. ಜೈವಿಕ ಡೀಸಲ್: ಇದನ್ನು ಅಖಾದ್ಯ ತೈಲ ಬೀಜಗಳು ಹಾಗೂ ಪ್ರಾಣಿಗಳ ಕೊಬ್ಬಿನಿಂದ ಮಾಡಲಾಗುತ್ತದೆ.
  3. ಬಯೋ ಗ್ಯಾಸ್ ಇದನ್ನು ಸಕ್ಕರೆ ಕಾರ್ಖಾನೆಗಳಲ್ಲಿ ದೊರೆಯುವ ತ್ಯಾಜ್ಯ ವಸ್ತುಗಳು ಹಾಗೂ ಅನುಪಯುಕ್ತ ಆಹಾರ ಪದಾರ್ಥಗಳನ್ನು ಬಳಸಿಕೊಂಡು ತಯಾರಿಸಲಾಗುತ್ತದೆ.

ಜೈವಿಕ ಇಂಧನದ ಪ್ರಯೋಜನಗಳು

  • ನವೀಕರಿಸಬಹುದಾದ ಜೈವಿಕ ಇಂಧನಗಳಲ್ಲಿ ಗಂಧಕದ ಪ್ರಮಾಣವು ಕಡಿಮೆ ಇರುತ್ತದೆ.
  • ರೈತರು ಹಾಗೂ ಕೃಷಿ ಕಾರ್ಮಿಕರಿಗೆ ಎಣ್ಣೆ ಬೀಜಗಳ ಮಾರಾಟದಿಂದ ನೇರ ಆರ್ಥಿಕ ಲಾಭ.
  • ಡೀಸಲ್’ನೊಂದಿಗೆ ಬೆರೆಸಿ ಅಥವಾ ಡೀಸೆಲ್ ಗೆ ಬದಲಿಯಾಗಿ ಬಳಸಬಹುದು.
  • ಜೈವಿಕ ಇಂಧನ ಬಳಸುವುದರಿಂದ ಸ್ಥಳೀಯ ಸಂಪನ್ಮೂಲಗಳ ಬಳಕೆ ಹಾಗೂ ಇಂಧನ ಸ್ವಾವಲಂಬನೆಯಾಗಿಬಹುದು.
  • ಹಲವರಿಗೆ ಉದ್ಯೋಗಾವಕಾಶಗಳು ಸಿಗಲಿದೆ. ಬೀಜ ಸಂಗ್ರಹಣೆ ಹಾಗೂ ಮಾರಾಟದಿಂದ ರೈತರು, ಕೃಷಿ ಕಾರ್ಮಿಕರು ಲಾಭ ಪಡೆಯಬಹುದು.
  • ಜೈವಿಕ ಇಂಧನ ಪೆಟ್ರೋಲಿಯಂ ಇಂಧನಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕಾರ್ಬನ್ ಆಕ್ಸೆಡ್’ಗಳನ್ನು ವಾತಾವರಣಕ್ಕೆ ಬಿಡುತ್ತದೆ ಎಂದು ಸಂಶೋಧನೆಗಳು ಹೇಳಿವೆ. ಜೈವಿಕ ಇಂಧನವು ಪರಿಸರಸ್ನೇಹಿ ಹಾಗೂ ನವೀಕರಿಸಬಹುದಾದ ಇಂಧನವಾಗಿದೆ.
  • ಜೈವಿಕ ಇಂಧನದಲ್ಲಿ ಗಂಧಕದ ಪ್ರಮಾಣ ಅತ್ಯಂತ ಕಡಿಮೆಯಾಗಿದೆ. ನಿರ್ವಹಣೆ, ಸಂಗ್ರಹಣೆ ಮತ್ತು ಸಾಗಣೆಯು ಸುರಕ್ಷಿತವಾಗಿರುತ್ತದೆ.
  • ಇದರ ಬಳಕೆಯಿಂದ ಇಂಜಿನ್ನ ಕಾರ್ಯಕ್ಷಮತೆ ಹೆಚ್ಚಿಸಿ, ಇಂಜಿನ್ ಬಾಳಿಕೆಯನ್ನು ಹೆಚ್ಚಿಸುತ್ತದೆ.
  • ಜೈವಿಕ ಇಂಧನಕ್ಕಾಗಿ ಮರಗಳನ್ನು ಬೆಳೆಯುವುದರಿಂದ ಮಣ್ಣಿನ ಸವಕಳಿಯನ್ನು ತಡೆಯಬಹುದು ಮತ್ತು ಮಣ್ಣಿನ ತೇವಾಂಶ ಕಾಪಾಡುತ್ತದೆ.
  • ಈ ತರಬೇತಿ ಕಾರ್ಯಕ್ರಮದಲ್ಲಿ ವಿವಿಧ ಮರಗಳ ಬೀಜಗಳಿಂದ ತಯಾರಿಸಲಾಗಿದ್ದ ಡೀಸೆಲ್ ಗಳನ್ನು ತೋರಿಸಿ, ರೈತರಿಗೆ ಸಸಿಗಳನ್ನು ವಿತರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

  

Tags: Bio FuelKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಜೈವಿಕ ಇಂಧನಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಸುವಿನ ಕೆಚ್ಚಲಲ್ಲಿ ಸರಿಯಾಗಿ ಹಾಲು ಕರೆಯುವ ಕ್ರಮ ಹೇಗೆ? ಇಲ್ಲಿದೆ ಮಾಹಿತಿ

Next Post

ಬಜೆಟ್’ಗೂ ಮುನ್ನವೇ ಬಿಯರ್ ಬೆಲೆ ಹೆಚ್ಚಿಸಿದ ರಾಜ್ಯ ಸರ್ಕಾರ

kalpa News

kalpa News

Next Post
ಬಜೆಟ್’ಗೂ ಮುನ್ನವೇ ಬಿಯರ್ ಬೆಲೆ ಹೆಚ್ಚಿಸಿದ ರಾಜ್ಯ ಸರ್ಕಾರ

ಬಜೆಟ್'ಗೂ ಮುನ್ನವೇ ಬಿಯರ್ ಬೆಲೆ ಹೆಚ್ಚಿಸಿದ ರಾಜ್ಯ ಸರ್ಕಾರ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL