ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ 150 ಕೇಂದ್ರಗಳಲ್ಲಿ ನಡೆದ ವಿನೂತನ ಬಹು ಆಯ್ಕೆಯ ಮಾದರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಸುಗಮವಾಗಿ ನಡೆಯಿತು.
ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಶೇ. 98.9 ವಿದ್ಯಾರ್ಥಿಗಳು ಹಾಗೂ ಸಮಾಜ ವಿಜ್ಞಾನ ವಿಷಯದಲ್ಲಿ ಶೇ.99 ವಿದ್ಯಾರ್ಥಿಗಳು ಹಾಜರಾಗಿದ್ದರು.
ಗಣಿತ ವಿಷಯದಲ್ಲಿ ಒಟ್ಟು 24004 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 23762 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟು 87 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ವಿಜ್ಞಾನ ವಿಷಯದಲ್ಲಿ 23774 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 23536 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ. ಒಟ್ಟು 76 ವಿದ್ಯಾರ್ಥಿಗಳು ಗೈರಾಗಿರುತ್ತಾರೆ. ಸಮಾಜ ವಿಜ್ಞಾನ ವಿಷಯದಲ್ಲಿ 23097 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 22879 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 66 ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ.
ಅನಾರೋಗ್ಯ ಕಾರಣದಿಂದ ಒಟ್ಟು 6 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದು, ಕೋವಿಡ್ ಪಾಸಿಟಿವ್ ಇದ್ದ ಇಬ್ಬರು ವಿದ್ಯಾರ್ಥಿಗಳು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಡಿಡಿಪಿಐ ಎನ್.ಎಂ.ರಮೇಶ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post