ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಜಿಲ್ಲೆಯಲ್ಲಿ ಒಟ್ಟು 06 ನಾಮಪತ್ರಗಳ ಸಲ್ಲಿಕೆಯಾಗಿದೆ.
ಭದ್ರಾವತಿ-112 ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ(ಕೆ.ಆರ್.ಎಸ್) ಸುಮಿತ್ರಾ ಬಾಯಿ 01 ನಾಮಪತ್ರ, ಶಿವಮೊಗ್ಗ-113 ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜೇಂದ್ರ ಡಿ ಇವರು 01 ನಾಮಪತ್ರ, ಸೊರಬ-116 ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಟಿ.ಮಂಜುನಾಥ ಇವರು 02 ನಾಮಪತ್ರಗಳು, ಸಾಗರ-117 ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಹೆಚ್ ಹಾಲಪ್ಪ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ತೀ.ನ.ಶ್ರೀನಿವಾಸ ತಲಾ 01 ಸೇರಿ ಒಟ್ಟು 05 ಅಭ್ಯರ್ಥಿಗಳು 06 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ-111, ತೀರ್ಥಹಳ್ಳಿ-114 ಹಾಗೂ ಶಿಕಾರಿಪುರ-115 ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ.
Also read: ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ಮನುಷ್ಯನಿಗೆ ತಲುಪಿಸಿದ ಹಾಲಪ್ಪರನ್ನು ಗೆಲ್ಲಿಸಿ: ರಾಘವೇಂದ್ರ ಮನವಿ
ಈವರೆಗೆ ಜಿಲ್ಲೆಯ 07 ವಿಧಾನಸಭಾ ಕ್ಷೇತ್ರಗಳು 05 ಅಭ್ಯರ್ಥಿಗಳು 07 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post