ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ವಿಮಾನ ನಿಲ್ದಾಣದಿಂದ #Shivamogga Airport ದೇಶದ ವಿವಿಧ ನಗರಗಳಿಗೆ ಪ್ರಸಕ್ತ ವರ್ಷದಲ್ಲಿ 1.10 ಲಕ್ಷ ಜನರು ವಿಮಾನದಲ್ಲಿ ಪ್ರಯಾಣಿಸಿದ್ದಾರೆ ಎಂದು ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆರಂಭವಾದ ಮೊದಲ ವರ್ಷ 17,000 ಮಂದಿ ಹಾಗೂ ಎರಡನೇ ವರ್ಷದಲ್ಲಿ 92,000 ಮಂದಿ ಪ್ರಯಾಣಿಸಿದ್ದಾರೆ. ಅಲ್ಲದೇ, ಪ್ರಸಕ್ತ ಸಾಲಿನಲ್ಲಿ 1.10ಲಕ್ಷ ಜನ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದಾರೆ ಎಂದು ತಿಳಿಸಿದರು.

ವಿಮಾನ ನಿಲ್ದಾಣದಲ್ಲಿ ತನಿಖಾ ತಂಡ ಸೂಚಿಸುವ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸದ ಕಾರಣ ಕಳೆದ ಬಾರಿ ವಿಧಿಸಿದ್ದ 30ಲಕ್ಷ ರೂ.ಗಳನ್ನು ಪಾವತಿಸಬೇಕಾದ್ದು ಬಾಕಿ ಇದ್ದು, ಶೀಘ್ರದಲ್ಲಿ ಪಾವತಿಸಲು ಕ್ರಮ ವಹಿಸಲಾಗುವುದು. ಅಲ್ಲದೇ ಈ ಹಿಂದೆ ತನಿಖಾ ತಂಡ ಗುರುತಿಸಿದ್ದ ಎಲ್ಲಾ ಲೋಪಗಳನ್ನು ಈಗಾಗಲೇ ಸರಿಪಡಿಸಿಕೊಳ್ಳಲಾಗಿದೆ. ಈ ಬಾರಿ ತನಿಖಾ ತಂಡ ಭೇಟಿ ನೀಡಿ ಪರಿಶೀಲಿಸಿದಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಪರವಾನಿಗೆ ನವೀಕರಣಗೊಳ್ಳಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ಮುಖ್ಯಸ್ಥ ಕ್ಯಾ. ಶಮಂತ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post