ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜನರು ಸೂಕ್ತ ದಾಖಲೆ ಅಥವಾ ಸಮಜಾಯಿಷಿಕೆ ಇಲ್ಲದೆ 50 ಸಾವಿರ ರೂ. ಗಿಂತ ಅಧಿಕ ನಗದನ್ನು ಕೊಂಡೊಯ್ಯಬಾರದು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಹೇಳಿದ್ದಾರೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಅವರು, ಯಾವುದೇ ಸಾಧನ, ಸಾಮಾಗ್ರಿಗಳನ್ನು ಸೂಕ್ತ ದಾಖಲೆಗಳಿಲ್ಲದೆ ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿಡುವುದು ಅಥವಾ ಸಾಗಾಟ ಮಾಡಬಾರದು ಎಂದವರು ತಿಳಿಸಿದ್ದಾರೆ.
ಜಾಹೀರಾತು ನಿರ್ಬಂಧ
ಚುನಾವಣಾ ಸಂದರ್ಭದಲ್ಲಿ ಯಾವುದೇ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಅಥವಾ ಸಾರ್ವಜನಿಕರಿಗೆ ಕಾಣಿಸುವ ರೀತಿಯಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿಯಿಲ್ಲದೆ ಜಾಹೀರಾತುಗಳನ್ನು ಪ್ರಚುರಪಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.
ಮುದ್ರಣ ನಿರ್ಬಂಧ
ಚುನಾವಣಾ ಸಂದರ್ಭದಲ್ಲಿ ಯಾವುದೇ ಚುನಾವಣಾ ಕರಪತ್ರ, ಫ್ಲಕಾರ್ಡ್, ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್, ಪೋಸರ್ ಇತ್ಯಾದಿಗಳನ್ನು ಮುದ್ರಿಸುವ ಸಂದರ್ಭದಲ್ಲಿ ಅದರಲ್ಲಿ ಮುದ್ರಕರ ಹೆಸರು, ವಿಳಾಸ, ಮುದ್ರಣ ಸಂಖ್ಯೆ ಇತ್ಯಾದಿ ವಿವರಗಳನ್ನು ಕಡ್ಡಾಯವಾಗಿ ನಮೂದಿಸಿರಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಮುದ್ರಣ ಕುರಿತಾಗಿ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ 3ದಿನಗಳ ಒಳಗಾಗಿ ಹಾಗೂ ಸಾಮಾಗ್ರಿಯ ಪ್ರತಿಯನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿ ಕಚೇರಿಗೆ ಒದಗಿಸಬೇಕು. ಇದರ ಉಲ್ಲಂಘನೆ ಪ್ರಜಾಪ್ರತಿನಿಧಿ ಕಾಯ್ದೆ 1951 ರ 127 (ಎ) ಉಲ್ಲಂಘನೆಯಾಗಿದೆ ಎಂದವರು ಆದೇಶದಲ್ಲಿ ತಿಳಿಸಿದ್ದಾರೆ.
ಪೂರ್ವಾನುಮತಿ ಕಡ್ಡಾಯ
ಚುನಾವಣಾ ಜಾಹೀರಾತುಗಳನ್ನು ಕೇಬಲ್ ನೆಟ್ವರ್ಕ್ ಅಥವಾ ಟಿವಿ ಚಾನೆಲ್’ಗಳಲ್ಲಿ ಪ್ರಸಾರ ಮಾಡುವ ಪೂರ್ವದಲ್ಲಿ ಕಡ್ಡಾಯವಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮತಿಯನ್ನು ಪಡೆದಿರಬೇಕು ಎಂದು ತಿಳಿಸಿದ್ದಾರೆ.
Also read: ಈ ಎಲ್ಲಾ ರೀತಿಯಲ್ಲಿ ಮತದಾರರಿಗೆ ಆಮಿಷವೊಡ್ಡಿದರೂ ಅದು ಅಪರಾಧ
ಸುಗಮ ಮತ್ತು ನ್ಯಾಯಯುತ ಚುನಾವಣಾ ಪ್ರಕ್ರಿಯೆಗಾಗಿ ಈಗಾಗಲೇ ಸ್ಟಾಟಿಕ್ ಸರ್ವೆಯಲೆನ್ಸ್ ತಂಡಗಳು, ವಿಡಿಯೋ ವೀಕ್ಷಣಾ ತಂಡಗಳು ಹಾಗೂ ಪ್ಲೈಯಿಂಗ್ ಸ್ಕ್ವಾಡ್’ಗಳನ್ನು ರಚಿಸಲಾಗಿದೆ. ಮುಕ್ತ, ಪಾರದರ್ಶಕ ಹಾಗೂ ಶಾಂತಿಯುತವಾಗಿ ಚುನಾವಣೆ ನಡೆಸಲು ಸಾರ್ವಜನಿಕರು ಸಹಕಾರ ನೀಡುವಂತೆ ಅವರು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post