ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಾದ್ಯಂತ ವರುಣನ ಅಬ್ಬರ ಮುಂದುವರೆದಿದ್ದು, ಭದ್ರಾ ಹಾಗೂ ಲಿಂಗನಮಕ್ಕಿ ಅಣೆಕಟ್ಟೆಗೆ #Bhadra-Linganamakki reservior ಒಂದೇ ದಿನ ಅಪಾರ ಪ್ರಮಾಣದ ನೀರು ಹರಿದುಬಂದಿದೆ.
ಲಿಂಗನಮಕ್ಕಿ ಜಲಾಶಯ:
ಉತ್ತಮ ಒಳಹರಿವಿರುವ ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನದಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದುಬಂದಿದೆ.

ಹೊರ ಹರಿವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದ್ದು, ಮಳೆ ನೀರನ್ನೇ ವಿದ್ಯುತ್ ಉತ್ಪಾದನೆಗೆ ಬಳಕೆ ಮಾಡಲಾಗುತ್ತಿದೆ. ಇಂದೂ ಸಹ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಲಿಂಗನಮಕ್ಕಿ ಜಲಾಶಯದ ಒಳ ಹರಿವು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ.

ಇನ್ನು, ಒಂದು ದಿನದಲ್ಲಿ ಭದ್ರಾ ಜಲಾಶಯದ ನೀರಿನ ಮಟ್ಟ 4.4 ಅಡಿ ಏರಿಕೆಯಾಗಿದೆ.
ಇಂದು ನೀರಿನ ಮಟ್ಟ 153 ಅಡಿಗೆ ತಲುಪಿದೆ. ಒಟ್ಟು 71.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಈಗ 36.740 ಟಿಎಂಸಿ ನೀರು ಸಂಗ್ರಹವಾಗಿದೆ.

ಇನ್ನು, ಮಳೆ ಕುರಿತಂತೆ ಹವಾಮಾನ ಇಲಾಖೆ ವರದಿ ಬಿಡುಗಡೆ ಮಾಡಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 18 ಹಾಗೂ 19ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಅತೀ ಧಾರಾಕಾರ ಮಳೆ ಸುರಿಯಲಿದೆ ಎಂದಿದೆ.
Also read: ಉಪ್ಪಿನಂಗಡಿ | ಐರಾವತ ಬಸ್’ನಲ್ಲಿ ಅಗ್ನಿ ಆಕಸ್ಮಿಕ | ಬೆಂಕಿ ನಂದಿಸಲು ನೆರವಾಗಿದ್ದು ಯಾವ ನೀರು ನೋಡಿ
ಇದರ ಬೆನ್ನಲ್ಲೇ ಈ ಆರೂ ಜಿಲ್ಲೆಗಳಲ್ಲಿ ಜುಲೈ 20 ಹಾಗೂ 21ರಂದು ಆರೆಂಜ್ ಮತ್ತು ಜುಲೈ 22ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








Discussion about this post