ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಲ್ಲಾ ವರ್ಗದ ಜನರಿಗೂ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಮಣಿಪಾಲ್‍ನ ಕಸ್ತೂರಿಬಾ ಆಸ್ಪತ್ರೆ ಮಣಿಪಾಲ್ ಆರೋಗ್ಯ ಕಾರ್ಡ್‍ನ್ನು #Manipal Health Card ಪರಿಚಯಿಸುತ್ತಿದ್ದು, ಪ್ರಸಕ್ತ ವರ್ಷದ ಮಣಿಪಾಲ್ ಆರೋಗ್ಯ ಕಾರ್ಡ್ 2024 ನೊಂದಣಿ ಈಗಾಗಲೇ ಆರಂಭವಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ 23 ವರ್ಷಗಳಿಂದ ಮಣಿಪಾಲ್ ಆರೋಗ್ಯ ಕಾರ್ಡ್‍ನ್ನು ಪರಿಚಯಿಸಲಾಗುತ್ತಿದೆ. ಕಳೆದ ಸಾಲಿನಲ್ಲಿ 3.60 ಲಕ್ಷ ಸದಸ್ಯರು ಕಾರ್ಡ್‍ನ್ನು ನೊಂದಾಯಿಸಿಕೊಂಡಿದ್ದರು. ಈ ಬಾರಿ 4 ಲಕ್ಷ ಗುರಿಯನ್ನು ಇಟ್ಟುಕೊಂಡಿದ್ದೇವೆ ಎಂದರು.

ಮಾಹೆಯ ಕುಲಾಧಿಪತಿ ಡಾ. ರಾಮದಾಸ್ ಪೈ ಅವರ ನೇತೃತ್ವದಲ್ಲಿ 2000 ರಲ್ಲಿ ಪ್ರಾರಂಭವಾದ ಮಣಿಪಾಲ್ ಆರೋಗ್ಯ ಕಾರ್ಡ್ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸಲು ಶ್ರಮಿಸುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಆರಂಭವಾಗಿ ಕರಾವಳಿ ಮತ್ತು ಮಧ್ಯ ಕರ್ನಾಟಕದ 12-15 ಜಿಲ್ಲೆಗಳಿಗೆ ವಿಸ್ತರಣೆಗೊಂಡಿದೆ ಎಂದರು.

Also read: ರೀಲ್ಸ್ ಶೋಕಿ | ಪ್ರಪಾತಕ್ಕೆ ಬಿದ್ದ ಕಾರು | ಯುವತಿ ಸಾವು | ಸ್ನೇಹಿತನ ವಿರುದ್ಧ ಕೇಸ್ | ಘಟನೆ ನಡೆದಿದ್ದೆಲ್ಲಿ
ಕಾರ್ಡ್‍ದಾರರು ಕಸ್ತೂರ್ಬಾ ಆಸ್ಪತ್ರೆ-ಮಣಿಪಾಲ, ಡಾ.ಟಿಎಂಎ ಪೈ ಆಸ್ಪತ್ರೆ-ಉಡುಪಿ, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ-ಕಾರ್ಕಳ, ಕೆಎಂಸಿ ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ-ಕಟೀಲು, ಮಣಿಪಾಲ ಆಸ್ಪತ್ರೆ-ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲ್ಲಿನ ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು ಎಂದರು.

ಶಿವಮೊಗ್ಗದ ಆರೋಗ್ಯ ಕಾರ್ಡ್‍ನ ಮುಖ್ಯ ಸಂಯೋಜಕ ನವೀನ್ ಕೆ.ಆರ್ ಮಾತನಾಡಿ, ಆರೋಗ್ಯ ಕಾರ್ಡ್ ಮಾಡಿಸುವರು. ಶಿವಮೊಗ್ಗದ ಶುಭಮಂಗಳ ಕಲ್ಯಾಣ ಮಂದಿರದ ಎದುರಿನಲ್ಲಿರುವ ನಮ್ಮ ಕಚೇರಿಗೆ ಬಂದು ನೊಂದಣಿ ಮಾಡಿಸಬಹುದು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಪ್ರತಿನಿಧಿ ಪ್ರವೀಣ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post